ಗಂಡು ಹೆಣ್ಣಿನ ನಡುವೆ ಯಾವುದೇ ತಾರತಮ್ಯ ಬೇಡ: ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ► ಜಿ.ಪಂ. ವತಿಯಿಂದ ವಿಶ್ವ ಮಹಿಳಾ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.09. ಈಗಿನ ಮಹಿಳೆಯರು ಗಂಡಸರಿಗಿಂತ ಯಾವುದರಲ್ಲೂ ಕಮ್ಮಿ ಇಲ್ಲವಾದ್ದರಿಂದ ಮಹಿಳೆಯರು ಮೀಸಲಾತಿಯನ್ನೇ ಅವಲಂಬಿಸಿ ಇರಬಾರದು ಹಾಗೂ ಎಲ್ಲಾ ಮಹಿಳೆಯರು ಗಂಡಸರಿಗೆ ಸರಿಸಮಾನವಾಗಿ ಬೆಳೆಯಬೇಕು. ಗಂಡು ಹೆಣ್ಣಿನ ನಡುವೆ ತಾರತಮ್ಯ ಬೇಡ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು. ಅವರು ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ದ.ಕ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಆರ್.ರವಿ ಮಾತನಾಡಿ, ಮಹಿಳೆಯರನ್ನು ಒಂದು ದಿನಕ್ಕೆ […]








