ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ

(ನ್ಯೂಸ್‌ ಕಡಬ)newskadaba.com ಜು.25: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಪತ್ರದಲ್ಲಿ, ರಾಜ್ಯಕ್ಕೆ ಒಟ್ಟು 11.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಕೊಡಬೇಕಿತ್ತು. ಇಲ್ಲಿಯವರೆಗೆ 5.16 ಲಕ್ಷ ಮೆಟ್ರಿಕ್ ಟನ್ ಮಾತ್ರ ಕೊಡಲಾಗಿದೆ. ರಾಜ್ಯಕ್ಕೆ ಇನ್ನೂ 6.80 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬರಬೇಕಿದೆ. ಆದರೆ ಕೆಲ ಫರ್ಟಿಲೈಸರ್ ಕಂಪನಿಗಳು ಕೊರತೆಯ ಕಾರಣ ಹೇಳಿ ಯೂರಿಯಾ ಒದಗಿಸುತ್ತಿಲ್ಲ. […]

ರಾಜ್ಯಕ್ಕೆ ಕೊಡಬೇಕಾದ ಯೂರಿಯಾ ಕೂಡಲೇ ಬಿಡುಗಡೆ ಮಾಡಿ; ಕೇಂದ್ರ ಸಚಿವರಿಗೆ ಸಿಎಂ ಸಿದ್ದು ಪತ್ರ Read More »

ಕರ್ನಾಟಕ

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು

(ನ್ಯೂಸ್‌ ಕಡಬ)newskadaba.com ಜು.25: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನದ ನಾಲ್ಕು ಆನೆಗಳನ್ನು ಗುರುವಾರ ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು. ‘ಬನ್ನೇರುಘಟ್ಟ ಉದ್ಯಾನವು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್‌ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್‌ನ ಹಿಮೇಜಿ ಸೆಂಟ್ರಲ್‌ ಪಾರ್ಕ್ಗೆ ಕೊಡಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್‌ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತಲಾ

ವಿಮಾನ ಏರಿ ಜಪಾನ್‌ಗೆ ಹೊರಟ ಬನ್ನೇರುಘಟ್ಟದ ಆನೆಗಳು Read More »

ಕರ್ನಾಟಕ

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..!

(ನ್ಯೂಸ್‌ ಕಡಬ)newskadaba.com ಜು.25: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಮತ್ತೆ ವಜಾಗೊಳಿಸಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ..! Read More »

ಕರ್ನಾಟಕ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

(ನ್ಯೂಸ್‌ ಕಡಬ)newskadaba.com ಜು.25: ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಪಂಚಭಾಷಾ ತಾರೆ ಬಿ ಸರೋಜಾದೇವಿಯವರು 87ನೇ

ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ Read More »

ಸಿನಿಮಾ
Death, deadbody, Waterfall

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ಅವರ ಮೃತದೇಹವು ಇಂದು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಚಾಲಕ ಹೊನ್ನಪ್ಪ ಅವರು ನಾಪತ್ತೆಯಾಗಿದ್ದು ಅವರಿಗಾಗಿ ಮೂರು ದಿನಗಳಿಂದ ಎಸ್.ಡಿ.ಆರ್.ಎಫ್, ಈಶ್ವರ್ ಮಲ್ಪೆ ತಂಡ, ಅಗ್ನಿ ಶಾಮಕ ತಂಡ ಹಾಗೂ ಅಂಬ್ಯುಲೆನ್ಸ್ ಚಾಲಕ ಮಾಲಕರ ತಂಡ ತೀವ್ರ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಇದೀಗ ಅವರ ಮೃತದೇಹವು ಕುಮಾರಧಾರ

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜು. 25. ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನಿಗೆ 35 ವರ್ಷ ಪ್ರಾಯವಿರಬಹುದು ಎಂದು ಅಂದಾಜಿಸಲಾಗಿದೆ. ಗುರುವಾರ ಬೆಳಗ್ಗೆ 11ಗಂಟೆ ಸುಮಾರಿಗೆ ಗೂಡ್ಸ್ ರೈಲು ಬಿ.ಸಿ.ರೋಡ್ ನಿಲ್ದಾಣದಲ್ಲಿ ಸಾಗುವ ವೇಳೆ ಆ ವ್ಯಕ್ತಿಯು ಹಳಿಯಲ್ಲಿ ಮಲಗಿದ್ದು, ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ

ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಕುರಿತು ಗುರುವಾರದಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ

ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್- ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ

ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ

(ನ್ಯೂಸ್ ಕಡಬ) newskadaba.com  ಜು. 25.  ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು. ಇದೀಗ ಮತ್ತೆ ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮವಾಗಿದೆ. ಜುಲೈ 22ರ ಸಂಜೆ ಮೊದಲ ಬಾರಿಗೆ ಭಾರೀ ವಾಹನ ದಟ್ಟಣೆ ಕಂಡುಬಂದಿತ್ತು. ಜುಲೈ 23ರಂದು ಇಡೀ ದಿನ ಕೊಟ್ಟಾರ-ಪಣಂಬೂರು ಮಾರ್ಗದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನಗಳ ಸಂಚಾರವನ್ನು ಪರಿಣಾಮಕಾರಿಯಾಗಿ ಸುಗಮಗೊಳಿಸಲು

ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ Read More »

ಕರಾವಳಿ

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

(ನ್ಯೂಸ್ ಕಡಬ) newskadaba.com  ಜು. 25.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಜನಸಾಮಾನ್ಯರು, ಕಾರ್ಮಿಕರು ಹಾಗೂ ಈ ಉದ್ಯಮವನ್ನು ನಂಬಿಕೊಂಡಿರುವ ಲಕ್ಷಾಂತರ ಕುಟುಂಬಗಳ ಹಿತ ಕಾಪಾಡುವುದಕ್ಕೆ ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.   ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಸರ್ಕಾರದ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಕ್ರಮಗಳಿಂದಾಗಿ ದಕ್ಷಿಣ ಕನ್ನಡದಲ್ಲಿ ಈಗ ಕಟ್ಟಡ

ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ Read More »

ಕರಾವಳಿ

ಸುರತ್ಕಲ್ – ಬಿ.ಸಿ. ರೋಡ್ ಹೆದ್ದಾರಿ ವ್ಯಾಪ್ತಿ ಎನ್ಎಚ್ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com  ಜು. 25. ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.   ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾದ ಸಂಸದರು, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ ತೀರಾ ಹದಗೆಟ್ಟಿದ್ದು, ಈ ರಸ್ತೆಯು ಪ್ರಸ್ತುತ ವಿಶೇಷ ಉದ್ದೇಶದ ಘಟಕ (SPV)ವಾಗಿ ರಚಿಸಲಾದ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಣೆ ನಿರ್ವಹಣೆ ಲಿಮಿಟೆಡ್ (NHLML) ವ್ಯಾಪ್ತಿಗೆ ಬರುತ್ತದೆ. ಈ ರಸ್ತೆ ನಿರ್ವಹಣೆಗೆ ನಿರ್ದಿಷ್ಟ ಏಜೆನ್ಸಿ ಇಲ್ಲದಿರುವುದು, ನಿಧಿಯ ಕೊರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಮಾರ್ಗದ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಮಳೆಗಾಲದಲ್ಲಿ ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿ ವಾಹನ ಸಂಚಾರ ದುಸ್ತರವಾಗುತ್ತದೆ ಎಂದು ಅವರು ಸಚಿವರಿಗೆ ಮನವರಿಕೆ ಮಾಡಿದ್ದಾರೆ.   ಈ ಗಂಭೀರ ಸಮಸ್ಯೆ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸುರತ್ಕಲ್ -ಬಿ.ಸಿ. ರೋಡ್ ಹೆದ್ದಾರಿಯನ್ನು ಎನ್ ಹೆಚ್ಎಐ ವ್ಯಾಪ್ತಿಗೆ ತಂದು ನವೀಕರಣ

ಸುರತ್ಕಲ್ – ಬಿ.ಸಿ. ರೋಡ್ ಹೆದ್ದಾರಿ ವ್ಯಾಪ್ತಿ ಎನ್ಎಚ್ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ Read More »

ರಾಷ್ಟ್ರೀಯ ನ್ಯೂಸ್
Scroll to Top