ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದುಷ್ಕರ್ಮಿಗಳಿಂದ ಕೊಲೆಯಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ದೇವಾಡಿಗರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ರಸ್ತೆಬದಿಯಲ್ಲಿನ ಕೆಲವು ಕಲ್ಲುಗಳನ್ನು ತೆಗೆದು ಕಾರಿನೊಳಗೆ ಶೇಖರಿಸುತ್ತಿರುವುದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಸಂಶಯಕ್ಕೆ ಕಾರಣವಾಗಿದೆ. ಶವಯಾತ್ರೆಯಲ್ಲಿ ಕೈಕಂಬ ಹಾಗೂ ಬಿ.ಸಿ.ರೋಡಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಹಿಂದೂ ಪರ ಸಂಘಟನೆಯ ಕೆಲವು ಗೂಂಡಾ ಪ್ರವೃತ್ತಿಯ ಕಾರ್ಯಕರ್ತರ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ಜಿಲ್ಲೆಯ ಶಾಂತಿಪ್ರಿಯ ಜನರಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಇದೀಗ ವೈರಲ್ ಆಗಿರುವ […]

ಶವಯಾತ್ರೆಯಲ್ಲಿನ ಕಲ್ಲುತೂರಾಟ ಪೂರ್ವಯೋಜಿತ ಕೃತ್ಯವೇ…? ► ಸಂಶಯಕ್ಕೆ ಕಾರಣವಾದ ವೀಡಿಯೋ ಇದೀಗ ವೈರಲ್ Read More »

ಕರಾವಳಿ

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ► ಕೈಕಂಬ, ಬಂಟ್ವಾಳದಲ್ಲಿ ಉದ್ವಿಗ್ನ ವಾತಾವರಣ

(ನ್ಯೂಸ್ ಕಡಬ) newskadaba.com ಕಡಬ, ಜು.08. ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೀಡಾಗಿ ಆಸ್ಪತ್ರೆಯಲ್ಲಿ ಮೃತರಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ಶವಯಾತ್ರೆಯ ವೇಳೆ ಕೈಕಂಬದಲ್ಲಿ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ಮೃತದೇಹವನ್ನು ಸಂಘಪರಿವಾರದ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಇಳಿಸಲು ಅಣಿಯಾದಾಗ ವಿರೋಧ ವ್ಯಕ್ತಪಡಿಸಿದ ಪೊಲೀಸರ ಮಧ್ಯೆ ಮಾತಿನ ಚಕಮಕಿ ಉಂಟಾಗಿದ್ದು, ವಾಹನಗಳು, ಅಂಗಡಿಗಳಿಗೆ ದುಷ್ಕರ್ಮಿಗಳು ಕಲ್ಲೆಸೆದ ಪರಿಣಾಮ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ.

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ► ಕೈಕಂಬ, ಬಂಟ್ವಾಳದಲ್ಲಿ ಉದ್ವಿಗ್ನ ವಾತಾವರಣ Read More »

ಕರಾವಳಿ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜು.08. ರೈತರು ಬೆಳೆ ನಷ್ಟ ಅನುಭವಿಸಿದ ಸಂದರ್ಭದಲ್ಲಿ ಬ್ಯಾಂಕ್‌ಗಳು ಅಥವಾ ಇನ್ನಿತರ ಯಾವುದೇ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ಮಾಡುವಂತೆ ಬಲವಂತಪಡಿಸಬಾರದು. ಇಂಥಹ ಸಂದರ್ಭದಲ್ಲಿ ಸರ್ಕಾರಗಳು ರೈತರ ನೆರವಿಗೆ ಧಾವಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ರೈತರ ಆತ್ಮಹತ್ಯೆಗಳನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಬೇಕೇ ಹೊರತು ಪರಿಹಾರ ಹಂಚಿಕೆ ಮಾಡುವುದಲ್ಲ ಎಂದು ಕೇಂದ್ರಕ್ಕೆ ಸುಪ್ರೀಂ ಚಾಟಿ ಬೀಸಿದೆ. ಈ ಬಗ್ಗೆ ತಮಿಳುನಾಡು ರೈತರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ

