‘ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಸರ್ಕಾರದ ಶಿಫಾರಸ್ಸು ಬಂದಿಲ್ಲ’- ಸಂಸದ ಚೌಟ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಅಠಾವಳೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 23. ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ(ಎಸ್ಸಿ) ಪಟ್ಟಿಯಲ್ಲಿ ಸೇರಿಸಲು ಕರ್ನಾಟಕ ಸರ್ಕಾರದಿಂದ ಕೇಂದ್ರಕ್ಕೆ ಯಾವುದೇ ಶಿಫಾರಸು ಬಂದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ. ಕುಡುಬಿ ಸಮಾಜವನ್ನು ಎಸ್ಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಸರ್ಕಾರಕ್ಕೆ ಬಂದಿರುವ ಪ್ರಸ್ತಾವನೆ ಹಾಗೂ ಈ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ-ಗತಿಗಳ ಕುರಿತು ನಡೆಸಿರುವ ಅಧ್ಯಯನ ವಿಚಾರವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು […]









