ಇಂದಿನಿಂದ ಫಿಫಾ ಕ್ಲಬ್ ವಿಶ್ವಕಪ್ ಪಂದ್ಯಾಟ- 32 ತಂಡಗಳು ಭಾಗಿ

(ನ್ಯೂಸ್ ಕಡಬ) newskadaba.com ಜೂ. 14. ಫಿಫಾ ಕ್ಲಬ್​ ವಿಶ್ವಕಪ್ ಹೊಸ ಸ್ವರೂಪದೊಂದಿಗೆ 21ನೇ ಆವೃತ್ತಿಗೆ ಸಜ್ಜಾಗಿದ್ದು, ಇಂದಿನಿಂದ(ಜೂ. 14) ಫ್ಲೋರಿಡಾದ ಮಿಯಾಮಿ ಗಾರ್ಡನ್ಸ್‌ ನಲ್ಲಿರುವ ಹಾರ್ಡ್ ರಾಕ್ ಕ್ರೀಡಾಂಗಣದಲ್ಲಿ ಆರಂಗೊಳ್ಳಲಿದೆ. ಪಂದ್ಯಾವಳಿಯ ಉದ್ಘಾಟನಾ ದಿನವಾದ ಇಂದು ಈಜಿಪ್ಟ್‌ ನ ಅಲ್ ಅಹ್ಲಿ ಮತ್ತು ಲಿಯೋನೆಲ್‌ ಮೆಸ್ಸಿ ನಾಯಕತ್ವದ ಇಂಟರ್ ಮಿಯಾಮಿ ತಂಡಗಳು ಸೆಣಸಾಟ ನಡೆಸಲಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ 32 ತಂಡಗಳು ಆಡಲಿದ್ದು, ತಂಡಗಳನ್ನು ತಲಾ ನಾಲ್ಕು ತಂಡಗಳಂತೆ ಎಂಟು ಗುಂಪುಗಳಾಗಿ ವಿಂಗಡಿಸಲಾಗಿದೆ. ಈ […]

ಇಂದಿನಿಂದ ಫಿಫಾ ಕ್ಲಬ್ ವಿಶ್ವಕಪ್ ಪಂದ್ಯಾಟ- 32 ತಂಡಗಳು ಭಾಗಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಇನ್ನುಮುಂದೆ ರಾಜ್ಯ ಸರಕಾರದಿಂದಲೇ ಆಂಬ್ಯುಲೆನ್ಸ್ ನಿರ್ವಹಣೆ

(ನ್ಯೂಸ್ ಕಡಬ) newskadaba.com ಜೂ. 14. ರಾಜ್ಯದಲ್ಲಿ ಆಂಬ್ಯುಲೆನ್ಸ್‌ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇದಕ್ಕಾಗಿ ರಾಜ್ಯದಲ್ಲಿನ 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ಖಾಸಗಿ ಪಾಲುದಾರರಾದ ಜಿವಿಕೆ-ಇಎಂಆರ್‌ಐ ಸಂಸ್ಥೆಯಿಂದ ಆಂಬ್ಯುಲೆನ್ಸ್ ನಿರ್ವಹಣೆಯ ಹಿಂಪಡೆಯಲಾಗಿದ್ದು, 108 ಆಂಬ್ಯುಲೆನ್ಸ್‌ ಕಮಾಂಡ್‌ ಮತ್ತು ಕಂಟ್ರೋಲ್‌ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸಲಾಗಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಆರೋಗ್ಯ ಸಚಿವ

ಇನ್ನುಮುಂದೆ ರಾಜ್ಯ ಸರಕಾರದಿಂದಲೇ ಆಂಬ್ಯುಲೆನ್ಸ್ ನಿರ್ವಹಣೆ Read More »

ಕರ್ನಾಟಕ

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ

(ನ್ಯೂಸ್ ಕಡಬ) newskadaba.com ಜೂ. 14. ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ದುರಂತದಲ್ಲಿ 265 ಮಂದಿ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಯಾವುದೇ ಕಾರಣಕ್ಕೂ ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ವಾರ್ನರ್‌, ಇನ್ನು ಮುಂದೆ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು

ಇನ್ನುಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಕ್ರಿಕೆಟಿಗ ಡೇವಿಡ್ ವಾರ್ನರ್ ಶಪಥ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಅನ್ಯ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ನೀಚ ತಂದೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 14. ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಮಗಳಿಗೆ ಬಲವಂತ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯು ತಂದೆಯ ಒತ್ತಾಯಕ್ಕೆ ಸಹಕರಿಸದೇ ಇದ್ದಾಗ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ. ನಂತರ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿ, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಬಾಲಕಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು,

ಅನ್ಯ ವ್ಯಕ್ತಿ ಜೊತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ನೀಚ ತಂದೆ- ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ

