ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು!

(ನ್ಯೂಸ್ ಕಡಬ) newskadaba.com, ಜು. 10. ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿನಿಮಾ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ ಪ್ರಣೀತಾ ಸುಭಾಷ್ ಸೇರಿ 29 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣದ ದಾಖಲಿಸಿದೆ. ನಟ, ನಟಿಯರ ಜೊತೆಗೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್‌, ಯುಟ್ಯೂಬರ್‌ಗಳು ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಸೆಲೆಬ್ರಿಟಿಗಳು ಮತ್ತು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್​ಗಳು ಅಕ್ರಮ ಬೆಟ್ಟಿಂಗ್​ […]

ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು! Read More »

ಕರಾವಳಿ, ಕರ್ನಾಟಕ, ಸಿನಿಮಾ

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್!

(ನ್ಯೂಸ್ ಕಡಬ) newskadaba.com, ಜು. 10. ಕರಾವಳಿ ಮೀನುಗಾರಿಕಾ ಸಮುದಾಯದ ಬಹುದಿನಗಳ ಕನಸು ನನಸಾಗುವ ಹಂತಕ್ಕೆ ತಲುಪಿದ್ದು, ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್ 2026 ರ ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗುವ ನಿರೀಕ್ಷೆಯಿದೆ. ಮೀನುಗಾರಿಕೆ ಇಲಾಖೆಯು ಶೀಘ್ರದಲ್ಲೇ ಬಹುಕೋಟಿ ವೆಚ್ಚದ ತುರ್ತು ಹಡಗಿನ ನಿರ್ಮಾಣವನ್ನು ಪ್ರಾರಂಭಿಸಲಿದ್ದು, ಇದರ ಬೆಲೆ ಸುಮಾರು 7.85 ಕೋಟಿ ರೂ.ಗಳಷ್ಟಾಗುತ್ತದೆ. ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲರ್ ಅವರ ಪ್ರಕಾರ, ಸಮುದ್ರ ಆಂಬ್ಯುಲೆನ್ಸ್‌ಗಾಗಿ ಕೆಲಸದ ಆದೇಶವನ್ನು ಮುಂದಿನ ವಾರ ನೀಡಲಾಗುವುದು.

ಮಂಗಳೂರು : ಮುಂದಿನ ಮೀನುಗಾರಿಕೆ ಋತುವಿನ ವೇಳೆಗೆ ಸಿದ್ಧವಾಗಲಿದೆ ಕರ್ನಾಟಕದ ಮೊದಲ ಸಮುದ್ರ ಆಂಬ್ಯುಲೆನ್ಸ್! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ/ ಉಡುಪಿ : ಜು.10 ರಿಂದ 15 ರವರೆಗೆ ಕರಾವಳಿ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್

(ನ್ಯೂಸ್ ಕಡಬ) newskadaba.com, ಜು. 10. ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಜುಲೈ 10 ರಿಂದ 15 ರವರೆಗೆ ಕರಾವಳಿ ಪ್ರದೇಶಕ್ಕೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಈ ಅವಧಿಯಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಪ್ರದೇಶದಾದ್ಯಂತ ಬುಧವಾರ ಸಾಧಾರಣ ಮಳೆ ಸುರಿದಿದೆ, ಜಿಲ್ಲೆಯ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ ಎನ್ನಲಾಗಿದೆ. ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣವಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ

ದಕ್ಷಿಣ ಕನ್ನಡ/ ಉಡುಪಿ : ಜು.10 ರಿಂದ 15 ರವರೆಗೆ ಕರಾವಳಿ ಕರ್ನಾಟಕದಲ್ಲಿ ಆರೆಂಜ್‌ ಅಲರ್ಟ್ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯ ಶವ ಬುಧವಾಹ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿ ಪೋಷಕರು ಕೊಪ್ಪಳ ಮೂಲದವರಾಗಿದ್ದು, ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. ರಾಮನಗರ ಎಸ್‌ಪಿ ಆರ್ ಶ್ರೀನಿವಾಸ್ ಗೌಡ ಅವರು ಮಾತನಾಡಿ, ಬಾಲಕಿಯ ಪೋಷಕರು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಈ ಅಪರಾಧವನ್ನು

