ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜು.01. ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಮು ಜುಲೈ 1 ರಂದು ಪ್ರತಿ ವರುಷ ದೇಶಾದ್ಯಂತ ವೈದ್ಯರ ದಿನ ಎಂದು ಆಚರಿಸಲಾಗುತ್ತಿದೆ. ಇದು ಭಾರತದ ಮಹಾನ್ ಸುಪುತ್ರ. ಭಾರತರತ್ನ ಡಾ| ಬಿಷನ್ ಚಂದ್ರ ರಾಯ್ ಅವರು ಜನ್ಮವೆತ್ತ ದಿನ. ಡಾ| ಬಿ.ಸಿ. ರಾಯ್ ಅವರೊಬ್ಬರು ಮಾನವೀಯ ಕಳಕಳಿಯುಳ್ಳ ವೈದ್ಯರಾಗಿದ್ದರಲ್ಲದೆ ಅಪ್ರತಿಮ ರಾಜಕಾರಣಿ ದೇಶಭಕ್ತ ಮತ್ತು ಭಾರತ ಕಂಡ ಅತ್ಯುತ್ತಮ ವೈದ್ಯರೆಂದರೂ ತಪ್ಪಲ್ಲ. ಕಲ್ಕತ್ತಾ ವಿಶ್ವ ವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಪದವಿ ಪಡೆದ ಬಳಿಕ  ವಿದೇಶಕ್ಕೆ […]

ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.01. ಇಲ್ಲಿನ ಧಾರ್ಮಿಕ ಉತ್ಸವ ಸಮಿತಿಯ ಮಾರ್ಗದರ್ಶನದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಜರಗಲಿರುವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಅಶೋಕ್ ಕುಮಾರ್ ಪಿ. ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಹೇಶ್ ಕೋಡಿಬೈಲು, ಉಪಾಧ್ಯಕ್ಷರಾಗಿ ಮಂಜುನಾಥ ಶೆಟ್ಟಿ ನವಸುಮ, ಜತೆ ಕಾರ್ಯದರ್ಶಿಯಾಗಿ ಯತೀಶ್ ಹೊಸಮನೆ, ಕೋಶಾಧಿಕಾರಿಯಾಗಿ ಜಯರಾಂ ಆರ್ತಿಲರವರು ಆಯ್ಕೆಯಾಗಿದ್ದಾರೆ. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಧಾರ್ಮಿಕ ಉತಸ್ವ

ಕಡಬ: 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಪಿ. ಆಯ್ಕೆ Read More »

ಕರಾವಳಿ

ಪೇಜಾವರ ಶ್ರೀಯವರ ಇಫ್ತಾರ್ ವಿವಾದ ► ಪ್ರವೀಣ್ ವಾಲ್ಕೆಯವರ ಆಕ್ರೋಶಿತ ಮಾತು

(ನ್ಯೂಸ್ ಕಡಬ) newskadaba.com ಮಂಗಳೂರು, ಜು.01. ನಾವು ಸೌಹಾರ್ದತೆಯಲ್ಲಿರಬೇಕೆಂದು 50 ವರ್ಷಗಳ ಮೊದಲು ಗೊತ್ತಾಗಿರುತ್ತಿದ್ದರೆ ಇವತ್ತಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಷ್ಟೊಂದು ಗೊಂದಲಗಳಾಗುತ್ತಿರಲಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ನಾವು ಪೇಜಾವರ ಶ್ರೀ ಯವರ ಮಾರ್ಗದರ್ಶನದಲ್ಲಿ ಮುಂದುವರಿದಿದ್ದೆವು. ಅಂದೇ ನಾವೆಲ್ಲ ಮುಸ್ಲಿಮರೊಂದಿಗೆ ಸೌಹರ್ದಯುತವಾಗಿ ಇರೋಣ ಎಂದು ಸ್ವಾಮೀಜಿ ಹೇಳಿದ್ದರೆ, ನಾವೂ ಅನ್ಯೋನ್ಯವಾಗಿ ಇರುತ್ತಿದ್ದೆವು. ಆದರೆ, ನಮ್ಮ ಮನಸ್ಸಿನಲ್ಲಿ ವಿಷಬೀಜ ಬಿತ್ತಿ, ತಾವು ಗುಟ್ಟಾಗಿ ಮುಸ್ಲಿಮರ ಪ್ರೀತಿಗಳಿಸಲು ಮುಂದಾಗಿರುವುದು ಎಷ್ಟು ಸರಿ. ನಮಗೆ ಮುಸ್ಲಿಮರು ವಿರೋಧಿಗಳಲ್ಲ. ಈ

