ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು

(ನ್ಯೂಸ್ ಕಡಬ) newskadaba.com ಜು.05. ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಎಂಬವರ ಮೊಬೈಲ್ ​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.          

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಹುಲಿಗಳ ಸಾವು ಪ್ರಕರಣ ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಖಂಡ್ರೆ ಶಿಫಾರಸು

(ನ್ಯೂಸ್ ಕಡಬ) newskadaba.com ಜು. 05. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ

ಹುಲಿಗಳ ಸಾವು ಪ್ರಕರಣ ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಖಂಡ್ರೆ ಶಿಫಾರಸು Read More »

ಕರ್ನಾಟಕ

ಇನ್ಮುಂದೆ ಲೇಡಿಸ್ ಬಾರ್ ಗಳ ಪ್ರತಿದಿನ ವಿಡಿಯೋ ತುಣುಕನ್ನು ಆಯಾ ಠಾಣೆಗಳಿಗೆ ನೀಡುವಂತೆ ಸೂಚನೆ..!

(ನ್ಯೂಸ್ ಕಡಬ) newskadaba.com ಜು. 05. ಹಲವು ಬಾರ್ ಗಳಲ್ಲಿ ನಿಯಮ ಉಲ್ಲಂಘನೆ ಕುರಿತು ಆರೋಪಗಳು ಕೇಳಿಬರುವ ಹಿನ್ನೆಲೆ ಇನ್ಮುಂದೆ ನಗರದಲ್ಲಿರುವ ಲೇಡಿಸ್ ಬಾರ್‌ಗಳು ಪ್ರತಿದಿನ ಸಿಸಿಟಿವಿ ವಿಡಿಯೋಗಳ ತುಣುಕುಗಳನ್ನು ಆಯಾಯ ಪೊಲೀಸ್ ಠಾಣೆಗಳಿಗೆ ನೀಡಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿ ಸೂಚಿಸಿರುವುದಾಗಿ ತಿಳಿದುಬಂದಿದೆ. . ಇತ್ತೀಚೆಗೆ ನಗರ ಪೊಲೀಸರು ಕೇಂದ್ರ ಹಾಗೂ ಪಶ್ಚಿಮ ವಿಭಾಗದ ಲೇಡಿಸ್ ಬಾರ್‌ಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಕೆಲವು ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದ್ದರೂ

ಇನ್ಮುಂದೆ ಲೇಡಿಸ್ ಬಾರ್ ಗಳ ಪ್ರತಿದಿನ ವಿಡಿಯೋ ತುಣುಕನ್ನು ಆಯಾ ಠಾಣೆಗಳಿಗೆ ನೀಡುವಂತೆ ಸೂಚನೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 05. ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಜಿ ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 05. ಕೆಲ ದಿನಗಳ ಹಿಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವೈದ್ಯರೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಮನೆಗೆ ಹೋಗುವ ಸಂಧರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಸುಳ್ಯ: ಅಪಘಾತ ಪ್ರಕರಣ..! ಗಂಭೀರ ಗಾಯಗೊಂಡಿದ್ದ ವೈದ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ!

(ನ್ಯೂಸ್ ಕಡಬ) newskadaba.com ಜು. 05.  ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಶಾಲೆಗಳು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದ್ದು, ಅದರಂತೆ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.   ಇದರೊಂದಿಗೆ ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ! Read More »

ಕರಾವಳಿ

ಯುವತಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಜು. 05. ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಮರಕ್ಕೆ ಸಿಲುಕಿ ರಾತ್ರಿಯಿಡಿ ಒದ್ದಾಡಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.   ಆತ್ಮಹತ್ಯೆಗೆ ಯತ್ನಿಸಿದ ಯವತಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ಎಂದು ಗುರುತಿಸಲಾಗಿದ್ದು, ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು ಎನ್ನಲಾಗಿದೆ.     ವಿಚಾರ ತಿಳಿದು ಸ್ಥಳಕ್ಕೆ ಬಂದ

ಯುವತಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 05. ಟ್ರೇಡಿಂಗ್‌ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭವನ್ನು ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮಾರ್ಚ್ 1ರಂದು ಶಿವಶಂಕರ ಎಂಬವರಿಗೆ ಅಪರಿಚಿತ ವ್ಯಕ್ತಿಯು ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಹಣವನ್ನು ಗಳಿಸಬಹುದೆಂದು ನಂಬಿಸಿದ್ದು, ಅದರಂತೆ ದೂರುದಾರ ಆರೋಪಿತರ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 7 ಲಕ್ಷ ರೂ. ಹಣವನ್ನು ಮೇ 19ರಿಂದ ಮೇ

ಟ್ರೇಡಿಂಗ್ ಹೆಸರಿನಲ್ಲಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 05. ರಾಜ್ಯ ರಾಜಧಾನಿ ಕ್ರೀಡಾಭಿಮಾನಿಗಳಿಗೆ ವಿಶ್ವದ ಶ್ರೇಷ್ಠ ಜಾವೆಲಿನ್ ಥ್ರೋ ಪಟುಗಳನ್ನು ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಸ್ಪರ್ಧಿಸುವುದನ್ನು ನೇರವಾಗಿ ನೋಡುವ ಅವಕಾಶ ಸಿಗಲಿದೆ ಎಂದು ವರದಿ ತಿಳಿಸಿದೆ. 2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು,ನೀರಜ್ ಸೇರಿ ಭಾರತದ ಐವರು ಹಾಗೂ ಏಳು

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..! Read More »

ಕರ್ನಾಟಕ
Scroll to Top