ಮಂಗಳೂರು: ಸಿಟಿ ಬಸ್‌ ಡಿಕ್ಕಿ ► ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.3. ಸಿಟಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಕರ್ನಕಟ್ಟೆ ಬಾಲ ಏಸು ಮಂದಿರದ ಬಳಿ ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಕುಲಶೇಖರ ಕೋಟಿಮುರ ನಿವಾಸಿ ಲಿಲ್ಲಿ ಪಿಂಟೋ (65) ಎಂದು ಗುರುತಿಸಲಾಗಿದೆ . ಬಾಲ ಏಸು ಮಂದಿರದಲ್ಲಿ ನಡೆದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮನೆಗೆ ವಾಪಾಸಾಗುತ್ತಿದ್ದ ವೇಳೆ ಬಸ್‌ ಡಿಕ್ಕಿ ಹೊಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಡು, ತನಿಖೆ ಪ್ರಾರಂಭಿಸಿದ್ದಾರೆ.

ಮಂಗಳೂರು: ಸಿಟಿ ಬಸ್‌ ಡಿಕ್ಕಿ ► ಮಹಿಳೆ ಮೃತ್ಯು Read More »

ಕರಾವಳಿ

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.3. ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ಪುತ್ತೂರು ತಾಲೂಕಿನ ಈಶ್ವರಮಂಗಿಲದಲ್ಲಿರುವ ಹನುಮಗಿರಿ ಪಂಚಮುಖಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಗುರುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕೋದಂಡರಾಮನ ಪ್ರತಿಷ್ಠಾ ಮಹೋತ್ಸವ ಸಲುವಾಗಿ ಬೆಳಗ್ಗೆ ಸುಮಾರು 9.40 ರ ವೇಳೆಗೆ ಆಗಮಿಸಿದ ಅವರನ್ನು ಧರ್ಮಶ್ರೀ ಪ್ರತಿಷ್ಠಾನದ ಮಹಾ ಪೋಷಕರಾದ ಜಿ.ಕೆ. ಮಹಾಬಲೇಶ್ವರ ಭಟ್‌ರವರು ಹಾರಾರ್ಪಣೆ ಮಾಡಿ ಬರಮಾಡಿಕೊಂಡರು. ಬಳಿಕ ಕೋದಂಡರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು

ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಒಡೆಯರ್‌ ► ಪುತ್ತೂರಿನ ಹನುಮಗಿರಿ ಶ್ರೀ ಆಂಜನೇಯ ಕ್ಷೇತ್ರಕ್ಕೆ ಭೇಟಿ Read More »

ಕರಾವಳಿ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.03. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಖಾಸಗಿ ಆಸ್ಪತ್ರೆಯ ವೈದ್ಯರು ರಾಜ್ಯ ಸರಕಾರದ ವಿರುದ್ಧ ಮುಷ್ಕರಕ್ಕೆ ಇಳಿದಿದ್ದು, ರೋಗಿಗಳಿಗೆ ತೊಂದರೆಯಾಗಲಿದೆ. ಕಳೆದ ಜುಲೈನಲ್ಲಿ ಮುಷ್ಕರಕ್ಕೆ ಇಳಿದಿದ್ದ ವೈದ್ಯರು ಈಗ ಮತ್ತೆ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಹೊರಟ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕ್ಲಿನಿಕ್‍ನಿಂದ ಹಿಡಿದು ಕಾರ್ಪೊರೇಟ್ ಆಸ್ಪತ್ರೆಗಳು ಇಂದು ಬಂದ್ ಆಗಲಿವೆ. ಒಪಿಡಿ, ಒಟಿ ಸಂಪೂರ್ಣ ಸ್ಥಗಿತವಾಗಲಿದೆ. ಕೇವಲ ಆಕ್ಸಿಡೆಂಟ್ ಹಾಗೂ ಗರ್ಭಿಣಿಯರ

