ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆಯ ರಕ್ಷಣೆ; ಸ್ಥಳೀಯ ಮೀನುಗಾರರ ಸಮಯಪ್ರಜ್ಞೆಗೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,  ಜು .21: ನಗರದ ಮೀನುಗಾರಿಕಾ ಬಂದರಿನಲ್ಲಿ ನಿರ್ಮಾಣ ಹಂತದಲ್ಲಿರುವ ಡಾಕ್ ಸಮೀಪ ಆಕಸ್ಮಿಕವಾಗಿ ನೀರಿಗೆ ಬಿದ್ದ ಮಹಿಳೆಯೊಬ್ಬರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಮಂಗಳೂರು ನಗರದ ಮೀನುಗಾರಿಕಾ ಬಂದರ್. ಮಹಿಳೆ ನೀರಿಗೆ ಬಿದ್ದ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಮೀನುಗಾರರು, ತಡಮಾಡದೆ ಸಮುದ್ರಕ್ಕಿಳಿದು ಕೆಲವೇ ಕ್ಷಣಗಳಲ್ಲಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ. ಮೀನುಗಾರರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಮಹಿಳೆ ನೀರಿಗೆ ಬಿದ್ದದ್ದು ಆಕಸ್ಮಿಕವೇ ಅಥವಾ ಇತರ ಕಾರಣಗಳಿವೆಯೇ ಎಂಬ ಕುರಿತು ಪರಿಶೀಲನೆ […]

ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ನೀರಿಗೆ ಬಿದ್ದ ಮಹಿಳೆಯ ರಕ್ಷಣೆ; ಸ್ಥಳೀಯ ಮೀನುಗಾರರ ಸಮಯಪ್ರಜ್ಞೆಗೆ ಮೆಚ್ಚುಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 20. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ವೈಜ್ಞಾನಿಕ ಪರಿಹಾರ ಒದಗಿಸಬೇಕು ಹಾಗೂ ತೋಟಗಾರಿಕಾ ಮಿಷನ್ (MIDH) ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದ್ದಾರೆ.   ಸದನದಲ್ಲಿ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿದ ಸಂಸದರು, ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ತೋಟಗಳು ಪುನರಾವರ್ತಿತವಾಗಿ ಬರುವ ವಿವಿಧ ರೋಗಗಳಿಂದ ತೀವ್ರವಾಗಿ ಹಾನಿಗೊಳಗಾಗುತ್ತಿವೆ. ಈ ರೋಗಗಳ ನಿವಾರಣೆಗೆ ರೋಗ ನಿರ್ಣಯ, ತೋಟದ ನೈರ್ಮಲ್ಯ, ಪೋಷಕಾಂಶಗಳ ಪೂರೈಕೆ, ಸೂಕ್ತ ಡ್ರೈನೇಜ್ ವ್ಯವಸ್ಥೆ, ನಿರಂತರ ಮೇಲ್ವಿಚಾರಣೆ ಹಾಗೂ ವ್ಯಾಪಕವಾಗಿ ಬಾಧಿತಗೊಂಡ ತೋಟಗಳಲ್ಲಿ ರೀಪ್ಲಾಂಟೇಷನ್ ಮಾಡುವಂತಹ ಪೂರ್ಣ ಪ್ರಮಾಣದ ವೈಜ್ಞಾನಿಕ ನಿಯಂತ್ರಣ ಅಥವಾ ಚಿಕಿತ್ಸಾ ಕ್ರಮಗಳ ಅಗತ್ಯವಿದೆ. ಸದ್ಯ

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆ- ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ ನಿಯಮ 377ರಡಿ ತಿದ್ದುಪಡಿಗೆ ಒತ್ತಾಯ Read More »

ಕರಾವಳಿ, ಕರ್ನಾಟಕ

ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ

(ನ್ಯೂಸ್‌ ಕಡಬ) newskadaba.com,  ಜು .21:ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ ಬಳಿ ಮಂಗಳವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಜನರಲ್ ಮ್ಯಾನೇಜರ್ (ಜಿಎಂ) ರವಿ ಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತರೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನದ ದರ್ಶನಕ್ಕೆ ತೆರಳುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಮಂಗಳೂರಿನ ಪ್ರದೀಪ್ ಆಳ್ವಾ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುದೇಶ್ ರೈ ಗಂಭೀರವಾಗಿ

ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಕೋಟ್ಯಂತರ ರೂ. ವಂಚಿಸಿದ ಖದೀಮೆ!

