ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ

(ನ್ಯೂಸ್‌ ಕಡಬ)newskadaba.com ಜು.26: ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತದೆ. ಸತತ ಮೂರು ತಿಂಗಳ ಸಮರದ ಬಳಿಕ ಭಾರತೀಯ ಸೇನೆ ಪಾಕಿಸ್ತಾನವನ್ನು ಸೆದೆಬಡಿದು, 1999 ರಲ್ಲಿ ಈ ದಿನದಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್‌ನ ಯಶಸ್ಸನ್ನು ಘೋಷಿಸಿತು. ಪಾಕಿಸ್ತಾನಿ ಒಳನುಸುಳುಕೋರರು ಮತ್ತು ಸೈನಿಕರು ಕಾರ್ಗಿಲ್‌ನ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಾಗ ಪ್ರಾರಂಭವಾದ ಈ ಯುದ್ಧವು ಭಾರತೀಯ ಸೇನೆಯ ದೃಢ ಸಂಕಲ್ಪ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಯಿತು. 1998-99ರ ಚಳಿಗಾಲದಲ್ಲಿ ಕಾರ್ಗಿಲ್‌ನ ಕಣಿವೆಗಳಲ್ಲಿ […]

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

(ನ್ಯೂಸ್‌ ಕಡಬ)newskadaba.com ಜು.26: ‘ಡೆವಿಲ್’ ಸಿನಿಮಾ ಶೂಟಿಂಗ್ ಸಲುವಾಗಿ ಥೈಲ್ಯಾಂಡ್‌ಗೆ ತೆರಳಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ರಾತ್ರಿ 11:45ರ ವಿಮಾನದಲ್ಲಿ ದೇವನಹಳ್ಳಿಯ ಬಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಕಳೆದ 10 ದಿನಗಳ ಹಿಂದೆ ‘ಡೆವಿಲ್’ ಸಿನಿಮಾ ಶೂಟಿಂಗ್‌ಗೆಂದು ನಟ ದರ್ಶನ್, ಪತ್ನಿ ಹಾಗೂ ಮಗನೊಂದಿಗೆ ಥೈಲ್ಯಾಂಡ್‌ಗೆ ತೆರಳಿದ್ದರು. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು

ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್ Read More »

ಸಿನಿಮಾ

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..!

(ನ್ಯೂಸ್‌ ಕಡಬ)newskadaba.com ಜು.25: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್‌ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್‌ ಹಾಕಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..! Read More »

ಕರ್ನಾಟಕ

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ

(ನ್ಯೂಸ್ ಕಡಬ) newskadaba.com ಜು. 26. ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ, ಇದೇ ವೇಳೆ ರಾಜ್ಯದಲ್ಲಿ ರಸಗೊಬ್ಬರಗಳ ಕೊರತೆ ಇಲ್ಲ ಎಂದು ರಾಜ್ಯ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, ಬೇಡಿಕೆ ಕಡಿಮೆಯಿರುವ ಜಿಲ್ಲೆಗಳಿಂದ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಗೊಬ್ಬರ ವರ್ಗಾವಣೆ ಮಾಡಿ ಸರಿದೂಗಿಸಲಾಗುತ್ತಿದೆ. ಹೀಗಾಗಿ

ಯೂರಿಯಾ ಅಭಾವದ ಬಗ್ಗೆ ಕೇಂದ್ರ ಸಚಿವರಿಗೆ CM ಪತ್ರ: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲವೆಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ ಚಲುವರಾಯಸ್ವಾಮಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜು. 26. ನವದೆಹಲಿ: ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಗಳನ್ನು ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೀಡಿದ ಈ ತೀರ್ಪು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ ಪಾಸ್ ಗೆ 33% ಅಂಕ- ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ

(ನ್ಯೂಸ್ ಕಡಬ) com ಜು. 26. ಸಿಬಿಎಸ್‌ಇ ಮಾದರಿಯಲ್ಲಿ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಪಾಸ್‌ ಅಂಕಗಳ ಪ್ರಮಾಣವನ್ನು ಆಂತರಿಕ ಮೌಲ್ಯಮಾಪನದ ಅಂಕಗಳನ್ನೊಳನ್ನು ಸೇರಿಸಿ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಾವಳಿ ಅಧಿಸೂಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಶಾಲಾ ಸಂಘಟನೆಗಳು, ಪೋಷಕರು ಹಾಗೂ ಶಿಕ್ಷಕ ಸಂಘಟನೆಗಳು ಈ ನಡೆ ಸ್ವಾಗತಿಸಿದರೆ, ಕೆಲ ಶಿಕ್ಷಣದ ತಜ್ಞರು ಶೈಕ್ಷಣಿಕ ದಿವಾಳಿತನಕ್ಕೆ ಇದು ಕೈಗನ್ನಡಿ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾಮ್ಸ್‌

ಎಸ್ಸೆಸ್ಸೆಲ್ಸಿ ಪಾಸ್ ಗೆ 33% ಅಂಕ- ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ Read More »

ಕರ್ನಾಟಕ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
crime, arrest, suspected

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಜು. 26. ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ

ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ “ಕಾರ್ಗಿಲ್ ವಿಜಯ್ ದಿವಸ್” ಜುಲೈ 26

(ನ್ಯೂಸ್ ಕಡಬ) newskadaba.com ಜು. 26. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ. ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999 ಮೇ 3 ರಂದು ಆರಂಭವಾಗಿ ಜುಲೈ 26 ರಂದು ಅಧಿಕೃತವಾಗಿ ಭಾರತದ ವಿಜಯದೊಂದಿಗೆ ಮುಕ್ತಾಯವಾಯಿತು. ಈ

ಅಮರ್ ರಹೇ ಜವಾನ್… ಸೈನಿಕರಿಗೊಂದು ಸಲಾಂ “ಕಾರ್ಗಿಲ್ ವಿಜಯ್ ದಿವಸ್” ಜುಲೈ 26 Read More »

ವಿಶೇಷ ಲೇಖನಗಳು

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವೇದಾ ಕೃಷ್ಣಮೂರ್ತಿ

(ನ್ಯೂಸ್‌ ಕಡಬ)newskadaba.com ಜು.25: ಭಾರತದ ಅನುಭವಿ ಮಹಿಳಾ ಕ್ರಿಕೆಟರ್, ಕನ್ನಡತಿ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2011ರಲ್ಲಿ ಕೇವಲ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕಡೂರು ಮೂಲದ ವೇದಾ ಕೃಷ್ಣಮೂರ್ತಿ ಇದೀಗ ಸ್ಮರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸಣ್ಣ ಹಳ್ಳಿಯಿಂದ ಬಂದ ಆಟಗಾರ್ತಿ, ಇಡೀ ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ವೇದಾ ಇದೀಗ ಭಾವನಾತ್ಮಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ಚಿಕ್ಕಮಗಳೂರಿನ ಸಣ್ಣ ನಗರ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವೇದಾ ಕೃಷ್ಣಮೂರ್ತಿ Read More »

ಕ್ರೀಡಾ ನ್ಯೂಸ್
Scroll to Top