ಭಾರತ-ಪಾಕ್ ಉದ್ವಿಗ್ನತೆ: ಬಂದ್ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭಿಸಿಲು ಸೂಚನೆ

(ನ್ಯೂಸ್ ಕಡಬ) newskadaba.com , ಮೇ.10. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ವಾಯುಪಡೆ ಸೂಚನೆ ನೀಡಿರುವುದಾಗಿ ವರದಿಯಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ. ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ವಿಮಾನ […]

ಭಾರತ-ಪಾಕ್ ಉದ್ವಿಗ್ನತೆ: ಬಂದ್ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭಿಸಿಲು ಸೂಚನೆ Read More »

ಬ್ರೇಕಿಂಗ್ ನ್ಯೂಸ್
Death, deadbody, Waterfall

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು

(ನ್ಯೂಸ್ ಕಡಬ) newskadaba.com , ಮೇ.10. ವಿವಾಹ ಸಮಾರಂಭದ ವೇಳೆ ದೇವಾಲಯದ ಕೆರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ದಾರುಣ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38) ಮತ್ತು ಸೌಮ್ಯ ಅವರ ಪುತ್ರ ವಾಸುದೇವ (4) ಎಂದು ಗುರುತಿಸಲಾಗಿದೆ. ಸತ್ಯನಾರಾಯಣ ಅವರು ನೀಡಿದ ದೂರಿನ ಪ್ರಕಾರ, ಕುಟುಂಬವು ನಂದಿಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿವಾಹಕ್ಕೆ ಹಾಜರಾಗಿತ್ತು. ಮಧ್ಯಾಹ್ನ 2:00 ಗಂಟೆ ಸುಮಾರಿಗೆ

ಕಾಪು: ದೇವಾಲಯದ ಕೆರೆಯಲ್ಲಿ ಮುಳುಗಿ 4 ವರ್ಷದ ಮಗು ಸಾವು Read More »

ಕರಾವಳಿ

ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು

(ನ್ಯೂಸ್ ಕಡಬ) newskadaba.com , ಮೇ.10. ಕಾರ್ಕಳ : ಕಾಮಿಡಿ ಕಿಲಾಡಿ ವಿನ್ನರ್ ಮಲ್ಪೆಯ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನ ಹೊಂದಿದರು. ಮೇ 11ರಂದು ಮಿಯ್ಯಾರಿನ ತನ್ನ ಗೆಳೆಯನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುವ ಸಂದರ್ಭ ರಾಕೇಶ್ ಪೂಜಾರಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾರ್ಕಳ ಗಾಜಿಯಾ ಆಸ್ಪತ್ರೆಗೆ ಕರೆದುಕೊಂಡು ಹೋದ ಬಳಿಕ ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಯಿತು.ಈ ವೇಳೆಗಾಗಲೇ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ ಹೊಂದಿದರು ಎಂದು ಸೂಚಿಸಿದರು. ಮೃತರು ತಾಯಿ ಹಾಗೂ ತಂಗಿಯನ್ನು ಅಗಲಿದ್ದಾರೆ.

ನಟ ರಾಕೇಶ್ ಪೂಜಾರಿ ಹೃದಯಘಾತದಿಂದ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.09. ಚಾಕುವಿನಿಂದ ಇರಿದು ಯುವಕನೋರ್ವನನ್ನು ಕೊಂದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ

(ನ್ಯೂಸ್ ಕಡಬ) newskadaba.com, ಮೇ.09: ಸುಹಾಸ್ ಹತ್ಯೆ ಪ್ರಕರಣದ ಎನ್‍ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು. ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ

ಸುಹಾಸ್ ಹತ್ಯೆ ಕೇಸ್‌: ಎನ್‌ಐಎ ತನಿಖೆಗೆ ಒತ್ತಾಯಿಸಿ ಬಿಜೆಪಿ ನಿಯೋಗ ರಾಜ್ಯಪಾಲರ ಭೇಟಿ Read More »

ಕರಾವಳಿ, ಕರ್ನಾಟಕ

ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com, ಮೇ.09: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಈ ಘಟನೆ ಸಂಭವಿಸಿದೆ. ವಿವಿಧ ವಲಯಗಳಲ್ಲಿ ಗಡಿಯಾಚೆಗಿನ ಶೆಲ್ ದಾಳಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯ

ಎಲ್‌ಒಸಿಯಲ್ಲಿ ಪಾಕ್‌ ಗುಂಡಿನ ದಾಳಿ- ಆಂಧ್ರಪ್ರದೇಶ ಮೂಲದ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್

ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ!

