ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಮಂಗಳೂರು ನಗರ ಪೊಲೀಸರು ಸೆಪ್ಟೆಂಬರ್ 12 ರ ಶುಕ್ರವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿದರು. ಪೊಲೀಸ್ ಆಯುಕ್ತರು 32 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸಾ ಪತ್ರಗಳನ್ನು ಮತ್ತು 121 ಸಿಬ್ಬಂದಿಗೆ ಪ್ರಮಾಣಪತ್ರಗಳೊಂದಿಗೆ ನಗದು ಬಹುಮಾನಗಳನ್ನು ನೀಡಿದರು. ಇದಲ್ಲದೆ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವಲ್ಲಿ ನೀಡಿದ […]

ಮಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ 172 ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳಿಂದ ಸಂಭವಿಸಿದ ಅಪಘಾತಗಳಿಂದ ಹಲವಾರು ಸಾವು ನೋವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಂತೂರು ವೃತ್ತದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಭಾಗವಾಗಿ, ಕಾಂಗ್ರೆಸ್ ನಾಯಕರು ಅಪಘಾತಗಳಲ್ಲಿ ಮೃತಪಟ್ಟವರ ಸಂಕೇತವಾಗಿ ನಕಲಿ ಮೃತದೇಹವನ್ನು ಹೊತ್ತುಕೊಂಡು ಪಂಪ್‌ವೆಲ್‌ನಲ್ಲಿರುವ ಎನ್‌ಎಚ್‌ಎಐ ಕಚೇರಿಗೆ ಮೆರವಣಿಗೆ ನಡೆಸಿದರು. ಅಲ್ಲಿ ಅವರು ಕಚೇರಿಗೆ ಘೇರಾವ್ ಹಾಕಲು ಪ್ರಯತ್ನಿಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. NHAI

ಮಂಗಳೂರು: ಹೆದ್ದಾರಿ ಪ್ರಾಧಿಕಾರ, ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇಂದು ಬೆಳಗ್ಗೆಯೇ ಬೆಂಗಳೂರಿನಲ್ಲಿ ಐಟಿ ದಾಳಿ  ನಡೆದಿದೆ. ನಗರದ ಪ್ರತಿಷ್ಠಿತ ಬಟ್ಟೆ ಶೋ ರೂಮ್ ಆಗಿರುವ ಪೋಥಿಸ್ ಮಳಿಗೆ ಮೇಲೆ ಐಟಿ ದಾಳಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಲೇಔಟ್, ಗಾಂಧಿನಗರದ ಅತೀ ದೊಡ್ಡ ಶೋ ರೂಮ್​ ಮೇಲೆ ಐಟಿ ದಾಳಿಯಾಗಿದೆ. 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರತ್ಯೇಕ ತಂಡವಾಗಿ ಪೋಥಿಸ್ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ

ಬೆಂಗಳೂರಿನ ಪ್ರತಿಷ್ಠಿತ ಬಟ್ಟೆ ಶೋರೂಮ್‌ಗೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು,, ಸೆ. 12. ಮಾದಕ ದ್ರವ್ಯ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾದಕ ದ್ರವ್ಯ ಸಮನ್ವಯ (ಓಅಔಖಆ)  ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ದುರುಪಯೋಗವನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಈ ಸಮಿತಿ ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಿವಿಧ

ಮಾದಕ ದ್ರವ್ಯ ನಿಯಂತ್ರಣ: ಸಮನ್ವಯದಿಂದ ಕಾರ್ಯಾಚರಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನಧಿಕೃತ ಲಾಟರಿ ಹಾವಳಿಯ ನಿಯಂತ್ರಣದ ಸಂಬಂಧ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಾಟರಿ ಮತ್ತು ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದ್ದು, ಈ ನಿಟ್ಟಿನಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವಂತೆ ಅವರು ತಿಳಿಸಿದರು. ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಅವರು ಮಾತನಾಡಿ,

