ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ ಅಂಗಡಿ ಒಳಗೆ ಸೇರಿ ಪಾರಾದ ಶಾಲಾ ಮಕ್ಕಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 28. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಬಸ್ ನಿಲ್ದಾಣದ ಬಳಿ‌ ಕಾಡಾನೆಯೊಂದು ಪ್ರತ್ಯಕ್ಷಗೊಂಡಿದ್ದು, ಬಸ್ ಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳು ಅಲ್ಲೇ ಪಕ್ಕದಲ್ಲಿದ್ದ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿದ್ದ ಶಾಲಾ ಮಕ್ಕಳು, ಸಾರ್ವಜನಿಕರು ಒಂಟಿ ಸಲಗ ಬರುವುದನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ. ಬಳಿಕ ಆನೆ ಕಾಡಿನತ್ತ ಹೆಜ್ಜೆ ಹಾಕಿದ್ದು, ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಕಳೆದ ಕೆಲ […]

ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ ಅಂಗಡಿ ಒಳಗೆ ಸೇರಿ ಪಾರಾದ ಶಾಲಾ ಮಕ್ಕಳು Read More »

ಕರಾವಳಿ

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಗುಡ್ಡ ಕುಸಿತ ಬೆಂಗಳೂರು- ಮಂಗಳೂರು ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಜು. 28. ವಿಪರೀತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತಗೊಂಡ ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆದ ಘಟನೆ ಮಣ್ಣಗುಡ್ಡೆ ಎಂಬಲ್ಲಿ ನಡೆದಿದೆ.   ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿದ್ದರಿಂದ ಸೋಮವಾರ ಬೆಳಗಿನ ಜಾವದಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಗುಡ್ಡ ಕುಸಿತವಾಗಿದ್ದು,

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಗುಡ್ಡ ಕುಸಿತ ಬೆಂಗಳೂರು- ಮಂಗಳೂರು ಸಂಚಾರ ಬಂದ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 28. ಮುಂಬರುವ ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಮಹತ್ವದ ಸಭೆಯು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಕಳಾರದ ರಮಳಾನ್ ಸನ್ ರೈಸ್ ರವರ ಮನೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಅನುಮೋದನೆಗಾಗಿ ಜಿಲ್ಲಾ ಸಮಿತಿಗೆ ಕಳಿಸಲಾಗಿದೆ. ಗ್ರಾಮ ಪಂಚಾಯತ್ ನಿಂದ ಮೇಲ್ದರ್ಜೆಗೆ ಏರಿದ್ದರೂ ಕಳೆದ ಐದು ವರ್ಷಗಳಿಂದ ಚುನಾವಣೆ ನಡೆಯದೇ

ಕಡಬ ಪಟ್ಟಣ ಪಂಚಾಯತ್ ಚುನಾವಣೆ ಎಸ್‌ಡಿಪಿಐ ಅಭ್ಯರ್ಥಿಗಳು ಕಣಕ್ಕೆ Read More »

ಕರಾವಳಿ

‘ಬಿಜೆಪಿಯಿಂದ ರೈತಪರ ಹೋರಾಟ’-ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಜು. 26. ರಾಜ್ಯ ಸರಕಾರವು ರಸಗೊಬ್ಬರ ವಿಚಾರದಲ್ಲಿ ಪೂರ್ವತಯಾರಿ ಮಾಡಿಲ್ಲ. ತೊಗರಿ ಬೆಳೆಯುವ ಗುಲ್ಬರ್ಗ, ಬೇರೆ ಬೇರೆ ಬೆಳೆ ಬೆಳೆಯುವ ಗದಗ, ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ರಸಗೊಬ್ಬರ ಬೇಕೆಂಬ ಪೂರ್ವಾಪರ ಲೆಕ್ಕಾಚಾರ ಇಲ್ಲದೇ ರೈತರಿಗೆ ಆತಂಕದ ಸ್ಥಿತಿ ಉಂಟಾಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದುಪ್ಪಟ್ಟು ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟವಾಗುತ್ತಿದೆ. ಕಳ್ಳದಂಧೆಯೂ ನಡೆಯುತ್ತಿದೆ. ಕಾಂಗ್ರೆಸ್