(ನ್ಯೂಸ್‌ ಕಡಬ) newskadaba.com,  ಜು .21 ಬೆಳ್ತಂಗಡಿ: ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ₹87 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.ಆರೋಪಿ: ಅನಿಷಾ ಪಾಲನ್ನ (35)2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಸೈಟ್‌ ಮೂಲಕ ಪರಿಚಯವಾಗಿ, ಬಳಿಕ ಇನ್‌ಸ್ಟಾಗ್ರಾಂ ಹಾಗೂ ಫೋನ್ ಮೂಲಕ ಸಂಪರ್ಕದಲ್ಲಿದ್ದರು. ಮದುವೆಯಾಗುವುದಾಗಿ ನಂಬಿಸಿದ ಆರೋಪಿ, ವಿವಿಧ ಕಾರಣಗಳನ್ನು ನೀಡಿ ಹಂತ-ಹಂತವಾಗಿ ವಿವಿಧ ಬ್ಯಾಂಕ್‌ ಖಾತೆಗಳ ಮೂಲಕ ಒಟ್ಟು ₹87,22,710 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹಣ ಪಡೆದ ಬಳಿಕ

ಬೆಳ್ತಂಗಡಿ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಕೋಟ್ಯಂತರ ರೂ. ವಂಚಿಸಿದ ಖದೀಮೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ

(ನ್ಯೂಸ್‌ ಕಡಬ) newskadaba.com ಜು. 21. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣದ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ಶುಭರಾಜ್ ಎಂದು ಪೊಲೀಸರು ಗುರುತಿಸಲಾಗಿದೆ. ವರದಿಯ ಪ್ರಕಾರ, ಬೆಳ್ತಂಗಡಿಯ 16 ವರ್ಷದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯು, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ- ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

VTU ಮತ್ತು ಗೂಗಲ್ ನಡುವೆ ಮಹತ್ವದ ಒಪ್ಪಂದ: ವಿದ್ಯಾರ್ಥಿಗಳಿಗೆ ಎಐ, ಕ್ಲೌಡ್ ಕಂಪ್ಯೂಟಿಂಗ್ ಪ್ರಾಯೋಗಿಕ ತರಬೇತಿ

(ನ್ಯೂಸ್‌ ಕಡಬ) newskadaba.com,  ಜು .21:  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ಗೂಗಲ್ ಸಂಸ್ಥೆಗಳ ನಡುವೆ ಶೈಕ್ಷಣಿಕ ಹಾಗೂ ತಾಂತ್ರಿಕ ಸಹಭಾಗಿತ್ವದ ಮಹತ್ವದ ಒಪ್ಪಂದಕ್ಕೆ ಅಧಿಕೃತವಾಗಿ ಚಾಲನೆ ದೊರೆತಿದೆ.ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ , ಕ್ಲೌಡ್ ಕಂಪ್ಯೂಟಿಂಗ್ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ VTU ವಿದ್ಯಾರ್ಥಿಗಳಿಗೆ ಗೂಗಲ್ ಮೂಲಕ ಪ್ರಾಯೋಗಿಕ ತರಬೇತಿ ಸಿಗಲಿದೆ. ಶಿಕ್ಷಣ ಮತ್ತು ಉದ್ಯಮ ವಲಯದ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸುವ ಮೂಲಕ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಇದರ

VTU ಮತ್ತು ಗೂಗಲ್ ನಡುವೆ ಮಹತ್ವದ ಒಪ್ಪಂದ: ವಿದ್ಯಾರ್ಥಿಗಳಿಗೆ ಎಐ, ಕ್ಲೌಡ್ ಕಂಪ್ಯೂಟಿಂಗ್ ಪ್ರಾಯೋಗಿಕ ತರಬೇತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ!

(ನ್ಯೂಸ್ ಕಡಬ) newskadaba.com ಜು. 20. ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತೀಯ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಫೈನಲ್‌ ನಲ್ಲಿ ಆತಿಥೇಯ ಜಪಾನ್‌ ನ ವಿಶ್ವ ನಂ.3 ಆಟಗಾರ್ತಿ ಅಕಾನೆ ಯಮಗುಚಿ ಅವರನ್ನು 21-17, 21-17 ನೇರ ಗೇಮ್‌ ಗಳಲ್ಲಿ ಮಣಿಸಿದ ಸಿಂಧು, ಜಪಾನ್ ಓಪನ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಅಪೂರ್ವ ಸಾಧನೆ ಮಾಡಿದ್ದಾರೆ.  