(ನ್ಯೂಸ್ ಕಡಬ) newskadaba.com ಜೂ. 14. ಶೋಕಿ ಜೀವನಕ್ಕಾಗಿ ಹಣ ಹೊಂದಿಸಲು ಖೋಟಾ ನೋಟು ತಯಾರಿಸಿದ ಟೆಕ್ಸ್‌ ಟೈಲ್ ಉದ್ಯಮಿಯೊಬ್ಬರ ಪುತ್ರನನ್ನು ಕಮರ್ಷಿಯಲ್‌ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಕ್ರಿಷ್‌ಮಾಲಿ (23) ಎಂದು ಗುರುತಿಸಲಾಗಿದೆ. ಈತ ವಿನಾಕಾರಣ ಸುತ್ತಾಡುತ್ತಾ ದುಂದುವೆಚ್ಚ ಮಾಡುತ್ತಿದ್ದರಿಂದ ಮನೆಯಲ್ಲಿ ಖರ್ಚಿಗೆ ಹಣ ಕೊಡುತ್ತಿರಲಿಲ್ಲ. ಹೀಗಾಗಿ ಹೇಗಾದರೂ ಮಾಡಿ ಹಣ ಹೊಂದಿಸಬೇಕೆಂದು ಯೋಚಿಸುತ್ತಿದ್ದಾಗ ಆತನಿಗೆ ನಕಲಿ ನೋಟು ತಯಾರಿಸುವ ದುರಾಲೋಚನೆ ಹೊಳೆದಿದ್ದು, ಅದಕ್ಕಾಗಿ ಆತ ಪ್ರಿಂಟರ್ ಸ್ಕ್ಯಾನ‌ರ್

ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ Read More »

ಕರ್ನಾಟಕ

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜೂ. 14. ಅಹಮ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪ್ರಕರಣದ ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪ್ರಮಾಣಿತ ನಿರ್ವಹಣಾ ಮಾರ್ಗಸೂಚಿಗಳನ್ನು ರೂಪಿಸಲು ಆದೇಶಿಸಿದೆ. ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಇಲಾಖೆಯ ಹೆಚ್ಚುವರಿ ಅಥವಾ ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಗೃಹ ಕಾರ್ಯದರ್ಶಿ, ಗೃಹ ಇಲಾಖೆಯ

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ Read More »

ರಾಷ್ಟ್ರೀಯ ನ್ಯೂಸ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

(ನ್ಯೂಸ್ ಕಡಬ) newskadaba.com ಜೂ. 14. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದ್ದು, ಅದರಂತೆ ಇಂದು ಬೆಂಗಳೂರಿನಿಂದ ಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ Read More »

ಕರ್ನಾಟಕ
Theft, crime, Robbery

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..!

(ನ್ಯೂಸ್ ಕಡಬ) newskadaba.com ಜೂ. 14. ಒಂದು ದಿನದ ನವಜಾತ ಹಸುಗೂಸೊಂದು ಆಸ್ಪತ್ರೆಯಲ್ಲೇ ಕಳ್ಳತನವಾಗಿರುವ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮಾಬೂಬು ಎಂಬವರ ಒಂದು ದಿನದ ಮಗುವನ್ನು ನರ್ಸ್ ಸೋಗಿನಲ್ಲಿ ಬಂದ ಕಳ್ಳಿಯೊಬ್ಬಳು ಮಗುವಿಗೆ ಕಫ ಇದೆ ನಾನು ಅದನ್ನು ತೆಗೆದುಕೊಂಡು ಬರುತ್ತೇನೆಂದು ಹೇಳಿ ಹೋದವರು ಮತ್ತೆ ಬಾರದೇ ಮಗುವನ್ನು ಕದ್ದೊಯ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಳಂದೂರು, ಜೂ. 14. ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜತ್ತಪ್ಪ ರೈ ಬರೆಪ್ಪಾಡಿ, ಸದಸ್ಯರಾದ ವಸಂತ ಪೂಜಾರಿ, ನಿರ್ಮಲ ಕೇಶವ ಗೌಡ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಲೋಕೇಶ್ ಬಿ ಎನ್, ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ, ಬೆಳಂದೂರು ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪಿಡಿಒ

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್ Read More »

ಕರಾವಳಿ

ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ- ಹೈಕೋರ್ಟ್ ಸ್ಥಗಿತ

(ನ್ಯೂಸ್ ಕಡಬ) newskadaba.com ಜೂ. 14. ರಾಜ್ಯದಲ್ಲಿ ಜೂನ್ 16ರಿಂದ ಓಲಾ, ಊಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಬೆಂಗಳೂರು ಸೇರಿದಂತೆ ಕೆಲ ಪಟ್ಟಣಗಳಲ್ಲಿ ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಲಂಬಿಸಿದ್ದು, ಆಟೋ ಕ್ಯಾಬ್ ಗೆ ಹೋಲಿಸಿದರೆ ಇದರ ವೆಚ್ಚವೂ ಕಡಿಮೆ. ಜೊತೆಗೆ ಕಡಿಮೆ ಸಮಯದಲ್ಲಿ ನಿಗದಿತ ಸ್ಥಳಕ್ಕೆ ತಲುಪಬಹುದು. ಆದರೆ ಜೂನ್ 16ರಿಂದ ಈ ಸೇವೆಗಳು ಬಂದ್ ಆಗಲಿವೆ. ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್

ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ- ಹೈಕೋರ್ಟ್ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top