‘ಬಿಜೆಪಿಯಿಂದ ರೈತಪರ ಹೋರಾಟ’-ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

(ನ್ಯೂಸ್ ಕಡಬ) newskadaba.com ಜು. 26. ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್‌ಪೆಕ್ಟರ್ ಆಶಿಶ್ ದಿಮ್ರಿ ನೇತೃತ್ವದ ಎಸ್‌ಡಿಆರ್‌ಎಫ್ ಸೋನ್‌ಪ್ರಯಾಗ್‌ನ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಿದರು. ಬಳಿಕ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆಯ ಸಮಯದಲ್ಲಿ, ಎಸ್‌ಡಿಆರ್‌ಎಫ್ ತಂಡ ನಿರ್ಬಂಧಿತ ಮಾರ್ಗದ ಹೊರಗೆ ಸಿಲುಕಿಕೊಂಡಿದ್ದ ಸುಮಾರು 100 ಯಾತ್ರಿಕರನ್ನು ರಕ್ಷಣೆ ಮಾಡಿದೆ ಎಂದು

ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲೇ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಜು. 26. ಬಿಹಾರದ ಬೋಧ್ ಗಯಾದ BMP-3 ಪರೇಡ್ ಮೈದಾನದಲ್ಲಿ ಗೃಹ ರಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದ ಮಹಿಳೆಯೊಬ್ಬರು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ಚಾಲಕ ಮತ್ತು ಟೆಕ್ನೀಷಿಯನ್‌ನಿಂದ ಅತ್ಯಾಚಾರಕ್ಕೊಳಗಾದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ ಆನಂದ್ ಕುಮಾರ್ ಅವರ ಪತ್ರಿಕಾ ಪ್ರಕಟಣೆಯ ಪ್ರಕಾರ, ಓಟದ ಸ್ಪರ್ಧೆಯ ವೇಳೆ ಮಹಿಳೆಯು ಮೂರ್ಛೆ ಹೋಗಿದ್ದರಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲೇ ಅತ್ಯಾಚಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ

(ನ್ಯೂಸ್ ಕಡಬ) newskadaba.com ಜು. 26. ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ  ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂಎನ್ ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಎಸ್‌ಐಟಿಯ

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

(ನ್ಯೂಸ್ ಕಡಬ) newskadaba.com ಜು. 26. ಹೈದರಾಬಾದ್: ತೆಲಂಗಾಣದ ಯಾದಾದ್ರಿಯಲ್ಲಿ ಪೊಲೀಸ್ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಡಿಎಸ್ಪಿ ಅಧಿಕಾರಿಗಳು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಡಿಎಸ್ಪಿಗಳಾದ ಚಂದ್ರಕರ್ ರಾವ್ ಮತ್ತು ಶಾಂತಾ ರಾವ್‌ರನ್ನು ಮೃತರೆಂದು ಗುರುತಿಸಲಾಗಿದೆ. ಎಎಸ್ಪಿ ಪ್ರಸಾದ್ ಮತ್ತು ಹೆಡ್ ಕಾನ್‌ಸ್ಟೇಬಲ್ ನರಸಿಂಗ್ ರಾವ್ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಹೈದ್ರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!

(ನ್ಯೂಸ್ ಕಡಬ) newskadaba.com ಜು. 26. ರಾಂಚಿ: ಜಾರ್ಖಂಡ್‌ನಲ್ಲಿ ಶನಿವಾರ ಮುಂಜಾನೆ ನಡೆದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು. ಈ ವೇಳೆ

3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ರಾಜ್ಯ ಸರ್ಕಾರ ವಿಳಂಬ ನೀತಿ’- ಕ್ಯಾ. ಚೌಟ

(ನ್ಯೂಸ್ ಕಡಬ) com ಜು. 26. ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ.

‘ಮಂಗಳೂರಿನ ಲಕ್ಷದ್ವೀಪ ಜೆಟ್ಟಿ ಯೋಜನೆ ಕಾರ್ಯಗತಕ್ಕೆ ರಾಜ್ಯ ಸರ್ಕಾರ ವಿಳಂಬ ನೀತಿ’- ಕ್ಯಾ. ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top