24 ಗಂಟೆ ಮುನ್ನವೇ ಸೀಟು ಖಾತರಿ- ರೈಲ್ವೇ ಇಲಾಖೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಟಿಕೆಟ್‌ ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ರೈಲು ಹೊರಡುವ 24 ಗಂಟೆಗಳ ಮುನ್ನವೇ ಸೀಟು ಹಂಚಿಕೆ ಮಾಡಿ, ಖಚಿತಪಡಿಸುವ ವ್ಯವಸ್ಥೆಯನ್ನು ರೈಲ್ವೇ ಸಚಿವಾಲಯ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. ಇನ್ನು ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲಷ್ಟೇ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುತ್ತಿದೆ. ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಆಸನಗಳನ್ನು ತ್ವರಿತವಾಗಿ ಖಚಿತಪಡಿಸುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ. ಪ್ರಯಾಣಿಕರಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾದಲ್ಲಿ ಈ ವ್ಯವಸ್ಥೆಯನ್ನು ರೈಲ್ವೆ […]

24 ಗಂಟೆ ಮುನ್ನವೇ ಸೀಟು ಖಾತರಿ- ರೈಲ್ವೇ ಇಲಾಖೆ Read More »

ರಾಷ್ಟ್ರೀಯ ನ್ಯೂಸ್

ವಯನಾಡಿನಲ್ಲಿ ರಾಡಾರ್ ಸ್ಥಾಪನೆಗೆ ಐಎಂಡಿ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಕಳೆದ ವರ್ಷ ಭೀಕರ ಭೂಕುಸಿತ ಸಂಭವಿಸಿ 400ಕ್ಕೂ ಹೆಚ್ಚು ಜನರು ಮೃತಪಟ್ಟ ಕೇರಳದ ವಯನಾಡು ಜಿಲ್ಲೆಯಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಸ್ಥಾಪಿಸಲು ಭಾರತೀಯ ಹವಾಮಾನ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮುಖದಲ್ಲಿ ವಯನಾಡಿನ ಪುಲ್ಪಳ್ಳಿಯಲ್ಲಿರುವ ಪಳಸ್ಸಿರಾಜ ಕಾಲೇಜಿನಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಅಳವಡಿಸಲು ಐಎಂಡಿ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ತಿಳಿದುಬಂದಿದೆ. 100 ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಎಕ್ಸ್-ಬ್ಯಾಂಡ್ ರಾಡಾರ್, ವಿಪತ್ತು ಪೀಡಿತ ಪಶ್ಚಿಮ ಘಟ್ಟ

ವಯನಾಡಿನಲ್ಲಿ ರಾಡಾರ್ ಸ್ಥಾಪನೆಗೆ ಐಎಂಡಿ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಜನಾಕ್ರೋಶಕ್ಕೆ ಮಣಿದ ಪುರಸಭೆ ಪಾಣೆಮಂಗಳೂರು ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ಜೂ. 13. ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಈ ಸೇತುವೆ ಜನಸಾಮಾನ್ಯರ ಬಹುಮುಖ್ಯ ಸಂಪರ್ಕ ಕೊಂಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಬಿರುಸಿನ ಚರ್ಚೆ ನಡೆದು ದ್ವಿಚಕ್ರ ಹಾಗು ತ್ರಿಚಕ್ರ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ ಆಗ್ರಹಿಸಿ ಸಭಾತ್ಯಾಗ ಮಾಡಿದ್ದರು. ಸಾರ್ವಜನಿಕರ ಮನವಿಯ ಮೇರೆಗೆ ಸೇತುವೆಯ

ಜನಾಕ್ರೋಶಕ್ಕೆ ಮಣಿದ ಪುರಸಭೆ ಪಾಣೆಮಂಗಳೂರು ಸೇತುವೆ ಸಂಚಾರಕ್ಕೆ ಮುಕ್ತ Read More »

ಕರಾವಳಿ

ಮನಪಾ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ‌. 13. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು.ನಿರ್ಗಮನ ಆಯುಕ್ತೆ ನೂರ್ ಜಹಾನ್ ಖಾನಂ ಅವರು ಅಧಿಕಾರ ಹಸ್ತಾಂತರಿಸಿದರು. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿದ್ದ ಮುಹಮ್ಮದ್ ನಝೀರ್ ಅವರನ್ನು ನಿಯೋಜಿಸಿ ಸರಕಾರ ಜೂ.10ರಂದು ಆದೇಶ ಹೊರಡಿಸಿತ್ತು.