ಪೇಜಾವರ ಶ್ರೀಯವರ ಇಫ್ತಾರ್ ವಿವಾದ ► ಪ್ರವೀಣ್ ವಾಲ್ಕೆಯವರ ಆಕ್ರೋಶಿತ ಮಾತು Read More »

ಕರಾವಳಿ

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಜು.01. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದುದರ ಪರಿಣಾಮ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಾರು ಢಿಕ್ಕಿ ಹೊಡೆದು ಚರಂಡಿಗೆ ಇಳಿದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.bi

ಬಿಳಿನೆಲೆ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ

ಜಿಎಸ್‌ಟಿ ಗೆ ಪ್ರಧಾನಿ ಮೋದಿಯಿಂದ ಅಧಿಕೃತ ಚಾಲನೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಜು.01. ಸ್ವಾತಂತ್ರದ ನಂತರ ಭಾರತದ ‘ಅತಿ ದೊಡ್ಡ ತೆರಿಗೆ ಸುಧಾರಣೆ’ ಎಂದು ಬಣ್ಣಿಸಲಾದ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಶನಿವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಹೊಸದಿಲ್ಲಿಯ ಸಂಸತ್ ಭವನದ ಐತಿಹಾಸಿಕ ಸೆಂಟ್ರಲ್ ಭವನದಲ್ಲಿ ರಾತ್ರಿ 11:00 ಗಂಟೆಗೆ ಆರಂಭ ಗೊಂಡ ವಿಶೇಷ ಅಧಿವೇಶನದಲ್ಲಿ ಮಧ್ಯರಾತ್ರಿಯ ಬಳಿಕ ರಾಷ್ಟ್ರ ಪತಿ ಪ್ರಣವ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಬೆಲ್ ಹೊಡೆಯುವ ಮೂಲಕ ಜಿಎಸ್‌ಟಿಗೆ ಅಧಿಕೃತ ಚಾಲನೆ ನೀಡಿದರು.   ಲೋಕಸಭಾ ಸ್ಪೀಕರ್

ಜಿಎಸ್‌ಟಿ ಗೆ ಪ್ರಧಾನಿ ಮೋದಿಯಿಂದ ಅಧಿಕೃತ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಹೆದ್ದಾರಿ ಬದಿಯಲ್ಲಿನ ಬಾರ್ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಹೆದ್ದಾರಿ ಬದಿಗಳಲ್ಲಿ ಕಾರ್ಯಾಚರಿಸುತ್ತಿದ್ದ ಬಾರ್ ಗಳನ್ನು 220 ಮೀಟರ್ ದೂರಕ್ಕೆ ಸ್ಥಳಾಂತರಿಸಬೇಕೆನ್ನುವ ಸುಪ್ರೀಂ ಕೋರ್ಟ್ ಆದೇಶವು ನಾಳೆಯಿಂದ ಜಾರಿಗೆ ಬರಲಿದೆ‌. ಮೊದಲು ಹೆದ್ದಾರಿಯಿಂದ 500 ಮೀ. ಅಂತರ ಇರಬೇಕೆಂದು ನೀಡಲಾಗಿದ್ದ ಆದೇಶವನ್ನು ತಿದ್ದುಪಡಿ ಮಾಡಿರುವ ಸುಪ್ರೀಂಕೋರ್ಟ್ 220 ಮೀ. ಅಂತರವನ್ನು ನಿಗದಿಪಡಿಸಿತ್ತು. ಈ ಆದೇಶದನ್ವಯ ದೇಶದಾದ್ಯಂತ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬದಿಗಳಲ್ಲಿನ ಬಾರ್ ಗಳಿಗೆ ಕುತ್ತು ಬಂದಿದ್ದು, ನಾಳೆಯಿಂದ ಮುಚ್ಚಬೇಕಾಗಿದೆ. ಕಡಬದಲ್ಲಿನ ಬಾರ್ ಗಳೂ ಈ ಆದೇಶದ ಹೊರತಾಗಿಲ್ಲ.

