ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ► ಕಳೆದ 14 ತಿಂಗಳಲ್ಲೇ ಗರಿಷ್ಠ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.25. ಕಳೆದ 14 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದ್ದು, ಪ್ರಸ್ತುತ 10 ಗ್ರಾಂ. ಚಿನ್ನದ ದರ 31,450 ರೂ.ಗೆ ಏರಿದೆ. ಚಿನ್ನದ ದರ ಒಂದೇ ದಿನದಲ್ಲಿ 350 ರೂ. ಏರಿಕೆ ಕಂಡಿದೆ. ಸ್ಥಳೀಯ ವ್ಯಾಪಾರಿಗಳು ಆಭರಣ ಖರೀದಿಸುವುದು ಹೆಚ್ಚಾಗಿರುವುದರಿಂದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ‌. ಬೆಳ್ಳಿಯ ಬೆಲೆಯಲ್ಲೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 41 ಸಾವಿರವಾಗಿದ್ದು, ಪ್ರತೀ ಕೆಜಿಯಲ್ಲಿ 1,100 ರೂ. ರೂಪಾಯಿ ಏರಿಕೆಯಾಗಿದೆ.

ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ► ಕಳೆದ 14 ತಿಂಗಳಲ್ಲೇ ಗರಿಷ್ಠ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕಳಾರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಪೌಷ್ಟಿಕ ಆಹಾರ ಸಪ್ತಾಹ

(ನ್ಯೂಸ್ ಕಡಬ) newskadaba.com ಕಡಬ, ಜ.25. ಕಡಬ ಗ್ರಾ.ಪಂ.ವ್ಯಾಪ್ತಿಯ ಕಳಾರ ಅಂಗನವಾಡಿ ಕೇಂದ್ರದಲ್ಲಿ ಜ.24ರಂದು ಬಾಲವಿಕಾಸ ಸಮಿತಿಯ ವತಿಯಿಂದ ಬಾಲಮೇಳ ಕಾರ್ಯಕ್ರಮ, ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‍ರವರು ಉದ್ಘಾಟಿಸಿ ಮಾತನಾಡಿ ಸರಕಾರ ಅಂಗನವಾಡಿಗಳ ಮೂಲಕ ಗರ್ಭಿಣಿ ಬಾಣಂತಿಯರಿಗೆ, ಮಕ್ಕಳಿಗೆ ಅನೇಕ ಯೋಜನೆಗಳನ್ನು ಕೈಗೊಂಡಿದ್ದು ಸಮಾಜದಲ್ಲಿ ಮಹಿಳೆಯರು ಸಬಲೀಕರಣ ಹೊಂದುವುದರೊಂದಿಗೆ ಪುಟಾಣಿಗಳು ದೇಶದ ಮುಂದಿನ ಶಕ್ತಿಗಳಾಗಿ ಬೆಳೆಯಬೇಕೆಂಬ ಆಶಯದಿಂದ ಅದೆಷ್ಟೋ ಯೋಜನೆಗಳನ್ನು ನೀಡುತ್ತಿದೆ. ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು

ಕಳಾರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ಪೌಷ್ಟಿಕ ಆಹಾರ ಸಪ್ತಾಹ Read More »

ಕರಾವಳಿ

ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ತ್ವರಿತ ಅರ್ಜಿ ವಿಲೇವಾರಿ ► ಕಡಬ ನಾಡಕಛೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ದ್ವಿತೀಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.25. ನಾಡಕಛೇರಿಯ ಅಟಲ್ ಜೀ ಜನಸ್ನೇಹಿ ಕೇಂದ್ರದಲ್ಲಿ ತ್ವರಿತ ಅರ್ಜಿ ವಿಲೇವಾರಿಗೆ ರ್ಯಾಂಕಿಂಗ್ ವ್ಯವಸ್ಥೆ ನೀಡಲಾಗುತ್ತಿದ್ದು, ಕಡಬ ನಾಡಕಛೇರಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸುರತ್ಕಲ್ ನಾಡಕಛೇರಿಯು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ 37 ನೇ ಸ್ಥಾನದಲ್ಲಿದೆ. ಕಡಬ ನಾಡಕಛೇರಿಯು ರಾಜ್ಯದಲ್ಲಿ 137 ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ 17 ನಾಡಕಛೇರಿಗಳ ಪೈಕಿ ಸಿಗ್ಮಾ 06.02 ರ್ಯಾಂಕಿನೊಂದಿಗೆ ಸುರತ್ಕಲ್ ಮೊದಲ ಸ್ಥಾನವನ್ನು

ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ತ್ವರಿತ ಅರ್ಜಿ ವಿಲೇವಾರಿ ► ಕಡಬ ನಾಡಕಛೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ದ್ವಿತೀಯ Read More »

