ಬರೇಲಿ :ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.13 ಬರೇಲಿ : ಉತ್ತರ ಪ್ರದೇಶದ ಬರೇಲಿಯಲ್ಲಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ಘಟನೆ ನಡೆದಿದೆ. ಗೋಲ್ಡಿ ಬ್ರಾರ್ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದ್ದು, ಇದು ಕೇವಲ ಟ್ರೈಲರ್ ಎಂದು ಹೇಳಿದೆ. ಅವರ ಮನೆಯ ಹೊರಗೆ ಕೆಲವು ಅಪರಿಚಿತರು ಗುಂಡು ಹರಿಸಿದ್ದಾರೆ. ಈ ದಾಳಿಯ ಹೊಣೆಯನ್ನು ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸದಸ್ಯರು ಹೊತ್ತುಕೊಂಡಿದ್ದು, ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ. ಈ ದಾಳಿಯ […]

ಬರೇಲಿ :ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ‘ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ನಮ್ಮ ಸಂವಿಧಾನ  ಮತ್ತು ಸಂವಿಧಾನ ಪ್ರತಿಪಾದಿಸಿದ ಮೌಲ್ಯ ಮತ್ತು ಕಾನೂನುಗಳೇ ಅಂತಿಮವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಘನತೆ, ಗೌರವದ ಮತ್ತು ಸ್ವಾಭಿಮಾನದ ಬದುಕನ್ನ ಸಂವಿಧಾನ ಪ್ರತಿಪಾದಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಮತ್ತು ವಾಕ್ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ನಾಗರಿಕನಿಗೂ ಖಾತ್ರಿಪಡಿಸಿದ ಸಂವಿಧಾನಕ್ಕೆ ವಿರುದ್ಧವಾಗಿ ಅನ್ಯಾಯವನ್ನು ಪ್ರಶ್ನಿಸಿದವರಿಗೆ  ಇಲ್ಲಿನ ಅಧಿಕಾರಶಾಹಿಯು ಅನ್ಯಾಯವಾಗಿ ಪ್ರಕರಣ ದಾಖಲಿಸುವ ಮೂಲಕ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಇದು

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್ 6ರಂದು ಮುಂಜಾನೆ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜೀಪನಡು ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ ತಲ್ವಾರ್ ಬೀಸಿ ತನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲಿಸರು ಇದೊಂದು ಸುಳ್ಳು ದೂರು ಎಂದು ಆರೋಪಿಸಿ ದೂರುದಾರನ ವಿರುದ್ದವೇ ಜಾಮೀನು

ಬಂಟ್ವಾಳ : ತಲ್ವಾರ್ ದಾಳಿ ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.13 : ಸಜಿಪಮೂಡ ಗ್ರಾಮದ ಕಾರಾಜೆ, ಪಣೊಲಿಬೈಲ್, ಬೊಳ್ಳಾಯಿ, ಕಂಚಿಲ, ನಗ್ರಿ, ಜಾಡಕೊಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಮಿತಿ ಮೀರಿದೆ. ವಿಶೇಷವಾಗಿ ಬೊಳ್ಳಾಯಿ ಪೇಟೆ ಪ್ರದೇಶದಲ್ಲಿ ಶಾಲಾ-ಕಾಲೇಜು, ಮದ್ರಸ, ದೇವಾಲಯ, ಮಸೀದಿಗಳಿಗೆ ಬರುವ ಯಾತ್ರಾರ್ಥಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ನಾಯಿಗಳಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರನ್ನು ಬೆನ್ನಟ್ಟಿ ಬೀದಿ ನಾಯಿಗಳು ಅಟ್ಟಾಡಿಸುವ ಘಟನೆಗಳು ಸಂಭವಿಸುತ್ತಿದ್ದು, ಯಾವುದೇ ಕ್ಷಣದಲ್ಲೂ ಗಂಭೀರ ಅಪಘಾತಗಳು ಸಂಭವಿಸುವ ಭೀತಿ

