ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ […]

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ

ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ನ.16. ಇತ್ತೀಚೆಗೆ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಹರಿಕಾರ ದಿ| ಗೋಪಾಲರಾವ್ ಬಿಳಿನೆಲೆರವರಿಗೆ ಕಡಬದ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ನುಡಿನಮನ ಕಾರ್ಯಕ್ರಮವು ಇಂದು ನಡೆಯಲಿದೆ. ಇಂದು (ನ.16.) ಸಂಜೆ 4.30 ಗಂಟೆಗೆ ಕಡಬದ ಅನುಗ್ರಹ ಮಿನಿ ಸಭಾಂಗಣದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಹಾಗೂ ನುಡಿನಮನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ Read More »

ಕರಾವಳಿ

ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.16. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ವತಿಯಿಂದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಡಿ.16. ರಂದು ನಡೆಯಲಿರುವ 17 ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅಂಕಣಕಾರ, ಯಕ್ಷಗಾನ ಕಲಾವಿದ, ಪತ್ರಕರ್ತ ನಾ. ಕಾರಂತ ಪೆರಾಜೆ ಆಯ್ಕೆಯಾಗಿದ್ದಾರೆ. Len ಯಕ್ಷಗಾನ ಕಲಾವಿದರಾಗಿ, ಪತ್ರಕರ್ತರಾಗಿ ಪರಿಚಿತವಾಗಿರುವ ನಾ.ಕಾರಂತ ಪೆರಾಜೆ ಅವರು ಕೃಷಿ ಪತ್ರಕರ್ತರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಪ್ರಶಸ್ತಿಯೂ ಲಭಿಸಿದೆ. ಇದೀಗ ತಾಲೂಕು ಸಾಹಿತ್ಯ

ಡಿ.16 ರಂದು ಕಡಬದಲ್ಲಿ ನಡೆಯಲಿರುವ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ ► ಸರ್ವಾಧ್ಯಕ್ಷರಾಗಿ ಅಂಕಣಕಾರ ನಾ. ಕಾರಂತ ಪೆರಾಜೆ ಆಯ್ಕೆ Read More »

ಕರಾವಳಿ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.15. ರಾಜ್ಯದಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರ ನಾಳೆಯಿಂದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಐಎಂಎ, ಪಾನಾ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಐದು ಸಂಘಗಳು ಜಂಟಿ ಸುದ್ದಿಗೋಷ್ಠಿ ನಡೆಸಿ ನಾಳೆಯಿಂದ ಓಪಿಡಿ ವ್ಯವಸ್ಥೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ಮಾಹಿತಿ ನೀಡಿದೆ. ಇದರಿಂದ ರಾಜ್ಯದಾದ್ಯಂತ ರೋಗಿಗಳು ಇನ್ನಷ್ಟು ಸಂಕಷ್ಟಕ್ಕೀಡಾಗುವ ಸಾಧ್ಯತೆ ಇದೆ. PHANA ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಮಾತನಾಡಿದ್ದು, ಕಾಯಿದೆ ತಿದ್ದುಪಡಿ ಮಾಡದಂತೆ

ಖಾಸಗಿ ಆಸ್ಪತ್ರೆಗಳ ತಿದ್ದುಪಡಿ ವಿಧೇಯಕ ವಿರೋಧಿಸಿ ತಾರಕಕ್ಕೇರಿದ ವೈದ್ಯರ ಮುಷ್ಕರ ► ನಾಳೆಯಿಂದ OPD ಬಂದ್ Read More »

ಕರಾವಳಿ

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.15. ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೆ ಹೊಸದಾಗಿ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಠಿಸಲಾಗಿದ್ದು, ಮಂಗಳೂರು ತಾಲೂಕಿನ 55 ಗ್ರಾಮ ಪಂಚಾಯತ್‍ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರುಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯಾವ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಲು ಬಯಸಿರುವರೋ ಆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯವರಿಗೆ ಅರ್ಜಿಯನ್ನು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು,

ಗ್ರಾ.ಪಂ.ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆ ಸೃಷ್ಟಿ ► ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಕಲ್ಲೇರಿ: ಮೊಬೈಲ್ ಅಂಗಡಿಗೆ ಬೆಂಕಿ ಹಾಕಿ‌ ಕೋಮು ಗಲಭೆಗೆ ಯತ್ನಿಸಿದ ಪ್ರಕರಣ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.15. ಬೆಳ್ತಂಗಡಿ ತಾಲೂಕಿನ ಕರಾಯದ ಕಲ್ಲೇರಿಯ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ನಡೆಸಿದ್ದಲ್ಲದೆ, ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ವಾರದೊಳಗೆ ಬೇಧಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಮುಹಮ್ಮದ್ ಶಮೀರ್ ಅವರ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣ ಬೆಳಕಿಗೆ ನ.08 ರಂದು ಬೆಳಗ್ಗೆ ಬೆಳಕಿಗೆ ಬಂದಿತ್ತು. ಬೆಂಕಿ ಹಚ್ಚಿದ್ದರಿಂದ ಅವರ ಅಂಗಡಿ ಸಂಪೂರ್ಣ ಭಸ್ಮವಾಗಿತ್ತು. ಟಿಪ್ಪು ಜಯಂತಿ ಹಾಗೂ ಬಿಜೆಪಿಯ ಪರಿವರ್ತನಾ ಯಾತ್ರೆ ದ.ಕ. ಜಿಲ್ಲೆಗೆ ಕಾಲಿಟ್ಟ ಸಂದರ್ಭ ಅದಾಗಿದ್ದರಿಂದ

