ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು (ಜುಲೈ 24) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು.24. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದಾಗಿ ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರದಂದು ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 24 ರಂದು ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು (ಜುಲೈ 24) ರಜೆ ಘೋಷಣೆ Read More »

ಕರಾವಳಿ

ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಶೈಕ್ಷಣಿಕ ವರ್ಷ 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ಮಂಗಳ ಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು/ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾದ ಸೀಟುಗಳು) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲಾಗುವ ಸ್ನಾತಕೋತ್ತರ/ ಬಿ.ಪಿ.ಎಡ್/ಡಿಪ್ಲೋಮಾ/ ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದುಕೊಳ್ಳಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿವಿ: ವಿವಿಧ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಡಾ:ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಪ್ರತಿಷ್ಠಿತ ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿಯ ಭೂ ರಹಿತ ಮಹಿಳಾ ಅರ್ಜಿದಾರರಿಂದ ಎಡಮಂಗಲ (ಕಡಬ ತಾಲೂಕು), ಸುಳ್ಯ ಕಸಬ (ಸುಳ್ಯ), ಜಾಲ್ಸೂರು (ಸುಳ್ಯ), ಕಡೇಶಿವಾಲಯ (ಬಂಟ್ವಾಳ ತಾಲೂಕು) ಗ್ರಾಮಗಳಲ್ಲಿ ಅರ್ಜಿಗಳು ಸ್ವೀಕೃತಗೊಂಡಿರುತ್ತದೆ. ಫಲಾಪೇಕ್ಷಿಗಳಿಗೆ ನಿಗಮದ ಮುಖಾಂತರ ಕನಿಷ್ಟ 0.50 ರಿಂದ 1.00 ಎಕ್ರೆ ಕೃಷಿ ಮತ್ತು ಕೃಷಿ ಯೋಗ್ಯ ಜಮೀನನ್ನು ಖರೀದಿ ಮಾಡಿ ನೀಡಬೇಕಾಗಿರುವುದರಿಂದ ನಿಗಮಕ್ಕೆ ಜಮೀನು ಮಾರಾಟ ಮಾಡಲು

ಡಾ:ಬಿ.ಆರ್ ಅಂಬೇಡ್ಕರ್ ನಿಗಮದಿಂದ ವಿವಿದೆಡೆ ಜಮೀನು ಖರೀದಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. 2025ನೇ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ನ್ಯಾಷನಲ್ ಇ-ಸ್ಕಾಲರ್‍ ಶಿಪ್ ಯೋಜನೆಯಡಿ, ಪ್ರಿ ಮೆಟ್ರಿಕ್ ಟಾಪ್, ಟಾಪ್ ಕ್ಲಾಸ್, ಪೋಸ್ಟ್ ಮೆಟ್ರಿಕ್ ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್‍ಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ವಿದ್ಯಾರ್ಥಿಗಳು ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಯೋಜನೆಗೆ ನ್ಯಾಷನಲ್ ಸ್ಕಾಲರ್‍ ಶಿಪ್ ಪೋರ್ಟಲ್ https://scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು.

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ Read More »

ಕರಾವಳಿ

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ

(ನ್ಯೂಸ್‌ ಕಡಬ) newskadaba.com ಜು.23: ಉಡುಪಿ: ಮೆಸೇಜಿಂಗ್ ಆ್ಯಪ್ ಮೂಲಕ ಹೂಡಿಕೆ ಯೋಜನೆಗೆ ಆಮಿಷವೊಡ್ಡಲ್ಪಟ್ಟ ಬಳಿಕ 34 ವರ್ಷದ ವ್ಯಕ್ತಿಯೊಬ್ಬ ಆನ್‌ಲೈನ್ ವಂಚನೆಗೆ ಒಳಗಾಗಿ 15.5 ಲಕ್ಷ ರೂ.ಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಅಶ್ವಿತ್ ಎಂದು ಗುರುತಿಸಲಾದ ಸಂತ್ರಸ್ತ ಈ ಸಂಬಂಧ ಕಾರ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಅಶ್ವಿತ್‌ಗೆ ಜನವರಿ 28 ರಂದು ಮೀನಾ ಸಕ್ಪಾಲ್

ಆನ್ ಲೈನ್ ದರೋಡೆ- ಮೆಸೇಜಿಂಗ್ ಆ್ಯಪ್ ನಿಂದ 15.5 ಲಕ್ಷ ಹಣ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಜು.23: ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲ ವ್ಯಾಪಾರಿಗಳು ಅತ್ಯಂತ ಭಯ, ಆತಂಕಕ್ಕೆ

ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ – ಬಿ.ವೈ ವಿಜಯೇಂದ್ರ Read More »

ಕರ್ನಾಟಕ

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್‍ ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಐವನ್ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗೃಹ ಆರೋಗ್ಯ ಸೇವೆ ಮನೆಬಾಗಿಲಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅಸಾಂಕ್ರಾಮಿಕ

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ Read More »

ಕರಾವಳಿ

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..!

(ನ್ಯೂಸ್‌ ಕಡಬ) newskadaba.com ಜು.23: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/ ಗ್ರಾಮ ಪಂಚಾಯತ್  ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು  ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯು ಅಪಘಾತ ಅಥವಾ ಇನ್ನಿತರ ಅಪರಾಧ ಕೃತ್ಯಗಳ

ಜನನ-ಮರಣ: 21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ Read More »

ಕರಾವಳಿ

‘ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಸರ್ಕಾರದ ಶಿಫಾರಸ್ಸು ಬಂದಿಲ್ಲ’- ಸಂಸದ ಚೌಟ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಅಠಾವಳೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ(ಎಸ್‌ಸಿ) ಪಟ್ಟಿಯಲ್ಲಿ ಸೇರಿಸಲು ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಯಾವುದೇ ಶಿಫಾರಸು ಬಂದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ. ಕುಡುಬಿ ಸಮಾಜವನ್ನು ಎಸ್‌ಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಕ್ಕೆ ಬಂದಿರುವ ಪ್ರಸ್ತಾವನೆ ಹಾಗೂ ಈ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ-ಗತಿಗಳ ಕುರಿತು ನಡೆಸಿರುವ ಅಧ್ಯಯನ ವಿಚಾರವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು

‘ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಸರ್ಕಾರದ ಶಿಫಾರಸ್ಸು ಬಂದಿಲ್ಲ’- ಸಂಸದ ಚೌಟ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಅಠಾವಳೆ Read More »

ರಾಷ್ಟ್ರೀಯ ನ್ಯೂಸ್
Scroll to Top