ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು: ಶಕುಂತಲಾ ಶೆಟ್ಟಿ ► ಕಡಬದ ಏಮ್ಸ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಜ. 01. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದು ಒಳ್ಳೆಯ ಅಂಕಗಳನ್ನು ಪಡೆಯಬೇಕೇ ವಿನಹಃ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು ಎಂದು ರಾಜ್ಯ ಸರಕಾರದ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಹೇಳಿದರು. ಅವರು ಸೋಮವಾರದಂದು ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಬೇಕಾಗಿರುವುದು ಪದವಿ ಅಲ್ಲ. ಬದಲಾಗಿ ತಾನು ಪಡೆದಿರುವ ಪದವಿಯಲ್ಲಿ ಸಮಾಜಕ್ಕೆ ಏನು ಕೊಟ್ಟಿದ್ದೇನೆ ಎನ್ನುವುದನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ […]