ಕಲ್ಲೇರಿ: ಮೊಬೈಲ್ ಅಂಗಡಿಗೆ ಬೆಂಕಿ ಹಾಕಿ‌ ಕೋಮು ಗಲಭೆಗೆ ಯತ್ನಿಸಿದ ಪ್ರಕರಣ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮುರುಡೇಶ್ವರ, ನ.15. ಬಿಜೆಪಿ ಅಧಿಕಾರ ವಹಿಸಿಕೊಂಡ ಮರುದಿನವೇ ಕರಾವಳಿಯಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಸುಮಾರು ನೂರಕ್ಕೂ‌ ಅಧಿಕ ಜನರು ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಿದ್ದು‌, ಇದರ ಪರಿಣಾಮವು ಕರಾವಳಿ ಭಾಗದಲ್ಲೂ ಕಂಡು ಬಂದಿದೆ. ರಾಜ್ಯದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸಕ್ರಿಯವಾಗಿದ್ದು ಇದಕ್ಕೆ ಸಿದ್ದರಾಮಯ್ಯನವರೇ ಹೊಣೆಯಾಗಿದ್ದಾರೆ ಅಂತ ಆರೋಪಿಸಿದರು. ರಾಜ್ಯದಲ್ಲಿ ಸುಮಾರು 42 ಸಾವಿರ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ತಕ್ಷಣ ವೈದ್ಯರ

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ Read More »

ಕರ್ನಾಟಕ

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ

(ನ್ಯೂಸ್ ಕಡಬ) newskadaba.com ರಿಯಾದ್‌, ನ.15. ಭಾರತೀಯ ಮೂಲದ ಯೋಗಕ್ಕೆ ಸೌದಿ ಅರೇಬಿಯಾ ಸರಕಾರವು ವಿಶೇಷ ಮಾನ್ಯತೆ ನೀಡಿದ್ದು ಕ್ರೀಡೆಯನ್ನಾಗಿ ಪರಿಗಣಿಸಿ ದೇಶದಲ್ಲಿ ಯೋಗ ಕಲಿಕೆಗೆ ಅನುಮತಿ ನೀಡಿದೆ. ಇದರೊಂದಿಗೆ ಭಾರತೀಯ ಮೂಲದ ಯೋಗಕ್ಕೆ ಮಾನ್ಯತೆ ನೀಡಿದ ಮೊದಲ ಮುಸ್ಲಿಂ ರಾಷ್ಟ್ರವೆಂಬ ಹೆಗ್ಗಳಿಕೆಗೂ ಸೌದಿ ಅರೇಬಿಯಾ ಪಾತ್ರವಾಗಿದೆ. ಈ ಹಿಂದೆ ಜೂನ್‌ 21 ರಂದು ನಡೆಸಲಾಗುವ ವಿಶ್ವ ಯೋಗ ದಿನದ ಸಹಭಾಗಿತ್ವವನ್ನು ಸೌದಿ ಅರೇಬಿಯಾ ಪಡೆದಿರಲಿಲ್ಲ. ಆದರೆ ಈಗ ಕೈಗೊಂಡಿರುವ ನಿರ್ಧಾರ ಐತಿಹಾಸಿಕವಾಗಿದ್ದು, ಬದಲಾವಣೆಯ ಸೂಚನೆ ಎನ್ನಲಾಗಿದೆ.

ಯೋಗಕ್ಕೆ ವಿಶೇಷ ಮನ್ನಣೆಯ ನೀಡಿದ ಸೌದಿ ಅರೇಬಿಯಾ ಸರಕಾರ ► ಕ್ರೀಡೆಯಾಗಿ ಯೋಗ ಕಲಿಕೆಗೆ ಸರ್ಕಾರದಿಂದ ಅನುಮತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ

(ನ್ಯೂಸ್ ಕಡಬ) newskadaba.com ಹಾಸನ, ನ.15. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಪತ್ನಿಯನ್ನು ಕೊಲೆಗೈದು ತನ್ನ ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣದ ಗುಣಶೆಟ್ಟಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಕೊಲೆಯಾದ ಮಹಿಳೆಯನ್ನು ಚನ್ನರಾಯಪಟ್ಟಣ ನಿವಾಸಿ ಮಂಜೇಗೌಡ ಎಂಬಾತನ ಪತ್ನಿ ಸುಮಾ(29) ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಕೊಲೆಯಾಗಿರುವ ಸುಮಾ ಒಂದೇ ಊರಿನವರಾಗಿದ್ದು, 2004ರಲ್ಲಿ ಮದುವೆಯಾಗಿತ್ತು. ನಂತರದ ದಿನಗಳಲ್ಲಿ ಮಂಜೇಗೌಡ ತನ್ನ ಹೆಂಡತಿಯ ಬಗ್ಗೆ ಸಂಶಯ ಪಡುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು ಎನ್ನಲಾಗಿದ್ದು, ಬಳಿಕ ಹಿರಿಯರ

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ Read More »

ಕರ್ನಾಟಕ

ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಶೃಂಗೇರಿ, ನ.14. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ನಡೆದಿದೆ. ಮೃತರನ್ನು ಕಾರು ಚಾಲಕ ಅಡುಗೆ ವೃತ್ತಿ ಮಾಡುತ್ತಿದ್ದ ಉಳುವೆ ನಿವಾಸಿ ಸತ್ಯನಾರಾಯಣ(64) ಎಂದು ಗುರುತಿಸಲಾಗಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸತ್ಯನಾರಾಯಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top