ಕರಾವಳಿ

ರಬ್ಬರ್ ಟ್ಯಾಪಿಂಗ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.25. ರಬ್ಬರು ಮಂಡಳಿಯ ಬಂಟ್ವಾಳ ತಾಲೂಕಿನ ಕೆದ್ದಳಿಕೆಯಲ್ಲಿರುವ ರಬ್ಬರು ಟ್ಯಾಪಿಂಗ್ ಅಭಿವೃದ್ದಿ ತರಬೇತಿ ಶಾಲೆಯಲ್ಲಿ 30 ದಿನಗಳ ಟ್ಯಾಪಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಜನವರಿ 21 ರಂದು ಆರಂಭಗೊಂಡಿದ್ದು, ಆಸಕ್ತರು ನೇರವಾಗಿ ತರಬೇತಿ ಶಾಲೆಗೆ ಹಾಜರಾಗಿ ಅರ್ಜಿಯನ್ನು ನೀಡಿ ತರಬೇತಿಗೆ ಸೇರ್ಪಡೆಗೊಳ್ಳಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ ; 0824-2429229 ಅಥವಾ ಮೊ.ಸಂ 9448429100 ಸಂಪರ್ಕಿಸಲು ರಬ್ಬರ್ ಉತ್ಪಾದನಾ ಉಪ ಆಯುಕ್ತರ ಪ್ರಕಟನೆ ತಿಳಿಸಿದೆ.

ರಬ್ಬರ್ ಟ್ಯಾಪಿಂಗ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನಿಗೆ ನೆರವಾಗುವಿರಾ..?

(ನ್ಯೂಸ್ ಕಡಬ) newskadaba.com ಪುತ್ತೂರು, ಜ.25. ಎಲ್ಲರಂತೆ ನಡೆದಾಡಿ ಸುಂದರ ಜೀವನ ನಿರ್ವಹಿಸಬೇಕಿದ್ದ ಯುವಕನೋರ್ವ ಸುಮಾರು ಆರು ವರ್ಷಗಳಿಂದ ಕಿಡ್ನಿ ವೈಫಲ್ಯ ತೊಂದರೆಯಿಂದ ಬಳಲುತ್ತಿದ್ದು, ಇದೀಗ ಚಿಕಿತ್ಸೆಗಾಗಿ ದಾನಿಗಳ ನೆರವು ಯಾಚಿಸಿದ್ದಾರೆ. ಇಲ್ಲಿನ ಮೊಟ್ಟೆತಡ್ಕ ನಿವಾಸಿಯಾದ ಅಬ್ದುಲ್ ಶಕೀರ್(30) ಸುಮಾರು 6 ವರುಷಗಳಿಂದ ಎರಡು ಕಾಲಿನ ಶಕ್ತಿಯನ್ನು ಕಳೆದುಕೊಂಡು ನಡೆದಾಡಲು ಆಗದೆ ಕಷ್ಟಕರ ಜೀವನ ಸಾಗಿಸುತ್ತಿದ್ದಾನೆ. ವಯಸ್ಸಾದ ತಾಯಿ ಮತ್ತು ಮಗ ಒಂದು ಸಣ್ಣ ಬಾಡಿಗೆ ಮನೆಯಲ್ಲಿ‌ ವಾಸಮಾಡುತ್ತಿದ್ದಾರೆ. ಇವರ ದಯನೀಯ ಸ್ಥಿತಿ ನೋಡುಗರ ಕಣ್ಣಲ್ಲಿ ನೀರು

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನಿಗೆ ನೆರವಾಗುವಿರಾ..? Read More »

ಕರಾವಳಿ

ಬಂದ್ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತ ► ಬಸ್ ಸಂಚಾರವಿಲ್ಲದೆ ಪರದಾಡಿದ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.25. ಮಹದಾಯಿ ವಿಚಾರವಾಗಿ ಗುರುವಾರದಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಕರೆ ಅಷ್ಟೇನೂ ಪರಿಣಾಮ ಬೀಳುವುದಿಲ್ಲದಿದ್ದರೂ, ಸರಕಾರಿ ಬಸ್ಸುಗಳ ಸಂಚಾರ ಸ್ಥಗಿತಗೊಳಿಸಿರುವುದು ಜನಸಾಮಾನ್ಯರನ್ನು ಪರದಾಡುವಂತೆ ಮಾಡಿದೆ. ಕೆಲವು ಶಾಲೆಗಳಲ್ಲಿ ಪರೀಕ್ಷೆ ಇದ್ದರೂ ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಉಂಟಾಗಿದೆ.. ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ

ಬಂದ್ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತ ► ಬಸ್ ಸಂಚಾರವಿಲ್ಲದೆ ಪರದಾಡಿದ ಪ್ರಯಾಣಿಕರು Read More »

