ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ

(ನ್ಯೂಸ್ ಕಡಬ) newskadaba.com ಆ. 18. ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿ ದಿಲ್ಲಿಯ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಿಲ್ಲಿ ಪೊಲೀಸರ ಪ್ರಕಾರ, ದ್ವಾರಕಾದ ಸೆಕ್ಟರ್ 10ರಲ್ಲಿರುವ ದಿಲ್ಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ಶ್ರೀರಾಮ್ ವರ್ಲ್ಡ್ ಸ್ಕೂಲ್‌ಗೆ ಇಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ತಂಡಗಳು ಸ್ಥಳಕ್ಕೆ ತೆರಳಿ ಶೋಧ ಕಾರ್ಯಚರಣೆ ಆರಂಭಿಸಿದೆ. ಜುಲೈನಲ್ಲಿ ದಿಲ್ಲಿಯ 45 […]

ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ Read More »

ರಾಷ್ಟ್ರೀಯ ನ್ಯೂಸ್

ಕೋತಿಗಳ ದಾಳಿಗೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಆ. 18. ಜಾನುವಾರುಗಳಿಗೆ ಮೇವು ಸಂಗ್ರಹಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ 20 ಕೋತಿಗಳು ದಿಢೀರ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಬಿಹಾರದ ಮಧುಬಾನಿ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮನಾಥ್ ಚೌಧರಿ ಎಂದು ಗುರುತಿಸಲಾಗಿದೆ. ನಿವೃತ್ತ ಗುಮಾಸ್ತರಾಗಿದ್ದ ರಾಮನಾಥ್ ಚೌಧರಿಯವರ ರಕ್ಷಣೆಗೆ ಜನರು ಗುಂಪು ಸೇರುವ ವೇಳೆಗೆ ಚೌಧರಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಮಧುಬಾನಿ ಸದರ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಕೋತಿಗಳ ದಾಳಿಗೆ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ʼದಿಯಾʼ ಚಿತ್ರದ ನಿರ್ಮಾಪಕ ಸೇರಿ ಮೂವರ ವಿರುದ್ದ FIR

(ನ್ಯೂಸ್‌ ಕಡಬ) newskadaba.com, ಆ.18: ದಿಯಾ ಸಿನಿಮಾದ ನಿರ್ಮಾಪಕ ಕೃಷ್ಣ ಚೈತನ್ಯ ಸೇರಿದಂತೆ ಮೂವರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ. ವರ್ತೂರು ಬಳಿಯ ಜಮೀನು ಒಡೆತನದ ವಿಚಾರವಾಗಿ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಿನಾಪ್ಸೆ ಕನ್‌ಸ್ಟ್ರಕ್ಷನ್ಸ್ ಪ್ರೈವೇಟ್‌ ಲಿಮಿಟೆಡ್‌ನ ಕೃಷ್ಣ ಚೈತನ್ಯ‌, ಸಚಿನ್‌ ನಾರಾಯಣ್‌ ಮತ್ತು ಸಹಚರರು ಕಸವನಹಳ್ಳಿ ಗ್ರಾಮದ ಸರ್ವೆ ನಂ.52ರಲ್ಲಿನ 3 ಎಕರೆ 35 ಗುಂಟೆ ಜಮೀನಿಗೆ ನಕಲಿ ದಾಖಲೆಪತ್ರಗಳನ್ನು ಸೃಷ್ಟಿಸಿಕೊಂಡು ಅತಿಕ್ರಮ ಪ್ರವೇಶಿಸಿದ್ದಾರೆ. ಆ ಜಮೀನು ನನಗೆ ಸೇರಿದ್ದು, ಕೃಷ್ಣ ಚೈತನ್ಯ ಹಾಗೂ ಸಹಚರು

ʼದಿಯಾʼ ಚಿತ್ರದ ನಿರ್ಮಾಪಕ ಸೇರಿ ಮೂವರ ವಿರುದ್ದ FIR Read More »

ಕರ್ನಾಟಕ

ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ- ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಆ. 18. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಅವಕಾಶವಿಲ್ಲ. ರಾಜ್ಯ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ರವಿವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ. ದೇಶದ ಬಗ್ಗೆ ಒಳ್ಳೆಯತನ ಹೇಳುವ ಪಠ್ಯ ಬೇಕು. ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದೆವು. ಅದರಂತೆ ಪಠ್ಯ ಪರಿಷ್ಕರಿಸಲಾಗುವುದು ಎಂದರು. ಎನ್‌ಇಪಿಯಲ್ಲಿ ಪಠ್ಯ ರಚನೆಯ

ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ- ಮಧು ಬಂಗಾರಪ್ಪ Read More »

ಕರ್ನಾಟಕ

ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 19. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇದರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ

ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Read More »

ಕರಾವಳಿ

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಆ.18:‌‌ ಬೆಂಗಳೂರಿನ ಹೆಬ್ಬಾಳ ಭಾಗದ ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುತ್ತಿದೆ. ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಇಂದು ಉದ್ಘಾಟನೆಗೊಳ್ಳಲಿದೆ. ಇಂದು ಬೆಳಗ್ಗೆ 10.30ರ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಮೇಲ್ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಕಳೆದ 20 ವರ್ಷಗಳಿಂದ ಬಿಡಿಎ ಹೆಬ್ಬಾಳ ವಿಸ್ತರಿತ ಫ್ಲೈ ಓವರ್‌ ಕಾಮಗಾರಿ ನಡೆಸುತ್ತಾ ಇತ್ತು. ಇದೀಗ ಇದರ ಕಾಮಗಾರಿ ಪೂರ್ಣಗೊಂಡಿದೆ. ಉದ್ಘಾಟನೆಗೆ ಸಿದ್ದವಾಗಿದ್ದು, ಫ್ಲೈಓವರ್‌ನ್ನು ಹೂವಿನ ಹಾರ ಹಾಕಿ ಸಿಂಗಾರ ಮಾಡಲಾಗಿದೆ. ಈ ಫ್ಲೈ

ಇಂದು ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ Read More »

ಕರ್ನಾಟಕ

ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ: ತೀವ್ರ ಶೋಧ

(ನ್ಯೂಸ್‌ ಕಡಬ) newskadaba.com, ಆ.18:‌‌ ದ್ವಾರಕಾದ ದೆಹಲಿ ಪಬ್ಲಿಕ್‌ ಶಾಲೆ ಸೇರಿದಂತೆ ಅನೇಕ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸ್‌ ತಂಡಗಳು ಹಾಗೂ ಬಾಂಬ್‌ ನಿಷ್ಕ್ರಿಯ ದಳಗಳು ಸ್ಥಳಗೆ ಧಾವಿಸಿದ್ದು, ಶೋಧ ನಡೆಸುತ್ತಿವೆ. ದ್ವಾರಕಾದ ಸೆಕ್ಟರ್-19‌ ಬಳಿಯ ಸೇಂಟ್‌ ಥಾಮಸ್‌ ಶಾಲೆ, ಸೆಕ್ಟರ್‌-18ರ ದೆಹಲಿ ಇಂಟರ್‌ನ್ಯಾಷನಲ್‌ ಸ್ಕೂಲ್‌ ಎಡ್ಜ್‌, ಸೆಂಟ್ರಲ್‌ ಅಕಾಡೆಮಿ ಸ್ಕೂಲ್‌, ಸೆಕ್ಟರ್-10ರ ದ್ವಾರಕಾದ ಜಿಡಿ ಗೋನೆಕಾ ಸ್ಕೂಲ್‌, ಸೆಕ್ಟರ್-19ರ ದ್ವಾರಕಾ ಹಾಗೂ

ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ: ತೀವ್ರ ಶೋಧ Read More »

ರಾಷ್ಟ್ರೀಯ ನ್ಯೂಸ್

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.18:‌‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪಗೊಂಡಿದೆ. ಈ ಪರಿಣಾಮ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಗದಗ, ಮೈಸೂರು, ಬೀದರ್‌, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಬೆಳಗಾವಿ,

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

ನಾಳೆ (ಆ.18) ದಕ್ಷಿಣ ಕನ್ನಡ ಜಿಲ್ಲಾದ್ಯಾಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಆ. 18. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ನಾಳೆ ಆಗಸ್ಟ್ 18ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಾಳೆ (ಆ.18) ದಕ್ಷಿಣ ಕನ್ನಡ ಜಿಲ್ಲಾದ್ಯಾಂತ ಶಾಲೆಗಳಿಗೆ ರಜೆ Read More »

ಕರಾವಳಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್

(ನ್ಯೂಸ್‌ ಕಡಬ) newskadaba.com, ಆ.17:‌ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಸಂಬಂಧ ಯಾರೂ ಕೂಡ ರಾಜಕೀಯ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ನಾವು ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಹೇಳಿದ್ದಾರೆ. ತನಿಖೆ ನಡೆಯುವ ವೇಳೆ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್ Read More »

ಕರ್ನಾಟಕ
Scroll to Top