Over 600 people fall ill during Puri Rath Yatra

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ !

(ನ್ಯೂಸ್‌ ಕಡಬ) newskadaba.com ಜೂ.28: ಪ್ರಖ್ಯಾತ ಒಡಿಶಾದ ಪುರಿ ರಥಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪ ಮತ್ತು ಜನದಟ್ಟಣೆಯಿಂದಾಗಿ ಸುಮಾರು 625 ಜನರು ಅಸ್ವಸ್ಥಗೀಡಾಗಿ ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು […]

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ ! Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 28.  ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.   ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ಬಳಿಕ ಹುದ್ದೆಗೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನಪಾ: ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ಕಡತ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 28. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ನಗರ ಯೋಜನೆ ವಿಭಾಗದಲ್ಲಿ ಕಡತಗಳನ್ನು ಪರಿಶೀಲಿಸಿದರು. ಕಡತ ಪರಿಶೀಲನೆ ವೇಳೆ ಟಿ.ಡಿ.ಆರ್.ನಲ್ಲಿ ಕೆಲವು ಅವ್ಯಹಾರ ನಡೆದಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜೂ. 21ರಂದು ಮೊದಲ ಬಾರಿಗೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಡರಾತ್ರಿವರೆಗೆ ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಕಡತಗಳನ್ನು ಪರಿಶೀಲಿಸಿದ್ದರು. ಈ ವೇಳೆ ಹಲವು ಅವ್ಯವಹಾರ, ಅಧಿಕಾರ ದುರುಪಯೋಗ ನಡೆದಿರುವುದು ಕಂಡು ಬಂದಿತ್ತು. ನಂತರ,

ಮನಪಾ: ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ಕಡತ ಪರಿಶೀಲನೆ Read More »

ಕರಾವಳಿ

ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com ಜೂ.28: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಅರಣ್ಯ‌ ಸಚಿವ ಈಶ್ವರ ಬಿ.ಖಂಡ್ರೆ ಶುಕ್ರವಾರ ಲೋಕಾರ್ಪಣೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಹಂತ-ಹಂತವಾಗಿ ಈ ಸ್ಮಾರಕವನ್ನು ಅಭಿವೃದ್ಧಿಪಡಿಸಲಾಗುವುದು. ಅರ್ಜುನ ಆನೆ ಪಾಲ್ಗೊಂಡ ವಿವಿಧ ಕಾರ್ಯಾಚರಣೆಗಳ ಚಿತ್ರ, ದಸರಾ ಮಹೋತ್ಸವದ ಅಪರೂಪದ ಕ್ಷಣಗಳ ಚಿತ್ರ ಎಲ್ಲವನ್ನೂ ಇಲ್ಲಿ ಪ್ರದರ್ಶಿಸುವ ಮೂಲಕ ಅರ್ಜುನ ಆನೆಯ ಶೌರ್ಯ, ಸಾಹಸ ಎಲ್ಲರಿಗೂ ತಿಳಿಯುವಂತೆ ಮಾಡಲಾಗುವುದು” ಎಂದರು. “ಈ ಸ್ಮಾರಕ

ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ Read More »

