ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ► ಧರ್ಮಸ್ಥಳದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಬೆಳ್ತಂಗಡಿ, ಅ.29.‌ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಳೆಂಜ ಎಂಬಲ್ಲಿ ಭಾನುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಧರ್ಮಸ್ಥಳ ಸಮೀಪದ ಕಳೆಂಜ ನಿವಾಸಿ ಉಮೇಶ್ ಗೌಡ ಎಂಬವರ ಪತ್ನಿ ವಿಜಯಲಕ್ಷ್ಮೀ(27) ಮಕ್ಕಳಾದ ದೀಕ್ಷಿತ್(5) ಹಾಗೂ ಆರು ತಿಂಗಳ ಮಗು ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಉದ್ಯೋಗಿಯಾಗಿರುವ ಉಮೇಶ್ ಗೌಡ ಅವರು ಇತ್ತೀಚೆಗೆ ಊರಿಗೆ ಆಗಮಿಸಿದ್ದವರು ಮೂರು ದಿನಗಳ ಹಿಂದೆಯಷ್ಟೇ ಊರಿಂದ ತೆರಳಿದ್ದರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ […]

ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ► ಧರ್ಮಸ್ಥಳದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ Read More »

ಕರಾವಳಿ

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ► ಅದ್ದೂರಿಯಾಗಿ ಸ್ವಾಗತಿಸಿದ ಧರ್ಮಾಧಿಕಾರಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಅ.29. ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಉಜಿರೆಯಲ್ಲಿ ರೂಪೇ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ‌ ಹೆಗ್ಗಡೆ ಹಾಗೂ ಕುಟುಂಬಸ್ಥರು, ಸಚಿವರು, ಸಂಸದರು, ಶಾಸಕರು ಸೇರಿದಂತೆ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಪ್ರಧಾನಿಯವರು ಮಾತನಾಡಿದರು.

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ► ಅದ್ದೂರಿಯಾಗಿ ಸ್ವಾಗತಿಸಿದ ಧರ್ಮಾಧಿಕಾರಿ Read More »

ಕರಾವಳಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.29. ಬೈಕ್ ಹಾಗೂ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮರ್ಧಾಳ ಬೊಳ್ಳೂರು ರಸ್ತೆಯ ಮಿತ್ತೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರಾದ ಮರ್ಧಾಳ ನಿವಾಸಿ ಮಂಜು ಹಾಗೂ ಸಂತೋಷ್ ಎಂಬವರು ಗಾಯಗೊಂಡಿದ್ದಾರೆ. ಬೊಳ್ಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ನಿಧಿಗಳ್ಳರ ದುಸ್ಸಾಹಸಕ್ಕೆ ಬಿತ್ತು ಕೊಡಲಿಯೇಟು ► ನೆಲಕ್ಕುರುಳಿತು 200 ವರ್ಷದ ಬನ್ನಿ ಮರ

(ನ್ಯೂಸ್ ಕಡಬ) newskadaba.com ಮುದ್ದೇಬಿಹಾಳ, ಅ.29. ನಿಧಿ ಆಸೆಗಾಗಿ ಸುಮಾರು ಎರಡು ನೂರು ವರ್ಷದ ಬನ್ನಿ ಮರವೊಂದು ಜೆಸಿಬಿ ಯಂತ್ರಕ್ಕೆ ಬಲಿಯಾಗಿರುವ ಘಟನೆ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬುಡ ಸಮೇತ ಕಿತ್ತೆಸೆಯಲಾದ ಬನ್ನಿ ಮರ ನಾಲತವಾಡದ ಈರಪ್ಪ ಬಿಳೆಬಾವಿ ಎಂಬುವರ ಜಮೀನಿನಲ್ಲಿತ್ತು. ನಾಲತವಾಡದ ಬೀದಿ ಬಸವಣ್ಣ ದೇವಸ್ಥಾನದ ವ್ಯಾಪ್ತಿ ಪ್ರದೇಶದಲ್ಲಿ ಈ ಘಟನೆ ನೆಡೆದಿದ್ದು, ಕಳೆದ ಒಂದು ವರ್ಷದ ಹಿಂದೆಯೂ ದೇವಸ್ಥಾನದ

ನಿಧಿಗಳ್ಳರ ದುಸ್ಸಾಹಸಕ್ಕೆ ಬಿತ್ತು ಕೊಡಲಿಯೇಟು ► ನೆಲಕ್ಕುರುಳಿತು 200 ವರ್ಷದ ಬನ್ನಿ ಮರ Read More »

ಕರ್ನಾಟಕ

ಹುದ್ದೆ ಖಾಯಂಗೊಳಿಸುವಂತೆ ಪುನರ್ವಸತಿ ಕಾರ್ಯಕರ್ತರಿಂದ ಆಗ್ರಹ ► ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.29. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಮಿತಿಯ 24,26ನೇ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಿ ವಿಕಲಚೇತನರ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಆರ್ಡಬ್ಲ್ಯೂ ಮತ್ತು ವಿಆರ್ಡಬ್ಲ್ಯೂ ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಿ ಹುದ್ದೆಯನ್ನು ಖಾಯಂಗೊಳಿಸುವಂತೆ ಕರ್ನಾಟಕ ರಾಜ್ಯ ವಿಕಲಚೇತನ ವಿವಿದ್ದೋದ್ದೇಶ(ಎಂಆರ್ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿಆರ್ಡಬ್ಲ್ಯೂ)ಜಿಲ್ಲಾ ಒಕ್ಕೂಟದ, ಪುತ್ತೂರು ಶಾಖೆ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಗೆ ಮನವಿ ಸಲ್ಲಿಸಿದ್ದಾರೆ. ಎಂಆರ್ಡಬ್ಲ್ಯೂ ಮತ್ತು ವಿಆರ್ಡಬ್ಲ್ಯೂ ಪುನರ್ವಸತಿ ಕಾರ್ಯಕರ್ತರ ಗೌರವಧನ

