ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಯುವಕನ ಅಪಹರಣ, ನಾಲ್ವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಗನ್ ತೋರಿಸಿ ಯುವಕನನ್ನು ಅಪಹರಿಸಿ, ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪೀಣ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಕನಕಮೂರ್ತಿ, ಕಿರಣ್, ಶ್ರೀನಿವಾಸ್ ಮತ್ತು ಮಾಲಿಂಗ್ ಸಾಬ್ ಶೇಖ್ ಎಂದು ಗುರುತಿಸಲಾಗಿದೆ. ಆಗಸ್ಟ್ 14 ರಂದು ಪೀಣ್ಯ ಪೊಲೀಸ್ ವ್ಯಾಪ್ತಿಯ ಜಾಲಹಳ್ಳಿಯಲ್ಲಿ ತನ್ನ ಊರಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಯುವಕನನ್ನು ಆರೋಪಿಗಳು ಅಪಹರಿಸಿದ್ದರು. ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಲು ಆತ ನಗರಕ್ಕೆ ಬಂದಿದ್ದ. ದಾಬಸ್ಪೇಟೆ ತಲುಪುತ್ತಿದ್ದಂತೆ, ಆರೋಪಿಗಳು […]

ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಯುವಕನ ಅಪಹರಣ, ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ.25 ನವದೆಹಲಿ : ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಪರೀಕ್ಷಿಸಿದ್ದು ಇದೇ ಮೊದಲು.ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.25 ಕಾಸರಗೋಡು : ಶಾಲಾ ವಿದ್ಯಾರ್ಥಿಗಳ ರಸ್ತೆ ಅಪಘಾತದಿಂದ ಮನನೊಂದ ಆಟೋ ಚಾಲಕನೊಬ್ಬ ಮಂಗಳವಾರ ಸಂಜೆ ಬೇಡಡ್ಕದಲ್ಲಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಲ್ಲಂಜಿ ನಿವಾಸಿ ಕೆ. ಅನೀಶ್ (40) ಎಂದು ಗುರುತಿಸಲಾಗಿದೆ.ಮಂಗಳವಾರ ಸಂಜೆ ಅನೀಶ್ ಬೈತೂರ್‌ಪಾರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಿಂದ ಪಲ್ಲಂಜಿ ಕಡೆಗೆ ಪ್ಲಸ್-ಒನ್ ವಿದ್ಯಾರ್ಥಿಗಳ ಗುಂಪನ್ನು ಕರೆದೊಯ್ಯುತ್ತಿದ್ದಾಗ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಅವರ ಆಟೋದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ,

ಕಾಸರಗೋಡು: ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಡಿ. 15 ರವರೆಗೆ ವಿದ್ಯುತ್ ಕಾಮಗಾರಿ ನಿಮಿತ್ತ ಹಗಲು ರೈಲು ಸೇವೆ ರದ್ದು

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು : ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ

ಮಂಗಳೂರು: ಡಿ. 15 ರವರೆಗೆ ವಿದ್ಯುತ್ ಕಾಮಗಾರಿ ನಿಮಿತ್ತ ಹಗಲು ರೈಲು ಸೇವೆ ರದ್ದು Read More »

ಕರಾವಳಿ, ಕರ್ನಾಟಕ

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಸೆ.25 ಮುಂಬೈ: ಏಷ್ಯಾಕಪ್ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 15 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳೊಂದಿಗೆ ಈ ಬಾರಿಯ ಏಷ್ಯಾಕಪ್​ನಲ್ಲಿ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಟೀಮ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಗರ : ಪಹಲ್ಗಾಮ್‌ ದಾಳಿ ಪ್ರಕರಣ: ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ

ಶ್ರೀನಗರ : ಪಹಲ್ಗಾಮ್‌ ದಾಳಿ ಪ್ರಕರಣ: ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಮುಂದಿನ ಮೂರು ದಿನ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಕರಾವಳಿಯಲ್ಲಿ ಸೆ.25 ರಿಂದ 27ರವರೆಗೆ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ

ಇಂದು ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.25 ಉಡುಪಿ: ಸಿದ್ದಾಪುರದ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಚಾಲಕ ವಾಸೀಂ ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುವನ್ನು ಮಹಾಬಲ ಪೂಜಾರಿ (55) ಎಂದು ಗುರುತಿಸಲಾಗಿದ್ದು, ಅವರನ್ನು ಮೊದಲು ಹಾಲಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ  ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಸಂಧರ್ಭದಲ್ಲಿ , ಕರ್ತವ್ಯಕ್ಕೆ ಹೋಗುತ್ತಿದ್ದ ಹಾಲಾಡಿಯ ಪೊಲೀಸ್ ಸಿಬ್ಬಂದಿ

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ; 8.25 ಲಕ್ಷ .ರೂ ಮೌಲ್ಯದ 82.5 ಗ್ರಾಂ ಚಿನ್ನಾಭರಣ ವಶ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಮನೆಗಳಲ್ಲಿ ಸರಣಿ ಕಳ್ಳತನ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ ಮೌಲ್ಯದ 82.5 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕಾಡುಗೋಡಿಯ ಪಟಾಲಮ್ಮ ಲೇಔಟ್‌ನಲ್ಲಿರುವ ವ್ಯಕ್ತಿಯೊಬ್ಬರು ಆಗಸ್ಟ್ 24 ರಂದು ತಮ್ಮ ಮನೆಯ ಬೀಗ ಮುರಿದು 27 ಗ್ರಾಂ ತೂಕದ ಚಿನ್ನಾಭರಣ ಕದ್ದಿದ್ದಾರೆ ಎಂದು ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.ಪ್ರಕರಣಗಳಲ್ಲಿ ಬಂಧಿಸಲಾದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ತನಿಖೆಯ ಸಮಯದಲ್ಲಿ,

ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ; 8.25 ಲಕ್ಷ .ರೂ ಮೌಲ್ಯದ 82.5 ಗ್ರಾಂ ಚಿನ್ನಾಭರಣ ವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಗುಂಡಿಗೆ ಆಕ್ಷೇಪ- ಬಿಜೆಪಿ ಸಂಚಾರ ತಡೆ ಚಳವಳಿ

(ನ್ಯೂಸ್‌ ಕಡಬ) newskadaba.com,  ಸೆ.24 ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು. ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ

ರಸ್ತೆ ಗುಂಡಿಗೆ ಆಕ್ಷೇಪ- ಬಿಜೆಪಿ ಸಂಚಾರ ತಡೆ ಚಳವಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top