ಮಟ್ಕಾ ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ವೆನ್‍ ಲಾಕ್ ಕ್ಯಾಥ್‍ ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್‌ ಕಡಬ) newskadaba.com ಸೆ. 12. ಹೃದ್ರೋಗಕ್ಕೆ ಸಂಬಂಧಪಟ್ಟ ಉನ್ನತ ಚಿಕಿತ್ಸೆ ಒದಗಿಸಲು ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿರುವ ಕ್ಯಾಥ್‍ಲ್ಯಾಬ್ ಘಟಕವನ್ನು ಶೀಘ್ರದಲ್ಲಿ ಕಾರ್ಯಚರಣೆಗೊಳಿಸುವಂತೆ ಜಿಲ್ಲಾಧಿಕಾರಿ ಹೆಚ್. ವಿ  ದರ್ಶನ್ ಸೂಚಿಸಿದ್ದಾರೆ. ಅವರು ಗುರುವಾರದಂದು ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ ಲಾಕ್ ಹೊಸ ಸರ್ಜಿಕಲ್ ಕಟ್ಟಡದ ತಳ ಅಂತಸ್ತಿನಲ್ಲಿ ಸುಸಜ್ಜಿತ ಕ್ಯಾಥ್‍ಲ್ಯಾಬ್ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು ಮತ್ತು ತಂತ್ರಜ್ಞಾನ ಸಿಬ್ಬಂದಿಗಳನ್ನು

ವೆನ್‍ ಲಾಕ್ ಕ್ಯಾಥ್‍ ಲ್ಯಾಬ್ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 : ಭೋಪಾಲ್‌: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಸೇನಾಧಿಕಾರಿಯೊಬ್ಬರು ಕಾರ್‌ನಲ್ಲಿ ಕುಳಿತಂತೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಪತ್ತೆಯಾಗಿದ್ದಾರೆ. ಬಹಳ ಹೊತ್ತನಿಂದ ಕಾರು ನಿಲ್ಲಿಸಿದ್ದನ್ನು ನೋಡಿದ ದಾರಿಹೋಕರು ಅವರನ್ನು ಗಮನಿಸಿದ್ದಾರೆ. ಬಾಗಿಲು ತೆಗೆದು ನೋಡಿದರೆ

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ

(ನ್ಯೂಸ್‌ ಕಡಬ) newskadaba.com,  ಸೆ.12 ಹಾಸನ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಗಳನ್ನು ತವರು ಮನೆಗೆ ಕರೆದೊಯ್ದಿದ್ದಕ್ಕೆ ಅತ್ತೆಯನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ನಡೆದಿದೆ. ರಾಮನಾಥಪುರದಲ್ಲಿ ರಸೂಲ್ ಎಂಬಾತ ಚಾಕುವಿನಿಂದ ಇರಿದು ಫೈರೋಜಾ ಬಾನು (55) ಎಂಬಾಕೆಯ ಕೊಲೆಗೈದಿದ್ದಾನೆ. 9 ವರ್ಷದ ಹಿಂದೆ ರಸೂಲ್, ಸಮೀರಾ ಬಾನು ಎಂಬಾಕೆಯ ಜೊತೆಗೆ ಮದುವೆಯಾಗಿದ್ದ. ಪದೇ ಪದೆ ಪತ್ನಿ ಸಮೀರಾ ಬಾನುಗೆ ರಸೂಲ್ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಿನ್ನೆ

ಹೆಂಡತಿಯನ್ನು ತವರಿಗೆ ಕರೆದೊಯ್ದ ಅತ್ತೆಯನ್ನೇ ಕೊಲೆಗೈದ ಅಳಿಯ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ!

(ನ್ಯೂಸ್‌ ಕಡಬ) newskadaba.com,  ಸೆ.12 ಮಂಗಳೂರು : ನಗರದ ಬಜಾಲ್‌ನ ಸಹೋದರ-ಸಹೋದರಿಯರಾದ 11 ವರ್ಷದ ವಿಯಾ ಸಾಯಿ ಮತ್ತು 5 ವರ್ಷದ ಲಹರ್ ಸಾಯಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ್ದಾರೆ. ಇವರ ಸಾಧನೆ ಮಂಗಳೂರಿಗರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ. ಬೆಂಗಳೂರಿನ ಕಿಂಗ್ಸ್ ಮೆಡಮ್ಸ್ ಹೋಟೆಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ, ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಪ್ರಶಸ್ತಿಯನ್ನು ಲಹರಿ ಸಾಯಿ ಹಾಗೂ ಸಹೋದರಿ ವಿಯಾ

ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರು ಸಹೋದರ – ಸಹೋದರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ

(ನ್ಯೂಸ್‌ ಕಡಬ) newskadaba.com,  ಸೆ.12 ವಾಷಿಂಗ್ಟನ್‌ : ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ ಪತ್ನಿ ಮತ್ತು ಮಗನ ಎದುರೇ ರುಂಡ ಕತ್ತರಿಸಿ ಕೊಲೆ ಮಾಡಲಾಗಿದೆ. ಡಲ್ಲಾಸ್ ಪೊಲೀಸರು ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್ ಅವರನ್ನು ಕೊಲೆ ಪ್ರಕರಣದಲ್ಲಿ ಶಂಕಿತ

ಗ ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top