ಬೀದಿ ನಾಯಿಗಳ ಉಪಟಳ ನಿಯಂತ್ರಣಕ್ಕೆ ತುರ್ತು ಕ್ರಮ ಅಗತ್ಯ : ಎಸ್‌ಡಿಪಿಐ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಆಟೋ & ಕಾರಿಗೆ ಟ್ಯಾಂಕರ್ ಡಿಕ್ಕಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು : ನಿನ್ನೆ(ಸೆ.12)  ಹಾಸನದಲ್ಲಿ ನಡೆದ ಭೀಕರ ಟ್ಯಾಂಕರ್ ದುರಂತದ ನೆನಪು ಮಾಸುವ ಮುನ್ನವೇ, ಬೆಂಗಳೂರಿನಲ್ಲಿ ಇನ್ನೊಂದು ಟ್ಯಾಂಕರ್ ಅಪಘಾತ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಮ್ಮನಹಳ್ಳಿಯ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ.ರಿಕ್ಷಾ, ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಡಿಯೇಸು ಹಾಗೂ ಜನಿಫರ್ ಅವರು ಸ್ಥಳದಲ್ಲಿ ಸಾವನಪ್ಪಿದ್ದು, ಕಾರಿನಲ್ಲಿ ಇದ್ದವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ

ಬೆಂಗಳೂರು: ಆಟೋ & ಕಾರಿಗೆ ಟ್ಯಾಂಕರ್ ಡಿಕ್ಕಿ, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ

(ನ್ಯೂಸ್‌ ಕಡಬ) newskadaba.com, ಸೆ.13 ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮೋದಿ ಕಚೇರಿ, “ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ” ಎಂದು ತಿಳಿಸಿದೆ. ಜೊತೆಗೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ

ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಸೆ.15ರಿಂದ ಆರಂಭ; ಇಂದ್ರಾಳಿ ಸೇತುವೆ ಸೆ. 22ಕ್ಕೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಸೆ.13 ಉಡುಪಿ : ಸೆಪ್ಟೆಂಬರ್ 15ರ ಸೋಮವಾರದಂದು  ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು ಪರ್ಕಳ ಜಂಕ್ಷನ್ ಮತ್ತು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗಳನ್ನು ಕೋಟ ಅವರು ಪರಿಶೀಲಿಸಿದರು. ಬಳಿಕ ಇಳಿಜಾರುಗಳನ್ನು ವಿಸ್ತರಿಸಲು ಮತ್ತು ಕಾಮಗಾರಿ ಅವಧಿಯಲ್ಲಿ ಸುಗಮ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಎಂಜಿನಿಯರ್‌ಗಳಿಗೆ ನಿರ್ದೇಶಿಸಿದರು. ನಿರಂತರ ಸಂಚಾರವಿರುವ ಜಂಕ್ಷನ್ ಪ್ರದೇಶದಲ್ಲಿ ಅಪಘಾತಗಳನ್ನು ತಡೆಗಟ್ಟಲು ಸಂಚಾರ ನಿಯಂತ್ರಣ ಕಡ್ಡಾಯ

ಪರ್ಕಳ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಸೆ.15ರಿಂದ ಆರಂಭ; ಇಂದ್ರಾಳಿ ಸೇತುವೆ ಸೆ. 22ಕ್ಕೆ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಬೀಟಿಗೆ ನಿವಾಸಿ ಶಂಶುಧ್ದೀನ್ (32) ಮೃತ ದುರ್ದೈವಿ. ಶಂಶುಧ್ದೀನ್ ಅವರು ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಬಂಧಿಕರ ಮನೆಯಲ್ಲಿದ್ದ ಇವರು ಹತ್ತಿರದ ಅಂಗಡಿ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರೊಂದು ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಶಂಶುಧ್ದೀನ್ ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ತುಂಬೆ

ಬಂಟ್ವಾಳ : ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿ ಓರ್ವ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.13 ಕತ್ರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14( ನಾಳೆ) ರಿಂದ ಪುನರಾರಂಭಗೊಳ್ಳಲಿದೆ. ಮೇಘಸ್ಫೋಟ ಮತ್ತು ಭೂಕುಸಿತಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ಬಳಿಕ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಸ್ಥಾನಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು. ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top