ಕೋಮು ಭಂಗವುಂಟುಮಾಡುವವರಿಗೆ ಕಾದಿದೆ ಗಡಿಪಾರು ಶಿಕ್ಷೆ ► ಗೂಂಡಾ, ಕೋಕಾ ಕಾಯ್ದೆ ಹಾಕಲು ಸಿದ್ಧರಾಮಯ್ಯರಿಂದ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕೋಮು ಸೌಹಾರ್ದತೆ ಹಾಳು ಮಾಡುವಂತಹ ಮತೀಯವಾದಿಗಳ ವಿರುದ್ಧ ಗೂಂಡಾ ಕಾಯ್ದೆ ಮತ್ತು ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿ ಗಡಿಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ನಗರದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಮತೀಯ ಭಾವನೆ ಕೆರಳಿಸಿ ಶಾಂತಿಗೆ ಭಂಗ ಉಂಟುಮಾಡುವವರು ಯಾರೇ ಆದರೂ, ಅವರು ಯಾವುದೇ ಸಂಘಟನೆಗೆ ಸೇರಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ […]










