ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಮಡಿಕೇರಿ, ನ.23. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಹಿಂಬದಿಯ ನಾಲ್ಕೂ ಚಕ್ರಗಳು ಒಟ್ಟಿಗೆ ಕಳಚಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಡಿಕೇರಿಯ ಸೋಮವಾರ ಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕೊಪ್ಪಳ ಎಂಬಲ್ಲಿ ತಲುಪಿದಾಗ ಹಿಂಬದಿಯ ಚಕ್ರಗಳು ಒಟ್ಟಾಗಿ ಚಾಸಿಸ್ ನಿಂದ ವಿಭಜನೆಗೊಂಡು ಹೊರಕ್ಕುರುಳಿದೆ. ಬಸ್ಸಿನಲ್ಲಿ ಉಂಟಾದ ಈ ಅವಘಡವನ್ನು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌. ಅದೃಷ್ಟವಶಾತ್ […]

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…? Read More »

ಕರ್ನಾಟಕ

ಚುನಾವಣೆಯಲ್ಲಿ ಗೆಲ್ಲಲು ನಾನು ವಾಮಾಚಾರ ಮಾಡಿಸಿ ಕೈ ಸುಟ್ಟುಕೊಂಡಿದ್ದೆ ► ಸತ್ಯ ಬಿಚ್ಚಿಟ್ಟ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.23. ತಾನು ಹಿಂದಿನ ಚುನಾವಣೆಯಲ್ಲಿ ಗೆಲ್ಲಲು ವಾಮಾಚಾರದ ಮೊರೆ ಹೋಗಿದ್ದೆ. ಆದರೆ ಚುನಾವಣೆಯಲ್ಲಿ ಅಂದು ಗೆಲ್ಲದೇ 1.50 ಲಕ್ಷ ಕಳೆದುಕೊಂಡಿದ್ದಾಗಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಹೇಳಿದರು. ಅವರು ಬುಧವಾರದಂದು ವಿಧಾನ ಪರಿಷತ್ ನಲ್ಲಿ, ಮೌಢ್ಯ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಹಲವು ವರ್ಷಗಳ ಹಿಂದಿನ ಮಾತನ್ನು ಬುಧವಾರದಂದು ಬಾಯಿ ಬಿಟ್ಟರು. ನಾನು ಚುನಾವಣೆಗೆ ನಿಂತುಕೊಂಡಾಗ, ಅಂದು ನನ್ನ ಬಳಿ ಇದ್ದ ಸಹಾಯಕರು ವಾಮಾಚಾರ ಮಾಡಿಸಿದರೆ

ಚುನಾವಣೆಯಲ್ಲಿ ಗೆಲ್ಲಲು ನಾನು ವಾಮಾಚಾರ ಮಾಡಿಸಿ ಕೈ ಸುಟ್ಟುಕೊಂಡಿದ್ದೆ ► ಸತ್ಯ ಬಿಚ್ಚಿಟ್ಟ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ Read More »

ಕರ್ನಾಟಕ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.23. ಹಿರಿಯ ಪತ್ರಕರ್ತ ಹಾಗೂ ಆಂದೋಲನ ಪತ್ರಿಕೆ ಸಂಸ್ಥಾಪರಾದ ರಾಜಶೇಖರ ಕೋಟಿ ಅವರು ಗುರುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜಶೇಖರ ಕೋಟಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಗದಗ ಜಿಲ್ಲೆ ಹುಯಿಲಗೋಳ ಗ್ರಾಮದಲ್ಲಿ ಜನಿಸಿದ ರಾಜಶೇಖರ ಕೋಟಿ ಹಿರಿಯ ಪತ್ರಕರ್ತರಾದ ಡಾ. ಪಾಟೀಲ್ ಪುಟ್ಟಪ್ಪ ಗರಡಿಯಲ್ಲಿ ಪತ್ರಿಕೋದ್ಯಮ ಆರಂಭಿಸಿದ್ದರು. ನಂತರ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಆಂದೋಲನ ದಿನಪತ್ರಿಕೆ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ Read More »