ಇಂದು ಖಾಸಗಿ ಆಸ್ಪತ್ರೆಗಳ ಮುಷ್ಕರ ► ಆರೋಗ್ಯ ಸೇವೆಗಳಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಕರ್ನಾಟಕ

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.2. ಆಧಾರ್ ನಂಬರ್‌ಗೆ ಫೋನ್ ನಂಬರ್ ಜೋಡಿಸಲು ಇನ್ನು ಮುಂದೆ ಮೊಬೈಲ್ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ವಿವರ ನೀಡುವ ಅಗತ್ಯವಿಲ್ಲ. ಜನರು ತಮ್ಮ ಮೊಬೈಲ್‌ನಲ್ಲೇ ಒಟಿಪಿ ಮೂಲಕ ಆಧಾರ್‌ಗೆ ಮೊಬೈಲ್ ನಂಬರ್ ಜೋಡಿಸಬಹುದಾಗಿದೆ. ಟೆಲಿಕಾಂ ಇಲಾಖೆ ಡಿಸೆಂಬರ್ 01 ರಿಂದ ಈ‌ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಜನರು ತಮ್ಮ ಆಧಾರ್‌ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಒನ್ ಟೈಮ್ ಪಾಸ್‌ವರ್ಡ್(ಒಟಿಪಿ) ಬಳಸಿ ತಮ್ಮ ಮೊಬೈಲ್ ಮೂಲಕವೇ ಈ ಕಾರ್ಯ ಮಾಡಬಹುದಾಗಿದೆ. ಇದರ ಜೊತೆಗೆ ಆ್ಯಪ್ ಬಳಸಿ

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕ ರಾಜ್ಯ ಮಲೆಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ (ರಿ.) ► ರಾಜ್ಯ ಸಂಯೋಜಕರಾಗಿ ಎ.ಸಿ.ಕುರಿಯನ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ನ.02. ಕರ್ನಾಟಕ ರಾಜ್ಯ ಮಲೆಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್(ರಿ.) ಇದರ ರಾಜ್ಯ ಸಂಯೋಜಕರನ್ನಾಗಿ ಉದ್ಯಮಿ ಎ.ಸಿ. ಕುರಿಯನ್ ರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಂಘದ ನಿಬಂಧನೆಗಳ ಅನುಸಾರ ರಾಜ್ಯದಲ್ಲಿರುವ ಕ್ರೈಸ್ತ ಧರ್ಮದ ವಿವಿಧ ಧರ್ಮ ಸಭೆಗಳಲ್ಲಿರುವ ಕ್ರೈಸ್ತ ಬಾಂಧವರನ್ನು ಸಂಘಟಿಸಿ ಸಂಘದ ಸದಸ್ಯರನ್ನಾಗಿಸುವ ಮೂಲಕ ಮಲೆಯಾಳಿ ಕ್ರೈಸ್ತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವಂತೆ ಕೋರಿ ಎ.ಸಿ.ಕುರಿಯನ್ ರವರನ್ನು ನೇಮಿಸಿ‌ ಅಧ್ಯಕ್ಷರಾದ ಎ.ಸಿ.ಜಯರಾಜ್ ರವರು ಆದೇಶಿಸಿದ್ದಾರೆ.

ಕರ್ನಾಟಕ ರಾಜ್ಯ ಮಲೆಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ (ರಿ.) ► ರಾಜ್ಯ ಸಂಯೋಜಕರಾಗಿ ಎ.ಸಿ.ಕುರಿಯನ್ ನೇಮಕ Read More »

ಕರಾವಳಿ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು. ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಚಾಲನೆ Read More »