ಸಾಲ ಮರುಪಾವತಿಗೆ ಬ್ಯಾಂಕುಗಳು ರೈತರನ್ನು ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಉದ್ರೇಕಕಾರಿ ಸ್ಟೇಟಸ್ ಅಪ್‍ಡೇಟ್ ಮಾಡಲಾಗಿದೆ. ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ ಕೇಸರಿ ಧ್ವಜ ಹಾಕುತ್ತಿರೋ? ಇವತ್ತು ಅವನ ಕೊನೆಯ ದಿನ.. ತೀರ್ಮಾನಿಸಿ ಎಂದು ಈ ಎಫ್‍ಬಿ ಪೇಜ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ. ಈ ಪೇಜ್ ನಲ್ಲಿ ರಾಜ್ಯಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದು,

ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ ► ಮಂಗಳೂರು ಮುಸ್ಲಿಮ್ಸ್ ಪೇಜ್‍ನಿಂದ ಬಹಿರಂಗ ಬೆದರಿಕೆ Read More »

ಕರಾವಳಿ

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ವಿಧಿವಶ ► ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶರತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಇತ್ತೀಚೆಗೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ  ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಜುಲೈ 4 ರಂದು ರಾತ್ರಿ ಶರತ್ ಬಿ.ಸಿ.ರೋಡ್‌ನ ತನ್ನ ತಂದೆಯ ಲಾಂಡ್ರಿಯಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮಂಗಳೂರಿಗೆ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ವಿಧಿವಶ ► ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶರತ್ Read More »

ಕರಾವಳಿ

ಅಡ್ಯಾರ್ ಪದವು: ಸಹಾಯ ಕೇಳುವ ನೆಪದಲ್ಲಿ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.7. ಪೆಟ್ರೋಲ್ ಕೇಳುವ ನೆಪದಲ್ಲಿ ದುಷ್ಕರ್ಮಿಗಳ ತಂಡವೊಂದು ವಿದ್ಯಾರ್ಥಿಗಳಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಅಡ್ಯಾರ್ ಪದವಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಕೇರಳದ ಮಲಪ್ಪುರಂ ನಿವಾಸಿ ಸಾಜಿದ್ (23) ಹಾಗೂ ಆತನ ಸ್ನೇಹಿತ ನೌಫಲ್ ನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಅಡ್ಯಾರ್ ಪದವಿನಲ್ಲಿ ಬೈಕ್ ನಲ್ಲಿದ್ದ ಮೂವರ ತಂಡ “ಪೆಟ್ರೋಲ್ ಖಾಲಿಯಾಗಿದ್ದು, ಪೆಟ್ರೋಲ್ ಇದ್ದರೆ ನೀಡಿ” ಎಂದು

ಅಡ್ಯಾರ್ ಪದವು: ಸಹಾಯ ಕೇಳುವ ನೆಪದಲ್ಲಿ ಚೂರಿ ಇರಿತ Read More »

ಕರಾವಳಿ

ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಹಲವು ಸಂಘ ಪರಿವಾರದ ಮುಖಂಡರನ್ನು ಪೊಲೀಸರು ಬಂಧಿಸಿದರು. ಇಂದು ಪ್ರತಿಭಟನೆ ನಡೆಯುವ ಮುನ್ಸೂಚನೆ ಇದ್ದ ಕಾರಣ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ಬಿ.ಸಿ.ರೋಡ್: ನಿಷೇಧಾಜ್ಞೆ ನಡುವೆ ಪ್ರತಿಭಟನೆ ► ಸಂಸದರು, ಶಾಸಕರು ಸೇರಿದಂತೆ ಸಂಘಟನೆಯ ಮುಖಂಡರ ಬಂಧನ Read More »

ಕರಾವಳಿ

ಶರತ್ ಮೇಲಿನ ಹಲ್ಲೆ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬಿ.ಸಿ.ರೋಡ್ ಚಲೋ ► ನಿಷೇಧಾಜ್ಞೆಯ ನಡುವೆಯೂ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯು ‘ಬಿ.ಸಿ.ರೋಡ್ ಚಲೋ’ ಘೋಷಿಸಿದ್ದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಹಿಂದೂ ಪರ ಸಂಘಟನೆಗಳ ಸದಸ್ಯರು ನಿಷೇಧಾಜ್ಞೆಯ ನಡುವೆಯೂ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿರುವುದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಬಿ.ಸಿ.ರೋಡಿನಲ್ಲಿನ ಅಂಗಡಿಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಡುತ್ತಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಲು ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ

ಶರತ್ ಮೇಲಿನ ಹಲ್ಲೆ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬಿ.ಸಿ.ರೋಡ್ ಚಲೋ ► ನಿಷೇಧಾಜ್ಞೆಯ ನಡುವೆಯೂ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ Read More »