ಮನಪಾ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅಧಿಕಾರ ಸ್ವೀಕಾರ Read More »

ಕರಾವಳಿ

ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬ ಪೊಲೀಸ್ ಠಾಣೆಯಿಂದ ವಿವಿಧ ಕಡೆ ವರ್ಗಾವಣೆಗೊಂಡ ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕರ್ನಾಟಕ ರಾಜ್ಯ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ತಾಲೂಕು ಘಟಕದ ವತಿಯಿಂದ ಗುರುವಾರದಂದು ಠಾಣೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಠಾಣಾ ಉಪನಿರೀಕ್ಷಕ ಅಭಿನಂದನ್ ಮಾತನಾಡಿ, ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ವರ್ಗಾವಣೆಗೊಂಡು ಬೇರೆ ಕಡೆ ಹೋಗುತ್ತಿರುವ ಸಂದರ್ಭದಲ್ಲಿ ಸಂಘಟನೆ ಮೂಲಕ ಮಾಡುತ್ತಿರುವ ಈ ಗೌರವ ನಿಜಕ್ಕೂ ಸ್ಮರಣೀಯವಾದದ್ದು. ಇನ್ನಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು

ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ Read More »

ಕರಾವಳಿ

ಪಿಲಿಕುಳ: ನಾಳೆಯಿಂದ ಹಣ್ಣುಗಳ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ. ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ

ಪಿಲಿಕುಳ: ನಾಳೆಯಿಂದ ಹಣ್ಣುಗಳ ಮೇಳ Read More »

ಕರಾವಳಿ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ ಇಂಗ್ಲೀಷ್, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ  ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಎಂ.ಎ/ಎಂ.ಎಸ್ಸಿ – ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.14,000 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ:- 9620439218 ಅಥವಾ ಮಂಜನಾಡಿ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಇಲ್ಲಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ Read More »

ಕರಾವಳಿ

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ

(ನ್ಯೂಸ್ ಕಡಬ) newskadaba.com ಜೂ. 13. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಗುರುವಾರದಂದು ನಗರದ ಪುರಭವನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.   ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ,

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ Read More »

ಕರಾವಳಿ

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ

(ನ್ಯೂಸ್ ಕಡಬ) newskadaba.com ಜೂ. 13. ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ

ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಜೂ. 13. 242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದು ಗುಜರಾತಿನ ಅಹ್ಮದಾಬಾದ್‌ನಲ್ಲಿ ಪತನಗೊಂಡಂತಹ ಆಘಾತಕಾರಿ ಘಟನೆ ಗುರುವಾರ ಸಂಭವಿಸಿದ್ದು, ಈ ಅಪಘಾತವನ್ನು ವಿಮಾನ ಅಪಘಾತಗಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಪಘಾತವೆಂದು ಪರಿಗಣಿಸಲಾಗಿದೆ. ಇನ್ನು ಈ ಅಪಘಾತದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದು, ಇದಕ್ಕೆ ಸಂಬಂಧಪಟ್ಟ ಆಘಾತಕಾರಿ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ದುರಂತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ಅವಶೇಷಗಳ ಅಡಿಯಲ್ಲಿ ಭಗವದ್ಗೀತೆಯೊಂದು ಸಿಕ್ಕಿದ್ದು, ಎಲ್ಲವೂ ಸುಟ್ಟುಕರಕಲಾದರೂ ಈ ಭಗವದ್ಗೀತೆಯ ಪುಸ್ತಕ

ವಿಮಾನ ದುರಂತದ ಸ್ಥಳದಲ್ಲಿ ಸುರಕ್ಷಿತವಾಗಿ ಪತ್ತೆಯಾದ ಭಗವದ್ಗೀತೆ ವಿಡಿಯೋ ವೈರಲ್..! Read More »

ವೀಡಿಯೋ
Scroll to Top