ನಾಳೆಯಿಂದ ಹೆದ್ದಾರಿ ಬದಿಯಲ್ಲಿನ ಬಾರ್ ಬಂದ್ Read More »

ರಾಷ್ಟ್ರೀಯ ನ್ಯೂಸ್

ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.30. ಇಲ್ಲಿಗೆ ಸಮೀಪದ ಕರಾಯದ ಕಲ್ಲೇರಿ ಎಂಬಲ್ಲಿ ಕಾರು ಹಾಗೂ ಸರಕಾರಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಕಡಬದ ವ್ಯಕ್ತಿ ಓರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಅಪರಾಹ್ನ ನಡೆದಿದೆ. ಗಾಯಾಳುವನ್ನು ಕಡಬದ ಕಳಾರ ನಿವಾಸಿ ಸಾಯಿಪ್ರಸಾದ್ ಪೈ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಕಾರು ಬಸ್ಸು ಢಿಕ್ಕಿ: ಕಡಬದ ವ್ಯಕ್ತಿ ಗಂಭೀರ Read More »

ಕರಾವಳಿ

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು, ಜೂ.30. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.30 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜು.02 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ರವರು ಮಂಗಳವಾರ ಆದೇಶಿಸಿದ್ದಾರೆ. ಅದರಂತೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಜೂ.30. ಮನೆಯೊಂದರ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ವೃದ್ಧ ದಂಪತಿಯನ್ನು ಬೆದರಿಸಿ ಸುಮಾರು ಒಂದು ಲಕ್ಷ ವೌಲ್ಯದ ನಗ-ನಗದು ದೋಚಿ ಪರಾರಿಯಾದ ಘಟನೆ ಇಂದು ಬೆಳಗ್ಗಿನ ಜಾವ ಕೊಣಾಜೆ ಗ್ರಾಮದ ನಡುಪದವಿನಲ್ಲಿ ನಡೆದಿದೆ. ದಸ್ತಾವೇಜು ಬರಹಗಾರರಾಗಿರುವ ನಡುಪದವು ನಿವಾಸಿ ಸದಾಶಿವಯ್ಯ ಎಂಬವರ ಮನೆಯಿಂದ ಈ ದರೋಡೆ ನಡೆದಿದೆ. ಸುಮಾರು 30 ಸಾವಿರ ರೂ. ನಗದು ಹಾಗೂ 20 ಗ್ರಾಮ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳರು ಮನೆಯ

ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ Read More »

ಕರಾವಳಿ

ಹದಿಹರೆಯದ ಮಕ್ಕಳು ಹಾದಿ ತಪ್ಪದಂತೆ ಜಾಗ್ರತೆ ವಹಿಸಬೇಕೇ…?

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.30. ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಬಾಹ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಕರೆ ನೀಡಿದ್ದಾರೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು

ಹದಿಹರೆಯದ ಮಕ್ಕಳು ಹಾದಿ ತಪ್ಪದಂತೆ ಜಾಗ್ರತೆ ವಹಿಸಬೇಕೇ…? Read More »

ಕರಾವಳಿ
Scroll to Top