ಕರಾವಳಿ

ನಾವೂರು: ವಾಟ್ಸಾಪ್ ಬಳಗದಿಂದ ಸಸಿ ವಿತರಣೆ, ವನಮಹೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಜು.06. ಮೊಬೈಲ್ ಒತ್ತುತ್ತಾ ಸುಮ್ಮನೆ ಕಾಲಹರಣ ಮಾಡುವ ಬದಲು ತಮ್ಮ ಆಲೋಚನಾ ಶಕ್ತಿಯನ್ನು ಬದಲಿಸಿ ವಾಟ್ಸಾಪ್ ಗ್ರೂಪೊಂದರ ಸದಸ್ಯರು ಗೋಗ್ರೀನ್ ಅಭಿಯಾನದ ಅಂಗವಾಗಿ ಸಸಿ ವಿತರಣೆ, ವನಮಹೋತ್ಸವ ಆಚರಿಸಿದರು. ಪುಣ್ಚತ್ತಾರು ಉಷಾ ಡಿಜೆ ಮತ್ತು ಲೈಟಿಂಗ್ಸ್‌ ವಾಟ್ಸಪ್ ಗ್ರೂಪಿನ ಅಡ್ಮಿನ್ ದಿನೇಶ್ ಪೈಕ ನೇತೃತ್ವದಲ್ಲಿ ಕಾಣಿಯೂರು ಗ್ರಾಮದ ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ಸಸ್ಯನಾಟಿ, ಸಸಿ ವಿತರಣೆ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಅನಂತ ಬೈಲಂಗಡಿ, ಮಾಧವ ಕಲ್ಪಡ,

ನಾವೂರು: ವಾಟ್ಸಾಪ್ ಬಳಗದಿಂದ ಸಸಿ ವಿತರಣೆ, ವನಮಹೋತ್ಸವ Read More »

ಕರಾವಳಿ

ಬಿದ್ದು ಸಿಕ್ಕಿದ 41 ಸಾವಿರ ರೂ.ಗಳು ಪೊಲೀಸರಿಗೆ ಹಸ್ತಾಂತರ ► ಪರರ ಸ್ವತ್ತು ತನಗೆ ಬೇಡವೆನ್ನುವ ಇವರ ಬಗ್ಗೆ ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಪುತ್ತೂರು, ಜು.06. ರಸ್ತೆಯಲ್ಲಿ ತನಗೆ ಬಿದ್ದು ಸಿಕ್ಕಿದ 40900 ರೂಪಾಯಿ ಹಣವನ್ನು ಪೊಲೀಸರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಘಟನೆ ಪುತ್ತೂರಿನಲ್ಲಿ ಗುರುವಾರದಂದು ನಡೆದಿದೆ. ಪುತ್ತೂರು ತಾಲೂಕಿನ ಕಾವು ನಿವಾಸಿಗಳಾದ ಆನಂದ ಮೂಲ್ಯ ಹಾಗೂ ಕೋಟಿ ಮೂಲ್ಯ ಎಂಬವರಿಗೆ ಬಿದ್ದು ಸಿಕ್ಕಿತೆನ್ನಲಾದ ಹಣವನ್ನು ಇನ್ನೊಬ್ಬರಿಗೆ ಸೇರಬೇಕಾದ ವಸ್ತು ತನಗೆ ಬೇಡವೆನ್ನುವ ಇರಾದೆಯೊಂದಿಗೆ ಪುತ್ತೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಆನಂದ ಮೂಲ್ಯರು ಕಾವು ಮಾಡ್ನೂರು ಗ್ರಾಮದ ಮದ್ಲ ನಿವಾಸಿಯಾಗಿದ್ದು, ಮದ್ಲದಲ್ಲಿ ಗೂಡಂಗಡಿಯಲ್ಲಿ ಜಿನಸು ವ್ಯಾಪಾರ ಮಾಡುತ್ತಿದ್ದಾರೆ. ಸಮಾಜ ಸೇವೆಯಲ್ಲೂ ಸಕ್ರಿಯರಾಗಿರುವ ಆನಂದ

ಬಿದ್ದು ಸಿಕ್ಕಿದ 41 ಸಾವಿರ ರೂ.ಗಳು ಪೊಲೀಸರಿಗೆ ಹಸ್ತಾಂತರ ► ಪರರ ಸ್ವತ್ತು ತನಗೆ ಬೇಡವೆನ್ನುವ ಇವರ ಬಗ್ಗೆ ತಿಳಿಯಬೇಕೇ…? Read More »

ಕರಾವಳಿ
Scroll to Top