ಕರ್ನಾಟಕ

ತಾಯಿಯ ಕೊಲೆ ಪ್ರಕರಣ ವಿಚಾರಣೆ ವೇಳೆ ಸತ್ಯ ಬಹಿರಂಗ

(ನ್ಯೂಸ್ ಕಡಬ) newskadaba.com ಜೂ. 28. ವರ್ಕಾಡಿ ನಲ್ಲೆಂಗಿಯ ಹಿಲ್ಡಾ ಮೊಂತೇರೋರವರ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಆರೋಪಿ ಪುತ್ರ ಮೆಲ್ವಿನ್ ವಿಚಾರಣೆ ವೇಳೆ ಆಸ್ತಿ ಹಾಗೂ ಹಣಕ್ಕಾಗಿ ಈ ಕೃತ್ಯ ನಡೆಸಿದ್ದಾನೆ ಎಂದು ಬೆಚ್ಚಿ ಬೀಳಿಸುವ ಹೇಳಿಕೆಗಳನ್ನು ನೀಡಿದ್ದಾನೆ.   ಈ ವಿಚಾರವಾಗಿ ಕೆಲ ದಿನಗಳಿಂದ ಈತ ತಾಯಿಗೆ ಆಗಾಗ ಕಿರುಕುಳ ನೀಡುತ್ತಿದ್ದ ಮಾತ್ರವಲ್ಲದೇ ಒತ್ತಡ ಹೇರುತ್ತಿದ್ದನು ಎನ್ನಲಾಗಿದೆ. ತನಗೆ ವಿವಾಹ ಮಾಡಿಕೊಡಬೇಕು ಇದಕ್ಕಾಗಿ ಹಣ ನೀಡುವಂತೆ ಮೆಲ್ವಿನ್ ತಾಯಿಯಲ್ಲಿ ಒತ್ತಡ ಹಾಕುತ್ತಿದ್ದನು. . ಇದಲ್ಲದೇ ಆಸ್ತಿಯನ್ನು

ತಾಯಿಯ ಕೊಲೆ ಪ್ರಕರಣ ವಿಚಾರಣೆ ವೇಳೆ ಸತ್ಯ ಬಹಿರಂಗ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ!

(ನ್ಯೂಸ್‌ ಕಡಬ) newskadaba.com ಜೂ.28: ಬೆಂಗಳೂರು ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ತ್ರಿಪಾರ್ಣ ಪಾಯ್ಕ ಎಂಬ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ, ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆರೋಪಿತೆಯು ನಾಲ್ಕು ಲ್ಯಾಬ್ರಡರ್ ನಾಯಿಗಳನ್ನು ಸಾಕುತ್ತಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ಮಹಿಳೆಯ ಮನೆಯೊಂದರಲ್ಲಿ ಮತ್ತೊಂದು ನಾಯಿ ಕಾಣೆಯಾಗಿದ್ದರೂ, ಇದೀಗ ಮತ್ತೆ

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ! Read More »

ಕ್ರೈಮ್ ನ್ಯೂಸ್

ಟಿ20 ಪವರ್ ಪ್ಲೇ ನಿಯಮದಲ್ಲಿ ಬದಲಾವಣೆಗೆ ಮುಂದಾದ ಐಸಿಸಿ

(ನ್ಯೂಸ್ ಕಡಬ) newskadaba.com ಜೂ. 28. ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ ಪಂದ್ಯಗಳ ಪವರ್‌ ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.   ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್‌ ನ ಓವರ್‌ಗಳನ್ನು ಕಡಿಮೆ ಮಾಡಿದರೆ, ಪವರ್‌ಪ್ಲೇ ಓವರ್‌ಗಳನ್ನು ಓವರ್‌ಗಳ ಬದಲಿಗೆ ಚೆಂಡುಗಳ

ಟಿ20 ಪವರ್ ಪ್ಲೇ ನಿಯಮದಲ್ಲಿ ಬದಲಾವಣೆಗೆ ಮುಂದಾದ ಐಸಿಸಿ Read More »

ಕ್ರೀಡಾ ನ್ಯೂಸ್

ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ..!

(ನ್ಯೂಸ್ ಕಡಬ) newskadaba.com ಜೂ. 28. ಕನ್ನಡದ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ನಟ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ನಟಿಸಿದ್ದ ನಟಿ ಶೆಫಾಲಿ ಜರಿವಾಲಾ(42) ಅವರು ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ವರದಿಯಾಗಿದೆ.   ಶುಕ್ರವಾರದಂದು  ಬೆಳಿಗ್ಗೆ 11 ಗಂಟೆ ಸುಮಾರಿಗೆ ನಟಿ ಶೆಫಾಲಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.   ಶೆಫಾಲಿ ಅವರು 1982ರ ಡಿಸೆಂಬರ್ 15ರಂದು ಜನಿಸಿದ್ದರು. ಮುಂಬೈನಲ್ಲಿ

ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿ..! Read More »

ಸಿನಿಮಾ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜೂ.28: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು Read More »

ಸಿನಿಮಾ
Scroll to Top