ಜಪಾನ್ ಓಪನ್ ಚಾಂಪಿಯನ್- ಟೋಕಿಯೋದಲ್ಲಿ ಸಿಂಧು ಹೊಸ ಇತಿಹಾಸ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಅರ್ಜೆಂಟೀನಾಗೆ ಶಾಕ್: ವಿಶ್ವಕಪ್ ಎತ್ತಿಹಿಡಿದ ಸ್ಪೇನ್!

(ನ್ಯೂಸ್ ಕಡಬ) newskadaba.com ಜು. 20. ರೋಚಕದಿಂದ ಕೂಡಿದ್ದ ಫಿಫಾ ವಿಶ್ವಕಪ್ 2026ರ ಫೈನಲ್ ಮಹಾಸಮರದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಸ್ಪೇನ್ ತಂಡ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ಈ ಹೈ–ವೋಲ್ಟೇಜ್ ಪಂದ್ಯದ ನಿಗದಿತ 90 ನಿಮಿಷಗಳ ಅವಧಿಯಲ್ಲಿ ಎರಡೂ ತಂಡಗಳು ಗೋಲು ಗಳಿಸಲು ಸಾಧ್ಯವಾಗದಿದ್ದಾಗ ಪಂದ್ಯವು ಹೆಚ್ಚುವರಿ ಸಮಯಕ್ಕೆ ಜಾರಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಬದಲಿ ಆಟಗಾರ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು

ಅರ್ಜೆಂಟೀನಾಗೆ ಶಾಕ್: ವಿಶ್ವಕಪ್ ಎತ್ತಿಹಿಡಿದ ಸ್ಪೇನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಜಿಬ್ರಾ ಕ್ರಾಸಿಂಗ್ ಬಳಸಿ ರಸ್ತೆ ದಾಟಿದ ಶಿಸ್ತಿನ ನಾಯಿಗಳು ಜಾಲತಾಣಗಳಲ್ಲಿ ವೀಡಿಯೊ ಸದ್ದು!

(ನ್ಯೂಸ್ ಕಡಬ) newskadaba.com ಜು. 20. ಬೆಂಗಳೂರಿನಲ್ಲಿ ಬೀದಿ ನಾಯಿಗಳ ಗುಂಪೊಂದು ಟ್ರಾಫಿಕ್ ನಿಯಮ ಪಾಲಿಸಿ, ಪಾದಚಾರಿಗಳಿಗಾಗಿ ಮೀಸಲಾದ ಜೀಬ್ರಾ ಕ್ರಾಸಿಂಗ್ ಮೂಲಕವೇ ಕ್ರಮಬದ್ಧವಾಗಿ ರಸ್ತೆ ದಾಟುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣ ‘ಎಕ್ಸ್‘ (X) ನಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. “ಬೆಂಗಳೂರಿನಲ್ಲಿ ಜೀಬ್ರಾ ಕ್ರಾಸಿಂಗ್ ಬಳಸುತ್ತಿರುವ ಡೋಗೇಶ್” ಎಂಬ ತಮಾಷೆಯ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾದ ಈ ವಿಡಿಯೊ ಸಾವಿರಾರು ವೀಕ್ಷಣೆಗಳನ್ನು ಪಡೆದಿದೆ. ಜನನಿಬಿಡ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಗಮನಿಸಿ, ಶಿಸ್ತಿನಿಂದ ಜೀಬ್ರಾ ಕ್ರಾಸಿಂಗ್‌ ನಲ್ಲೇ ರಸ್ತೆ ದಾಟಿದ ನಾಯಿಗಳ

ಜಿಬ್ರಾ ಕ್ರಾಸಿಂಗ್ ಬಳಸಿ ರಸ್ತೆ ದಾಟಿದ ಶಿಸ್ತಿನ ನಾಯಿಗಳು ಜಾಲತಾಣಗಳಲ್ಲಿ ವೀಡಿಯೊ ಸದ್ದು! Read More »

ಕರ್ನಾಟಕ, ವೀಡಿಯೋ

ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಜು. 20. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣ ಭಸ್ಮವಾದ ಘಟನೆ ಬೆಳ್ತಂಗಡಿ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು–ಕುಕ್ಕಾಜೆ ಎಂಬಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ.     ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಜಾನುವಾರುಗಳಿಗೆ

ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top