ಹುದ್ದೆ ಖಾಯಂಗೊಳಿಸುವಂತೆ ಪುನರ್ವಸತಿ ಕಾರ್ಯಕರ್ತರಿಂದ ಆಗ್ರಹ ► ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ Read More »

ಕರಾವಳಿ

ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಅ.28. ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ನೀಡಿದ್ದ ಕಡಬ ಬಂದ್ ಗೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕಡಬ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲಿಸಿದ್ದಾರೆ. ಕಡಬದಲ್ಲಿ ಈ ಹಿಂದೆ ಮಕ್ಕಾ ಮಸೀದಿಯ ಅವಹೇಳನ ನಡೆಸಿರುವ ಪ್ರಕರಣದಲ್ಲಿ ಆರೋಪಿಯನ್ನು ಹಿಂದೂ ಸಂಘಟನೆಯ ಮುಖಂಡರೇ ಠಾಣೆಗೆ ಒಪ್ಪಿಸಿದ್ದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ‌. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಸಹಕಾರ

ಅಮಾಯಕ ಹಿಂದೂ ಯುವಕರ ಮೇಲೆ ಪೊಲೀಸ್ ದಬ್ಬಾಳಿಕೆ ಆರೋಪ ► ಕಡಬ ಬಂದ್ ಯಶಸ್ವಿ Read More »

ಕರಾವಳಿ

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನೀಡಿದ್ದ ದೂರಿನ ಮೇರೆಗೆ ಓರ್ವನನ್ನು ವಶಕ್ಕೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್

ಟಿಪ್ಪು ಸುಲ್ತಾನ್ ಮತ್ತು ಸಿದ್ದರಾಮಯ್ಯರವರ ಅವಹೇಳನ ► ಓರ್ವ ಉಪ್ಪಿನಂಗಡಿ ಪೊಲೀಸರ ವಶಕ್ಕೆ Read More »

ಕರಾವಳಿ

ಕರಾಟೆಯ ಭರಾಟೆಯಲ್ಲಿ ಬಡ ಕುಟುಂಬದ ತರಾಟೆ ► ಮಂಗಳೂರು ಮೇಯರ್ ಗಿದೆ ಕಾನೂನಿನ ತರಾಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ತನ್ನ ವಿಶೇಷ ಕಾರ್ಯಾಚರಣೆಯಿಂದ ಸದಾ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಾಗುತ್ತಿದ್ದ ಕರಾಟೆ ಕಿಂಗ್ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ರವರು ಇದೀಗ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಮೇಯರ್ ರವರು ಬಡಪಾಯಿ ಕುಟುಂಬವೊಂದಕ್ಕೆ ತನ್ನ ಕರಾಟೆಯ ಪೌರುಷವನ್ನು ತೋರಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಆಕ್ರೋಶ, ಟೀಕೆಗೆ ಗುರಿಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರ ಕುಟುಂಬ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು, ದೀಪಾವಳಿ ಹಬ್ಬದಂದು ಮೇಯರ್ ಮನೆಯಲ್ಲಿ

ಕರಾಟೆಯ ಭರಾಟೆಯಲ್ಲಿ ಬಡ ಕುಟುಂಬದ ತರಾಟೆ ► ಮಂಗಳೂರು ಮೇಯರ್ ಗಿದೆ ಕಾನೂನಿನ ತರಾಟೆ Read More »

ಕರಾವಳಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಪರಿಸರದ ಇಬ್ಬರ ಮೇಲೆ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು Read More »

ಕರಾವಳಿ

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ ► ಧರ್ಮಸ್ಥಳದ ಸುತ್ತ ‘ನ್ಯೂಸ್ ಕಡಬ’ದ ಒಂದು ನೋಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.27.  ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 29 ಭಾನುವಾರದಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮ ಸಿದ್ಧತೆ ಬಿರುಸಿನಿಂದ ಸಾಗಿದೆ. ಭದ್ರತೆ, ವಾಹನ ಪಾರ್ಕಿಂಗ್, ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥಿತವಾಗಿ ನಿಭಾಯಿಸಲು ರೂಪುರೇಷೆ ತಯಾರಿಸಲಾಗಿದೆ. ಭದ್ರತೆಗೆ ಸಜ್ಜಾಗಿದೆ ಖಾಕಿ ಪಡೆ, ಸಿಸಿ ಕ್ಯಾಮೆರಾ ಕಣ್ಗಾವಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನೀಡಲಿರುವ ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಿಗಿ ಭದ್ರತೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಸುಮಾರು 2,500 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಆಯಕಟ್ಟಿನ

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ ► ಧರ್ಮಸ್ಥಳದ ಸುತ್ತ ‘ನ್ಯೂಸ್ ಕಡಬ’ದ ಒಂದು ನೋಟ Read More »

ರಾಷ್ಟ್ರೀಯ ನ್ಯೂಸ್
Scroll to Top