ಕರ್ನಾಟಕ

ಇಂದು(ಜ.25) ಕರ್ನಾಟಕ ಬಂದ್ ► ಪರೀಕ್ಷೆಗಳು ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.25. ಮಹದಾಯಿ ವಿಚಾರವಾಗಿ ಗುರುವಾರದಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಬಿ.ಎ., ಬಿ.ಕಾಂ., ಬಿ.ಬಿ.ಎಂ., ಬಿಎಸ್ಸಿ ಹಾಗೂ ಪಿ.ಜಿ. ಕೋರ್ಸ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪ್ರಥಮ ವರ್ಷದ ಪದವಿ ಪರೀಕ್ಷೆಗಳು ಫೆಬ್ರವರಿ 8 ರಂದು ನಡೆಯಲಿವೆ. 3 ನೇ ವರ್ಷದ ಬಿ.ಎ., ಬಿ.ಎಸ್ಸಿ. ಪರೀಕ್ಷೆಗಳನ್ನು ಫೆಬ್ರವರಿ 5 ಕ್ಕೆ ಮುಂದೂಡಲಾಗಿದೆ. 3 ನೇ ವರ್ಷದ ಬಿ.ಕಾಂ.,

ಇಂದು(ಜ.25) ಕರ್ನಾಟಕ ಬಂದ್ ► ಪರೀಕ್ಷೆಗಳು ಮುಂದೂಡಿಕೆ Read More »

ಕರ್ನಾಟಕ

ಹಿರಿಯ ಸಾಮಾಜಿಕ ಮುಂದಾಳು ಹಮೀದ್ ಕಂದಕ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.24. ಹಿರಿಯ ಸಾಮಾಜಿಕ ಮುಂದಾಳು, ಧಾರ್ಮಿಕ ನೇತಾರ ಹಾಜಿ ಹಮೀದ್ ಕಂದಕ್(68) ಬುಧವಾರ ಸಂಜೆ ಇಹಲೋಕ ತ್ಯಜಿಸಿದರು. ನಗರದ ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ನಡೆಯುತ್ತಿದ್ದ ಅಹಿಂದ ಕಾರ್ಯಕ್ರಮವೊಂದರಲ್ಲಿ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡುತ್ತಿದ್ದಾಗ ಹಮೀದ್ ಕಂದಕ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಯುನಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಟ್ರಾವೆಲ್ಸ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಮೀದ್ ಕಂದಕ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

ಹಿರಿಯ ಸಾಮಾಜಿಕ ಮುಂದಾಳು ಹಮೀದ್ ಕಂದಕ್ ಇನ್ನಿಲ್ಲ Read More »

ಕರಾವಳಿ

ವಿಟ್ಲ: ಮಹಿಳೆಯ ಜೊತೆ ಅನುಚಿತ ವರ್ತನೆ ► ಯುವಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ.24. ಜೆರಾಕ್ಸ್ ಮಾಡಿಸಲೆಂದು ಅಂಗಡಿಗೆ ಬಂದಿದ್ದ ಅನ್ಯ ಕೋಮಿನ ಯುವಕನೋರ್ವ ಅಂಗಡಿ ಮಾಲಕಿಯ ಜತೆ ಅಸಭ್ಯವಾಗಿ ವರ್ತಿಸಿ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ ಘಟನೆ ವಿಟ್ಲದಲ್ಲಿ ಬುಧವಾರ ರಾತ್ರಿ ನಡೆದಿದೆ. ವಿಟ್ಲ – ಮಂಗಳೂರು ರಸ್ತೆಯ ಜೆರಾಕ್ಸ್ ಅಂಗಡಿಯೊಂದಕ್ಕೆ ಬಂದ ಯುವಕನಿಗೆ ಮಹಿಳೆ ವಿದ್ಯುತ್ ಇಲ್ಲದೆ ಇರುವುದರಿಂದ ಬೇರೆ ಅಂಗಡಿಗೆ ತೆರಳಲು ಸೂಚಿಸಿದ್ದಾರೆ. ಆದರೆ ಯುವಕ ಮಹಿಳೆಯ ಮೊಬೈಲ್ ನಂಬರ್ ಕೇಳಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ತಕ್ಷಣ ಮಹಿಳೆಯು ಅಂಗಡಿಯ ಮುಂಭಾಗದಲ್ಲಿದ್ದ ತನ್ನ

ವಿಟ್ಲ: ಮಹಿಳೆಯ ಜೊತೆ ಅನುಚಿತ ವರ್ತನೆ ► ಯುವಕ ಪೊಲೀಸ್ ವಶಕ್ಕೆ Read More »

ಕರಾವಳಿ

ಸುಬ್ರಹ್ಮಣ್ಯ: ಕಾರು – ಆಟೋರಿಕ್ಷಾ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ.24. ಕಾರು ಹಾಗೂ ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಶಾಲಾ ವಿದ್ಯಾರ್ಥಿಗಳು ಸೇರಿ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯದ ಪರ್ವತಮುಖಿ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದ ಶಾಲೆಯೊಂದರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾಕ್ಕೆ ಪರ್ವತಮುಖಿ ಎಂಬಲ್ಲಿ ಮಾರುತಿ 800 ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಹಾಗೂ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಕಾರು – ಆಟೋರಿಕ್ಷಾ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಿಗೆ ಗಾಯ Read More »

ಕರಾವಳಿ
Scroll to Top