ಕರ್ನಾಟಕ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ನ.23. 2ಜಿ, 3ಜಿ, 4ಜಿ ಆಯ್ತು ಈಗ 5ಜಿ ಯುಗ. ಜಾಗತಿಕ ರಂಗದಲ್ಲಿ ಹೊಸ ಕ್ರಾಂತಿಗೆ 5ಜಿ ದೂರಸಂಪರ್ಕ ಸೇವೆ ಮುನ್ನುಡಿ ಬರೆಯಲಿದೆ. ವಿಶ್ವದಲ್ಲೇ ಅತಿ ವೇಗದ ಮೊಬೈಲ್ ಮತ್ತು ವೈರ್ ಲೆಸ್ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ದಕ್ಷಿಣ ಕೊರಿಯಾದಲ್ಲಿ ಈಗಾಗಲೇ 5ಜಿ ದೂರ ಸಂಪರ್ಕ ಪರೀಕ್ಷಾ ಸಿಗ್ನಲ್‌ಗಳನ್ನು ನೀಡಲಾಗಿದೆ. 5ಜಿ ತಂತ್ರಜ್ಞಾನದಡಿ ಎರಡು ಜಿಬಿಯ ಸಿನಿಮಾ ಡೌನ್‌ಲೋಡ್ ಮಾಡಲು ಬರೀ ಒಂದೇ ಸೆಕೆಂಡ್ ಸಾಕು. 4G ತಂತ್ರಜ್ಞಾನದಲ್ಲಿ ಲಭ್ಯವಾಗುವ ವಿವಿಧ ವೇಗದ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!! Read More »

ತಂತ್ರಜ್ಞಾನ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.23. ಹಿಂದೂ ಜಾಗರಣ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ಕಡಬದ ಉದ್ಯಮಿ ಹರೀಶ್ ಉಂಡಿಲ ಮತ್ತು ಕಾರ್ಯದರ್ಶಿಯಾಗಿ ಮಲ್ಲೇಶ್ ಆಲಂಕಾರು ಆಯ್ಕೆಯಾಗಿದ್ದಾರೆ. ಆಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಈ ಆಯ್ಕೆ ನಡೆಯಿತು. ಸಂಚಾಲಕರಾಗಿ ವೆಂಕಟ್ರಮಣ ಕುತ್ಯಾಡಿ, ನಿಧಿ ಪ್ರಮುಖರಾಗಿ ಗೋವಿಂದ ರಾಜ್ ಭಟ್ ಮರ್ದಾಳ, ಸಹಸಂಚಾಲಕರಾಗಿ ಪ್ರಮೋದ್ ರೈ ಮರ್ದಾಳ, ಮೋಹನದಾಸ್ ಪುಂಜ ಕುಂತೂರು, ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಪ್ರಶಾಂತ್ ಪಂಜೋಡಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಂದರ್ಭದಲ್ಲಿ ಸಂಘಟನೆಯ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ Read More »

ಕರಾವಳಿ

ಕೇಂದ್ರ ಸಚಿವರಿಗಾಗಿ ಕಾದು ತಡವಾಗಿ ಹೊರಟ ವಿಮಾನ ► ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಕೇಂದ್ರ ಸಚಿವ ಸಂಪುಟದಲ್ಲಿ ಪ್ರವಾಸೋದ್ಯಮ ಖಾತೆ ಸಚಿವ ಮತ್ತು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವರಾಗಿರುವ ಅಲ್ಫೋನ್ಸ್ ಕಣ್ಣಂತಾನಂ ಅವರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯೆಯೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ. ಸಚಿವರು ಬರುತ್ತಾರೆಂಬ ಕಾರಣಕ್ಕಾಗಿ ಇಂಪಾಲ್ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನದ ಹಾರಾಟವನ್ನು ಕೆಲ ಕ್ಷಣಗಳ ಕಾಲ ವಿಳಂಬ ಮಾಡಲಾಗಿತ್ತು. ಸಚಿವರಿಗಾಗಿ ವಿಮಾನ ವಿಳಂಬ ಮಾಡಿದ್ದಕ್ಕಾಗಿ ಸಿಡಿಮಿಡಿಗೊಂಡ ವೈದ್ಯೆಯೋರ್ವರು ವಿಮಾನ ನಿಲ್ದಾಣದಲ್ಲೇ ಕಣ್ಣಂತಾನಂ

