ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.  ಈ ಕುರಿತು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಫರ್ವೀಜ್‌ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ   ವರದಿಯ ಪ್ರಕಾರ, ಫರ್ವಿಜ್‌ ಅವರು ತಮ್ಮ ಲಾರಿಗೆ ಅಸಾಸುದ್ದೀನ್‌ ಫೈರೋಜ್‌ ಎಂಬಾತನನ್ನು ಚಾಲಕನಾಗಿ ನೇಮಿಸಿದ್ದರು. ಮಾ. 29 ರಂದು ಸರಕು ಸಾಗಾಟದ ಉದ್ದೇಶಕ್ಕೆಂದು ಲಾರಿಯನ್ನು ಚಾಲಕ ಪಡೆದಿದ್ದು, ನಂತರ ಲಾರಿಯಾಗಲಿ, […]

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‍ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಇಂದು ಜನ ಪ್ರತಿನಿಧಿಗಳ ಸಭೆಯ (ದಿವಾನ್ ರಖ್ಯತ್) ಸಭಾಧ್ಯಕ್ಷರು ಮತ್ತು ಕಾಮನ್‍ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ Read More »

ಕರ್ನಾಟಕ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆ ಕಿನ್ಯಾ ಇಲ್ಲಿಗೆ ಸಾಮಾನ್ಯ ವಿಜ್ಞಾನ ವಿಷಯಕ್ಕೆ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎಸ್ಸಿ – ಬಿ.ಎಡ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.12,500 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 9886015827, 9449080150 ಅಥವಾ ಕಿನ್ಯಾ ಮೌಲಾನಾ ಆಜಾದ್ ಮಾದರಿ ಶಾಲೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ಜಿಲ್ಲಾಧಿಕಾರಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಜಿಟಿಟಿಸಿಗೆ ಸಚಿವ ಶರಣಪ್ರಕಾಶ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅವರು ಮಂಗಳವಾರ ನಗರದ ಬೈಕಂಪಾಡಿಯಲ್ಲಿರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿದರು. ತರಬೇತಿ ಕೇಂದ್ರದಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ವಿವಿಧ ಉಪಕರಣಗಳು ಮತ್ತು ತರಬೇತಿ ಯಂತ್ರಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ತರಬೇತಿಯ ಉಪಯುಕ್ತತೆಯ ಬಗ್ಗೆ ಮಾಹಿತಿ ಪಡೆದರು. ಜಿಟಿಟಿಸಿ ಡಿಪ್ಲೋಮಾ ಕೋರ್ಸ್‍ಗಳು ಶೇ. 100 ರಷ್ಟು ಉದ್ಯೋಗಾಧಾರಿತ ಕೋರ್ಸುಗಳಾಗಿದ್ದು,

ಜಿಟಿಟಿಸಿಗೆ ಸಚಿವ ಶರಣಪ್ರಕಾಶ್ ಭೇಟಿ Read More »

ಕರಾವಳಿ

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಲಜೀವನ್ ಮಿಷನ್ ಯೋಜನೆ ಮತ್ತು ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದ ಅನುಷ್ಠಾನ ಮತ್ತು  24/7 ನೀರು ಸರಬರಾಜು, ಮಾದರಿ ಗ್ರಾಮಗಳ ಘೋಷಣೆ ಕುರಿತಂತೆ ತರಬೇತಿ ಕಾರ್ಯಗಾರ ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ  ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ   ಕುಡಿಯುವ ನೀರಿನ ಸರಬರಾಜು ಮಾಡುವುದರಲ್ಲಿ ಗ್ರಾಮ ಪಂಚಾಯತ್ ಪ್ರಮುಖ ವಹಿಸುತ್ತದೆ.

ಶುದ್ಧ ಕುಡಿಯುವ ನೀರು ಪೂರೈಕೆ ಗ್ರಾಮ ಪಂಚಾಯತ್ಗಳ ಆದ್ಯತೆಯಾಗಲಿ: ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ  ಸ್ಪೀಕರ್ ಯು.ಟಿ.ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ

ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ನೀಟ್ ಸಾಧಕರಿಗೆ ಡಿಸಿ ಕಛೇರಿಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಜೂ. 18. ಪ್ರಸಕ್ತ ವರ್ಷದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ  ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಮಾಡಿದರು. ಎಕ್ಸ್‍ ಪರ್ಟ್  ಕಾಲೇಜಿನ  ವಿದ್ಯಾರ್ಥಿಗಳಾದ ನಿಖಿಲ್ ಸೊನ್ನದ್ (ಅಖಿಲ ಭಾರತ ಮಟ್ಟದ 17ನೇ ರ್ಯಾಂಕ್, ರಾಜ್ಯಮಟ್ಟದ ಪ್ರಥಮ ರ್ಯಾಂಕ್) ಹಾಗೂ ಕೆ.ಜಿ. ನಿಧಿ (ಅಖಿಲ ಭಾರತ 84ನೇ ರ್ಯಾಂಕ್, ರಾಜ್ಯಮಟ್ಟದ 7ನೇ ರ್ಯಾಂಕ್ ಅವರಿಗೆ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಕ್ಸ್‍ ಪರ್ಟ್  ವಿದ್ಯಾಸಂಸ್ಥೆಗಳ ಮುಖ್ಯಸ್ಥ

ನೀಟ್ ಸಾಧಕರಿಗೆ ಡಿಸಿ ಕಛೇರಿಯಲ್ಲಿ ಸನ್ಮಾನ Read More »

ಕರಾವಳಿ

ರಾಜ್ಯ ಆಡಳಿತಕ್ಕೆ ಮೇಜರ್ ಸರ್ಜರಿ – ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಎಚ್.ವಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ರಾಜ್ಯ ಆಡಳಿತಕ್ಕೆ ಮೇಜರ್ ಸರ್ಜರಿ – ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಕಡಬ: ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ ‘Jomz Academy’ ಕೋಚಿಂಗ್ ಸೆಂಟರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 16. ಕಡಬದಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘Jomz Academy’ಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾವನ್ನು ಕಳುಹಿಸಬಹುದು. ಮತ್ತು ಅದರ ಜೊತೆಗೆ ನುರಿತ ಅಧ್ಯಾಪಕರಿಂದ CET, JEE ಮತ್ತು NEET ಕೋಚಿಂಗ್ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಇಂದೇ ನಿಮ್ಮ ಹೆಸರನ್ನು ನೋಂದಾಯಿಸುವಂತೆ ಸಂಸ್ಥೆ ತಿಳಿಸಿದೆ.   ಕೋರ್ಸ್ ಗಳ ವಿವರ: ಅನುಭವಿ ಶಿಕ್ಷಕರಿಂದ CET, JEE ಮತ್ತು NEET ಕೋಚಿಂಗ್, ನುರಿತ ಶಿಕ್ಷಕರಿಂದ 5ರಿಂದ 10 ನೇ

ಕಡಬ: ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ ‘Jomz Academy’ ಕೋಚಿಂಗ್ ಸೆಂಟರ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನಿಂತಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ – ಓರ್ವ ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.16. ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ

ನಿಂತಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ – ಓರ್ವ ಮೃತ್ಯು, ಹಲವರಿಗೆ ಗಾಯ Read More »

ಕರಾವಳಿ
Scroll to Top