ಬೆಂಗಳೂರು: ಕೊಲೆಯಾದ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ, ಅತ್ಯಾಚಾರ ಶಂಕೆ Read More »

ಕರ್ನಾಟಕ

ಐದು ರಾಷ್ಟ್ರಗಳ ಪ್ರವಾಸದ ನಂತರ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ)com, ಜು. 10. ಪ್ರಧಾನಿ ನರೇಂದ್ರ ಮೋದಿ ಜುಲೈ 2 ರಿಂದ 9 ರವರೆಗೆ ನಡೆದ ಐದು ರಾಷ್ಟ್ರಗಳ ಪ್ರವಾಸವನ್ನು ಮುಕ್ತಾಯಗೊಳಿಸಿ ಗುರುವಾರ ಬೆಳಿಗ್ಗೆ ನವದೆಹಲಿಗೆ ಮರಳಿದರು. ಈ ರಾಜತಾಂತ್ರಿಕ ಪ್ರಯಾಣವು ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗಳನ್ನು ಒಳಗೊಂಡಿತ್ತು ಮತ್ತು ಬ್ರೆಜಿಲ್ ಅಧ್ಯಕ್ಷತೆಯಲ್ಲಿ ರಿಯೊ ಡಿ ಜನೈರೊದಲ್ಲಿ ನಡೆದ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವುದನ್ನು ಒಳಗೊಂಡಿತ್ತು. ತಮ್ಮ ಭೇಟಿಯ ಮೊದಲ ಹಂತದಲ್ಲಿ, ಪ್ರಧಾನಿ ಮೋದಿ ಜುಲೈ 2 ರಂದು

ಐದು ರಾಷ್ಟ್ರಗಳ ಪ್ರವಾಸದ ನಂತರ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com, ಜು. 10. ಹಾಸನ: ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ. ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ

ಆಸ್ತಿ ವಿಚಾರಕ್ಕೆ ಕಲಹ – ಮಗನಿಂದಲೇ ತಂದೆ, ಸಹೋದರನ ಬರ್ಬರ ಹತ್ಯೆ Read More »

ಕರ್ನಾಟಕ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

(ನ್ಯೂಸ್ ಕಡಬ) newskadaba.com, ಜು. 10. ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಹಿರಿಯ ಜೀವಗಳು, ಎಳೇ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಮೈಸೂರಿನಲ್ಲಿ 28 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ರೆ, ಕೊಡಗಿನಲ್ಲಿ 58 ವರ್ಷದ ಮಹಿಳೆ ಜೀವ ತೆತ್ತಿದ್ದಾರೆ. ಇಲ್ಲಿನ ಚಾಮರಾಜ ಮೊಹಲ್ಲಾದ ನಿವಾಸಿ ದರ್ಶನ್‌ ಚೌದ್ರಿ (28) ಮೃತ ದುರ್ದೈವಿ. ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ ದರ್ಶನ್‌ಗೆ ನಿನ್ನೆ ರಾತ್ರಿ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ತಕ್ಷಣ ಆಸ್ಪತ್ರೆಗೆ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು. ಜು.7ರಂದು ಬೆಳಗ್ಗೆ ವಿಟ್ಲ – ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದರು. ಬಳಿಕ ಬಸ್ಸಿನ

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ

ದೆಹಲಿ-ಎನ್‌ಸಿರ್‌ನಲ್ಲಿ 4.4 ತೀವ್ರತೆ ಪ್ರಬಲ ಭೂಕಂಪ

(ನ್ಯೂಸ್ ಕಡಬ) newskadaba.com, ಜು. 10. ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ ಇಂದು ಬೆಳಗ್ಗೆ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದ್ದು, ಒಂದು ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ. ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿಯಿಂದ ಸುಮಾರು 60 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ದೆಹಲಿಯಲ್ಲಿ ಮಾತ್ರವಲ್ಲದೇ ಉತ್ತರ ಭಾರತದ ಹಲವಾರು ಭಾಗಗಳಲ್ಲಿ

ದೆಹಲಿ-ಎನ್‌ಸಿರ್‌ನಲ್ಲಿ 4.4 ತೀವ್ರತೆ ಪ್ರಬಲ ಭೂಕಂಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top