ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ..!

(ನ್ಯೂಸ್‌ ಕಡಬ) newskadaba.com, ಆ.05: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರು ಹೊಸ ವಿಶ್ವ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಅವರು ಭಾರತದ ಮಾತ್ರವಲ್ಲ ವಿಶ್ವದ ಸ್ಟಾರ್‌ ನಟಿಯರಲ್ಲಿ ಒಬ್ಬರು ಎಂದು ಸಾಬೀತು ಮಾಡಿದ್ದಾರೆ. ದೀಪಿಕಾ ಅವರು ಸೋಶಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಇವರು ಇನ್‌ಸ್ಟಾಗ್ರಾಂನಲ್ಲಿ ಸುಮಾರು 8 ಕೋಟಿ ಫಾಲೋವರ್‌ಗಳನ್ನು ಹೊಂದಿದ್ದಾರೆ. ಇವರು ಫೋಟೋಶೂಟ್‌, ಸಿನಿಮಾ ಮಾಹಿತಿ ಸೇರಿದಂತೆ ಜಾಹೀರಾತುಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ ದೀಪಿಕಾ ಹಂಚಿಕೊಂಡಿದ್ದ ರೀಲ್ಸ್ ಒಂದು ವಿಶ್ವದಲ್ಲೇ ಅತೀ ಹೆಚ್ಚು ವೀಕ್ಷಣೆಗೆ ಒಳಪಟ್ಟ ರೀಲ್ಸ್‌ […]

ಹೊಸ ವಿಶ್ವ ದಾಖಲೆ ಬರೆದ ದೀಪಿಕಾ ಪಡುಕೋಣೆ..! Read More »

ಸಿನಿಮಾ

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌(79) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್‌ ಮಲಿಕ್‌ ಅವರು ಬಿಹಾರದ ರಾಜ್ಯಪಾಲರೂ ಆಗಿದ್ದರು.

ಜಮ್ಮು-ಕಾಶ್ಮೀರದ ಮಾಜಿ ಗವರ್ನರ್‌ ನಿಧನ Read More »

ರಾಷ್ಟ್ರೀಯ ನ್ಯೂಸ್

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com, ಆ.05: ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.   ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

(ನ್ಯೂಸ್‌ ಕಡಬ) newskadaba.com, ಆ.05: ರೇಪ್‌ ಕೇಸ್‌ನಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಶೃಂಗೇರಿ ಶಾರದಾಂಬೆಗೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ.4ರ ರಾತ್ರಿಯೇ ಬಂದು ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದ ರೇವಣ್ಣ, ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು ಬೆಳ್ಳಂ ಬೆಳಗ್ಗೆಯೇ ರೇವಣ್ಣ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದಿದ್ದಾರೆ.

ಪ್ರಜ್ವಲ್‌ ಹುಟ್ಟುಹಬ್ಬ: ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ Read More »

ಕರ್ನಾಟಕ

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

(ನ್ಯೂಸ್‌ ಕಡಬ) newskadaba.com, ಆ.05: ಬೆಳ್ತಂಗಡಿ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.   ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌

(ನ್ಯೂಸ್‌ ಕಡಬ) newskadaba.com, ಆ.05: ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯದೇ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದೆ. ಮಹಿಳೆಯರಿಗೆ ಈ ಸರ್ಕಾರ ಉಚಿತ ಬಸ್‌ ಎಂದು ಹೇಳಿತ್ತು. ಇಂದು ಫ್ರೀ ಬಸ್‌ ಕಟ್‌ ಆಗಿದೆ. ಸರ್ಕಾರ ಪಾಪರ್‌ ಆಗಿಲ್ಲ, ನಮ್ಮ ಬಳಿ ಹಣ ಕೊಳೆಯುತ್ತಿದೆ, ಖಜಾನೆ ತುಂಬಿ ಆಚೆ ಹೋಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌ Read More »

ಕರ್ನಾಟಕ

ಕಡಬದಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಆ.05. ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳವಾರದಂದು ಕಡಬ ಪೇಟೆಯಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ ನಡೆಯಿತು. ಆರ್‌ಎಎಫ್ ಪಡೆಯ ಜೊತೆಗೆ ಕಡಬ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾದರು. ಪಥ ಸಂಚಲನವು ಕಡಬ ಅನುಗ್ರಹ ಸಭಾಭವನ ಹಾಲ್ ಸಮೀಪದಿಂದ ಪ್ರಾರಂಭವಾಗಿ, ಪೇಟೆಯ ಮುಖಾಂತರ ಸಾಗಿದ್ದು ಸೈಂಟ್ ಜೋಕಿಂ ಚರ್ಚ್ ವರೆಗೆ ನಡೆಯಿತು. ಸಾರ್ವಜನಿಕರಲ್ಲಿ ಭದ್ರತೆ ಹಾಗೂ ವಿಶ್ವಾಸ ಮೂಡಿಸುವ ಉದ್ದೇಶದಿಂದ ಪಥ ಸಂಚಲನ ನಡೆಯಿತು. ಈ

ಕಡಬದಲ್ಲಿ ಆರ್‌ಎಎಫ್ ಪಡೆಯಿಂದ ಪಥ ಸಂಚಲನ Read More »

ಕರಾವಳಿ

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.05: ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರ ಹಿತ ಕಾಪಾಡುವುದು ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ Read More »

ಕರ್ನಾಟಕ

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ

(ನ್ಯೂಸ್‌ ಕಡಬ) newskadaba.com, ಆ.05: ಮೈಸೂರು: ಅಕ್ರಮವಾಗಿ ನೆರೆಯ ಕೇರಳಕ್ಕೆ ಯೂರಿಯಾ ರಸಗೊಬ್ಬರ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. 1699 ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. 73, ಡಿ ನಂಜಗೂಡಿನ ಗೋಧಾಮಿನಿಂದ ಯೂರಿಯಾ ರಸಗೊಬ್ಬರ ತುಂಬಿಕೊಂಡು ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಅನುಕೂಲವಾಗಲಿದೆ. ಬೆಲೆ ಬದಲಾವಣೆಯ ಅನ್ವಯ, ಅಸೆಕ್ಲೋಫೆನಾಕ್, ಪ್ಯಾರಸಿಟಮಾಲ್ ಮತ್ತು ಟ್ರಿಪ್ಸಿನ್ ಕೈಮೊಟ್ರಿಪ್ಸಿನ್ ಅಂಶಗಳುಳ್ಳ, ಕುಮ್ಸ್ ಡ್ರಗ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ತಯಾರಿಸಿ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಮಾರಾಟ ಮಾಡಿದ ಔಷಧಿಗೆ 13 ರು.,

35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್
Scroll to Top