(ನ್ಯೂಸ್ ಕಡಬ) newskadaba.com, ಮೇ.09:ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಇದರ ನಡುವೆ ಭಾರತ ಗಡಿ ಪ್ರವೇಶಕ್ಕೆ ಯತ್ನಿಸಿದ ಪಾಕಿಸ್ತಾನ ಮೂಲದ 7 ಉಗ್ರರನ್ನು ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಮೂಲಗಳ ಪ್ರಕಾರ ಮೇ 8ರ

ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ! Read More »

ಬ್ರೇಕಿಂಗ್ ನ್ಯೂಸ್

ಭಾರತ-ಪಾಕ್ ನಡುವೆ ಯುದ್ಧ ಭೀತಿ, ತಾತ್ಕಾಲಿಕವಾಗಿ ಎಲ್ಲಾ ಐಪಿಎಲ್ ಪಂದ್ಯಗಳು ಅಮಾನತು

(ನ್ಯೂಸ್ ಕಡಬ) newskadaba.com, ಮೇ.09: ಮೇ – ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿರುವ ಹಿನ್ನೆಲೆಯಲ್ಲಿ ಪ್ರೇಕ್ಷಕರ ಹಾಗೂ ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರೀಮಿಯರ್ ಲೀಗ್ ( ಐಪಿಎಲ್) ನ ಮುಂದಿನ ಎಲ್ಲಾ ಹಂತದ ಪಂದ್ಯಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಾತ್ಕಾಲಿಕವಾಗಿ ಅಮಾನತುಪಡಿಸುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಕಳೆದ ರಾತ್ರಿ ಪಾಕಿಸ್ತಾನ ಭಾರತದ ಮೂರು ಗಡಿ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಡೋನ್ ದಾಳಿ ನಡೆಸಿತ್ತು. ಹೀಗಾಗಿ ಹಿಮಚಾಲ ಪ್ರದೇಶದಲ್ಲಿ ನಡೆಯುತ್ತಿದ್ದ ದೆಹಲಿ

ಭಾರತ-ಪಾಕ್ ನಡುವೆ ಯುದ್ಧ ಭೀತಿ, ತಾತ್ಕಾಲಿಕವಾಗಿ ಎಲ್ಲಾ ಐಪಿಎಲ್ ಪಂದ್ಯಗಳು ಅಮಾನತು Read More »

ಬ್ರೇಕಿಂಗ್ ನ್ಯೂಸ್

‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಮೇ.09: ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ, ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ  ಚಾನೆಲ್‌ಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಕಳುಹಿಸಿರುವ ರಕ್ಷಣಾ ಇಲಾಖೆ,  ನೇರ ಪ್ರಸಾರದ ಸುದ್ದಿಯಿಂದ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಲಾಗಿದೆ. ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು

‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ

(ನ್ಯೂಸ್ ಕಡಬ) newskadaba.com, ಮೇ.09: ನವದೆಹಲಿ: ಭಾರತದಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿದ್ದು ಕ್ಷಿಪಣಿ, ಡ್ರೋನ್‌ ಸೇರಿ ವೈಮಾನಿಕ ದಾಳಿಗಳ ಕುರಿತು ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು ಪಿಐಬಿ(PIB) ದೇಶದ ಜನರನ್ನು ಎಚ್ಚರಿಸಿದೆ. ಜತೆಗೆ ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ. ಯಾವುದೇ ತಪ್ಪು ಮಾಹಿತಿ ಕಂಡುಬಂದರೆ,

ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ Read More »

ಕರ್ನಾಟಕ
Scroll to Top