ಮುಂಬೈನ ಯುವ ಆಟಗಾರರೊಂದಿಗೆ ಬ್ಯಾಟಿಂಗ್‌ ಅಭ್ಯಾಸ ನಡೆಸಿದ ರೋಹಿತ್‌

(ನ್ಯೂಸ್‌ ಕಡಬ) newskadaba.com,  ಸೆ.17 ಬೆಂಗಳೂರು: ಮುಂಬರುವ ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಗಾಗಿ ನಾಯಕ ರೋಹಿತ್‌ ಶರ್ಮ ಅವರು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಮುಂಬೈನ ಯುವ ಆಟಗಾರರೊಂದಿಗೆ ತರಬೇತಿಯಲ್ಲಿ ನಿರತರಾಗಿದ್ದಾರೆ. ಟಿ20 ಮತ್ತು ಟೆಸ್ಟ್‌ಗಳಿಂದ ನಿವೃತ್ತರಾದ ನಂತರ, 38 ವರ್ಷದ ರೋಹಿತ್ ಶರ್ಮಾ ಕೇವಲ 50 ಓವರ್‌ಗಳ ಸ್ವರೂಪದ ಮೇಲೆ ಮಾತ್ರ ಗಮನಹರಿಸುತ್ತಿದ್ದಾರೆ. ಅಭ್ಯಾಸದ ವೇಳೆ ರೋಹಿತ್‌ ಅವರು ಯುವ ಆಟಗಾರರಾ ಸರ್ಫರಾಜ್‌ ಖಾನ್‌ ಮತ್ತು ಆಯುಷ್ ಮ್ಹಾತ್ರೆಗೆ ಹಲವು ಬ್ಯಾಟಿಂಗ್‌ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ […]

ಮುಂಬೈನ ಯುವ ಆಟಗಾರರೊಂದಿಗೆ ಬ್ಯಾಟಿಂಗ್‌ ಅಭ್ಯಾಸ ನಡೆಸಿದ ರೋಹಿತ್‌ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಗೇಲ್ ಕಂಪೆನಿಯ ದಿವ್ಯ ನಿರ್ಲಕ್ಷ್ಯ- ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.17 ಮಂಗಳೂರು :  ಗೇಲ್ ಕಂಪೆನಿ ದಿವ್ಯ ನಿರ್ಲಕ್ಷ್ಯಕ್ಕೆ ನಾಯೊಂದು ಹೊಂಡಕ್ಕೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಕಂಪೆನಿ ಪೈಪ್ ಲೈನ್ ತೆರದು ಮುಚ್ಚದೆ ಹಾಗೇ ಬಿಟ್ಟಿತ್ತು. ಮಲ್ಲಿಕಟ್ಟೆ ಮಾರುಕಟ್ಟೆ ಬಳಿ ಮುಚ್ಚದೆ ಬಿಟ್ಟ ಕಾರಣ ನಾಯಿ ಹೊಂಡಕ್ಕೆ ಬಿದ್ದಿದೆ. ಬಳಿಕ ಹೊಂಡಕ್ಕೆ ಬಿದ್ದ ನಾಯಿಯನ್ನು ಅನಿಮಲ್ ಕೇರ್ ಟ್ರಸ್ಟ್ ನಿಂದ  ರಕ್ಷಣೆ ಮಾಡಲಾಗಿದೆ  

ಮಂಗಳೂರಿನ ಗೇಲ್ ಕಂಪೆನಿಯ ದಿವ್ಯ ನಿರ್ಲಕ್ಷ್ಯ- ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,  ಸೆ.17 ನವದೆಹಲಿ : ಮೇಘಾ ಇಂಜಿನಿಯರಿಂಗ್ ಕಂಪನಿಯು ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲಿದೆ. ಮೇಘಾ ಇಂಜಿನಿಯರಿಂಗ್ ಇನ್ಫಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ ಬಿಡ್ ಗೆದ್ದುಕೊಂಡಿದೆ. ಐಎಸ್‌ಪಿಆರ್‌ಎಲ್ ಬಿಡ್ ಅನ್ನು ಖಾಸಗಿ ಕಂಪನಿ ಮೊದಲ ಬಾರಿಗೆ ಗೆದ್ದುಕೊಂಡಿದ್ದು ಸುಮಾರು 5,700 ಕೋಟಿ ರೂ ವೆಚ್ಚದಲ್ಲಿ 2.5 ದಶಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯವಿರುವ ತೈಲ ಸಂಗ್ರಹಣಾ ಘಟಕ ನಿರ್ಮಿಸಲಾಗುವುದು. ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಪಾದೂರಿನಲ್ಲಿ

ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಧುಮತಿ ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.17 ಕಲಬುರಗಿ : ಮದುವೆ ವಿಚಾರಕ್ಕೆ ಸಂಭವಿಸಿದ ಗಲಾಟೆಯಿಂದ ನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕ್ಷಣ ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ತಾಯಿ ಜಗದೇವಿ (47), ಪುತ್ರಿ ಮಧುಮತಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಗಳು ಬಾವಿಗೆ

ಮಧುಮತಿ ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : 16 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ ಒಂಬತ್ತು ಮಂದಿ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ಸೆ.17 ಕಾಸರಗೋಡು : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಸಹಾಯಕ ಶಿಕ್ಷಣಾಧಿಕಾರಿ ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬೇಕಲ ಸಹಾಯಕ ಶಿಕ್ಷಣಾಧಿಕಾರಿ (ಎಇಒ) ವಿ.ಕೆ.ಝೈನುದ್ದೀನ್ (52); ಆರ್‌ಪಿಎಫ್ ಅಧಿಕಾರಿ ಚಿತ್ರರಾಜ್ ಎರಾವಿಲ್ (48); ತ್ರಿಕರಿಪುರದ ವಳವಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಹಾಜಿ (55); ಪಿಲಿಕೋಡು ಪಂಚಾಯತ್ ನ ವೆಳ್ಳಕ್ಕಲ್ ನ ಸುಕೇಶ್ (30); ಚಂದೇರದ ಅಫ್ಜಲ್ (23);

ಕಾಸರಗೋಡು : 16 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ ಒಂಬತ್ತು ಮಂದಿ ಅರೆಸ್ಟ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆ.27, 28ರಂದು ರಾಮಕುಂಜದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ಸೆ.17 ಕಡಬ : ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕರ ಮತ್ತು ಬಾಲಕಿಯರ ’ಕಬಡ್ಡಿ ಪಂದ್ಯಾಟ-2025’ ಸೆ.27 ಮತ್ತು 28ರಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ., ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು

ಸೆ.27, 28ರಂದು ರಾಮಕುಂಜದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮರಾಜನಗರದಲ್ಲಿ ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.17 ಚಾಮರಾಜನಗರ : ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಹತ್ತಿರ ಘಟನೆ ನಡೆದಿದೆ. ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು. ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್ ಗಳು  ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರದಲ್ಲಿ ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.17 ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಕುಲಾಯಿ-ಹೊನ್ನೆಕಟ್ಟೆ ಮಾರ್ಗವಾಗಿ ಮಂಗಳೂರಿನಿಂದ ಎಂಆರ್‌ಪಿಎಲ್ (ಒಎನ್‌ಜಿಸಿ) ಕಡೆಗೆ ಸಂಚರಿಸುವ ವಾಹನಗಳು ಹೊಸಬೆಟ್ಟು-ಸುರತ್ಕಲ್ ಜಂಕ್ಷನ್ ಮಾರ್ಗವನ್ನು ಬಳಸಿಕೊಂಡು ಎಂಆರ್‌ಪಿಎಲ್ ತಲುಪಬೇಕು. ಎಂಆರ್‌ಪಿಎಲ್‌ನಿಂದ ಮಂಗಳೂರು ಕಡೆಗೆ ಬರುವ

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.17 ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಲುವತ್ತು ಶೇಕಡಾ  ಕಮೀಷನ್ ಪಡೆದ ಭ್ರಷ್ಟಾಚಾರಿಗಳ ವಿರುದ್ಧ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್  ಸರ್ಕಾರ  ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಕಠಿಣ ಕ್ರಮ ಕೈಗೊಳ್ಳದೆ ಈ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತೆ ತೋರಿಸುತ್ತಿದೆ, ಇದು  ಕಾಂಗ್ರೆಸ್ ಮತ್ತು  ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಭಾಗವಾಗಿದೆ . ಇವರ ಈ ಅನೈತಿಕ ಮತ್ತು ಅಸಂಬದ್ಧ  ರಾಜಕೀಯ ಸಂಬಂಧವನ್ನು ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತಿದೆ

ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top