ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು […]