ಕೇಂದ್ರ ಸಚಿವರಿಗಾಗಿ ಕಾದು ತಡವಾಗಿ ಹೊರಟ ವಿಮಾನ ► ಸಚಿವರನ್ನು ತರಾಟೆಗೆ ತೆಗೆದುಕೊಂಡ ವೈದ್ಯೆ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ, ನ.22. ನಾಡ ಬಾಂಬ್ ತಯಾರಿಸಿ ಮಾರಾಟ ಮಾಡುವುದಲ್ಲದೆ ಕಾಡುಪ್ರಾಣಿಗಳನ್ನು ಕೊಲ್ಲುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಕಾರ್ಕಳ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿ, 33 ನಾಡಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರನಾರಾಯಣ ಆಲ್ಬಾಡಿ ಗ್ರಾಮದ ಆರ್ಡಿ ಕೊಳಲಾಡಿಯ ಗುಣಕರ ಶೆಟ್ಟಿ (56), ಲಕ್ಷ್ಮಣ ಶೆಟ್ಟಿ ಯಾನೆ ಲಚ್ಚು ಶೆಟ್ಟಿ (67), ಹೆಬ್ರಿ ಕನ್ಯಾನ ಅರ್ಕುಂಜೆಯ ನಾಗೇಶ್ ನಾಯಕ್ (35) ಎಂದು ಗುರುತಿಸಲಾಗಿದೆ. ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಬುಧವಾರ

ಉಡುಪಿ: ಬೈಕಿನಲ್ಲಿ ಸಾಗಿಸುತ್ತಿದ್ದ ನಾಡ ಬಾಂಬ್ ಪತ್ತೆ ► ಮೂವರು ಆರೋಪಿಗಳ ಸೆರೆ Read More »

ಕರಾವಳಿ

ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.22. ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವಿದ್ಯಾರ್ಥಿಯೋರ್ವ ನೀರುಪಾಲಾದ ಘಟನೆ ಬುಧವಾರ ಸಂಜೆ ಪುತ್ತೂರಿನ ಅಂಬ್ರಿಗೇರಿ ಎಂಬಲ್ಲಿ ನಡೆದಿದೆ. ನೀರುಪಾಲಾದ ವಿದ್ಯಾರ್ಥಿಯನ್ನು ನಗರದ ವಿವೇಕಾನಂದ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಹೇಮಂತ್ ತನ್ನ ಐವರು ಸಹಪಾಠಿಗಳೊಂದಿಗೆ ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದ ಕಟಾರ ಎಂಬಲ್ಲಿನ ಅಂಬ್ರಿಗೇರಿಯಲ್ಲಿ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ತೆರಳಿದ್ದು, ನೀರಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಮತ್ತು ಅಗ್ನಿಶಾಮಕ

ಕುಮಾರಧಾರ ನದಿಗೆ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರುಪಾಲು Read More »

ಕರಾವಳಿ

ಡಿ.03: ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ ► ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com ಮಾಣಿ, ನ.22. ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಇದರ ವತಿಯಿಂದ ಪ್ರತಿಭೋತ್ಸವ ಹಾಗೂ ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನವು ಡಿಸೆಂಬರ್ 3 ಆದಿತ್ಯವಾರ ಮಿತ್ತೂರು ಸಮೀಪದ ಪಾಟ್ರಕೋಡಿ ಎಂಬಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿರುವ ಕಾರ್ಯಕ್ರಮ ಸಂಜೆ 6 ಗಂಟೆಗೆ ಸಮಾರೋಪಗೊಳ್ಳಲಿದ್ದು, ಆಕರ್ಷಕ ರ್ಯಾಲಿಯೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಂಝ ಹಾದಿ ತಂಙಳ್ ಪಾಟ್ರಕೋಡಿ ಧ್ವಜಾರೋಹಣಗೈಯ್ಯಲಿದ್ದಾರೆ. ಉದ್ಘಾಟನೆಯನ್ನು ಸುನ್ನೀ ಜಂಇಯ್ಯತುಲ್ ಉಲಮಾ ಕರ್ನಾಟಕ ಇದರ ಪ್ರಧಾನ

ಡಿ.03: ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರತಿಭೋತ್ಸವ ► ಮರ್ಕಝ್ ರೂಬಿ ಜುಬಿಲಿ ಪ್ರಚಾರ ಸಮ್ಮೇಳನ Read More »

ಕರಾವಳಿ
Scroll to Top