ಕರಾವಳಿ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ, ನ.2. ಆಲಂಕಾರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನಂದ ಬಾರ್ಕುಲಿ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವ್ಯಾಪಾರ ಪರವಾನಿಗೆ ಇಲ್ಲದೆ ಕಾರ್ಯಾಚರಿಸುವ ಅಂಗಡಿಗಳ ಮೇಲೆ ಆಡಳಿತ ಮಂಡಳಿಯ ಸೂಕ್ತ ಕ್ರಮಕೈಗೊಳ್ಳುವ ನಿರ್ಣಯವನ್ನು ಅಂಗಿಕರಿಸಲಾಯಿತು. ಪಂಚಾಯಿತಿ ಸದಸ್ಯ ಕೇಶವ ಗೌಡ ಆಲಡ್ಕ ವಿಚಾರ ಪ್ರಸ್ತಾಪಿಸಿ, ಆಲಂಕಾರು ಪೇಟೆಯಲ್ಲಿ ಕೇವಲ ಕಟ್ಟಡ ಮಾಲಿಕರು ಕಟ್ಟಡ ಪರವಾನಿಗೆ ಮಾತ್ರ ಪಡೆದುಕೊಂಡು ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ವ್ಯಾಪಾರಸ್ಥರು ವ್ಯಾಪರ ಪರವಾನಿಗೆ ಪಡೆದುಕೊಳ್ಳದೆ ಗ್ರಾಮ ಪಂಚಾಯಿತಿಗೆ ಆದಾಯಕ್ಕೆ ವಂಚನೆ

ಆಲಂಕಾರು: ಸಾಮಾನ್ಯ ಸಭೆ ► ಅಕ್ರಮ ಅಂಗಡಿಗಳ ತೆರವಿಗೆ ನಿರ್ಣಯ Read More »

ಕರಾವಳಿ

ಕಡಬ: ಬೆಥನಿ ಬೆಥನಿ ಪ.ಪೂ.ಕಾಲೇಜು ► ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.2. ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಬೆಥನಿ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ|ಫಾ| ಆ್ಯಂಟನಿ ಒಐಸಿರವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್ ಕನ್ನಡ ರಾಜ್ಯೋತ್ಸವದ ಸಂದೇಶ ಸಾರಿ ವಿದ್ಯಾರ್ಥಿಗಳು ಕನ್ನಡಾಭಿಮಾನಿಗಳಾಗಿ ಮುಂದುವರೆಯಬೇಕೆಂದು ಕರೆ ನೀಡಿದರು. ಪ್ರೌಢ ವಿಭಾಗದ ಮುಖ್ಯಗುರು ತೋಮಸ್ ಎ.ಕೆ, ಉಪನ್ಯಾಸಕಿ ಶಾಂಭವಿ ಮಾತನಾಡಿ ಶುಭ ಕೋರಿದರು. ಪದವಿಪೂರ್ವ ಕಾಲೇಜಿನ ಹಾಗೂ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅನಿಸಿಕೆ ವ್ಯಕ್ತಪಡಿಸಿ ಕನ್ನಡ

ಕಡಬ: ಬೆಥನಿ ಬೆಥನಿ ಪ.ಪೂ.ಕಾಲೇಜು ► ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ.2. ಮದುವೆ ಮನೆಯಿಂದ ಜನರನ್ನು ಕರೆದುಕೊಂಡು ವಾಪಾಸ್ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ. ಬಸ್ ನಲ್ಲಿದ್ದವರು ಬಾಗೇಪಲ್ಲಿಯ ಮಿಟ್ಟೆಮರಿ ಗ್ರಾಮದ ನಿವಾಸಿಗಳಾಗಿದ್ದು, ಬೆಂಗಳೂರಿನ ಸರ್ಜಾಪುರ ಕಲ್ಯಾಣ ಮಂಟಪವೊಂದರಲ್ಲಿ ಮದುವೆಯನ್ನು ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಮಧ್ಯರಾತ್ರಿ 12.30 ರ ಸುಮಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 70ಕ್ಕೂ ಅಧಿಕ ಮಂದಿ

ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ►ಮದುವೆ ಮನೆಯಿಂದ ವಾಪಸ್ಸಾಗುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ
Scroll to Top