ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪನ

(ನ್ಯೂಸ್ ಕಡಬ) newskadaba.com, ಮೇ.03. ಅಹಮದಾಬಾದ್: ಉತ್ತರ ಗುಜರಾತ್‌ನಲ್ಲಿ ಇಂದು ಮುಂಜಾನೆ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾಡಳಿತದ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.ಬನಸ್ಕಾಂತ ಜಿಲ್ಲೆಯ ವಾವ್ ಬಳಿ ಮುಂಜಾನೆ 3.35 ಕ್ಕೆ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ ಎಂದು ಐಎಸ್‌ಆರ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ವಾವ್‌ನಿಂದ ಪೂರ್ವ-ಈಶಾನ್ಯಕ್ಕೆ (ಇಎನ್‌ಇ) 27 ಕಿ.ಮೀ ದೂರದಲ್ಲಿ 4.9 ಕಿ.ಮೀ ಆಳದಲ್ಲಿ ಭೂಕಂಪನ ದಾಖಲಾಗಿದೆ ಎಂದು ಗಾಂಧಿನಗರ […]

ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪನ Read More »

ಬ್ರೇಕಿಂಗ್ ನ್ಯೂಸ್

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ. ಜಾತ್ರಾ ಮಹೋತ್ಸವ ವೇಳೆ ಜನರು ಒಂದು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ

ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸುಹಾಸ್ ಶೆಟ್ಟಿ ಕೊಲೆ : ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾವನೆ ಕೆರಳಿಸಿದವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಬಳಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಸಂಬಂಧವಾಗಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ಹಾಗೂ ಗ್ರೂಪುಗಳು ಸಾಮಾಜಿಕ ಮಾಧ್ಯಮದ ಮೂಲಕ ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷ ಭಾವನೆ ಹುಟ್ಟುವಂತೆ ಪೋಸ್ಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ ಠಾಣೆಗಳಲ್ಲಿ ಕೆಳಗಿನಂತೆ ಪ್ರಕರಣಗಳನ್ನುದಾಖಲಿಸಿದೆ.

ಸುಹಾಸ್ ಶೆಟ್ಟಿ ಕೊಲೆ : ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾವನೆ ಕೆರಳಿಸಿದವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

(ನ್ಯೂಸ್ ಕಡಬ) newskadaba.com, ಮೇ.03. 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. 22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ Read More »

ಕರಾವಳಿ

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು ಕಡಬದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೇರಿದ ಕಾರ್ಯಕರ್ತರು ಬಳಿಕ ರಸ್ತೆ ತಡೆ ನಡೆಸಿ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಪೋಲಿಸರು ಬಂದೋಬಸ್ತು ಏರ್ಪಡಿಸಿದ್ದಾರೆ. ಕಡಬ ಪೇಟೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಮೇ.01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಾಯಗೊಂಡು, ಇದೀಗ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಭ್ಯವಾಗಲಿದೆ. https://karresults.nic.in/ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಮೇ.01: ಮಂಗಳೂರು: ಮಂಗಳೂರಿನ ಕುಡುಪುನಲ್ಲಿ ಇತ್ತೀಚೆಗೆ ನಡೆದ ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಕಲಿ ಮತ್ತು ಪ್ರಚೋದನಕಾರಿ ವಿಷಯ ಪೋಸ್ಟ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕುಡುಪು ಬಳಿ ಇತ್ತೀಚೆಗೆ ನಡೆದ ದಿನಗೂಲಿ ಕಾರ್ಮಿಕನ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು ಮತ್ತು ದಾರಿತಪ್ಪಿಸುವ ಮಾಹಿತಿ ಹರಿದಾಡುತ್ತಿರುವುದು ಕಂಡುಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

ಗುಂಪು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಸುಳ್ಳು ಪೋಸ್ಟ್: ಮಂಗಳೂರು ಪೊಲೀಸರಿಂದ 3 ಕೇಸ್ ದಾಖಲು Read More »

ಕರಾವಳಿ

ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು

(ನ್ಯೂಸ್ ಕಡಬ) newskadaba.com ಮೇ.01: ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೋವಾ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರೆಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನಪ್ಪದ್ದು, 6 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾತ್ರಾಳ್‌ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ತಮಿಳುನಾಡಿನ ಅರ್ಜುನ್‌ (28), ಶರವಣ (31), ಸೇಂದಿಲ್‌ (29) ಎಂದು ಗುರುತಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು

ಕಾರಿನ ಟೈರ್‌ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ , ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಮೂವರ ಸಾವು Read More »

ಬ್ರೇಕಿಂಗ್ ನ್ಯೂಸ್

ಬಾಟಲಿ ಬೆಟ್ಟಿಂಗ್‌ಗೆ ವ್ಯಕ್ತಿ ಬಲಿ – ಹಣಕ್ಕಾಗಿ ಹೆಣವಾದ ಯುವಕ

(ನ್ಯೂಸ್ ಕಡಬ) newskadaba.com ಮೇ.01: ಬೆಟ್ಟಿಂಗ್‌ ಹುಚ್ಚಿಗೆ ಒಂದು ಜೀವವೇ ಬಲಿಯಾಗಿದೆ. ಹೌದು ಅಜಾಗರೂಕ ಬೆಟ್ಟಿಂಗ್ ನಿಂದಾಗಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಐದು ಪೂರ್ಣ ಬಾಟಲಿ ಮದ್ಯವನ್ನು ನೀರು ಬೆರೆಸದೆ ಸೇವಿಸಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದ ಈತ, ಅದೇ ಗ್ರಾಮದ ಸ್ಥಳೀಯರಾದ ವೆಂಕಟರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರೊಂದಿಗೆ ಬೆಟ್ಟಿಂಗ್ ನಡೆಸಿ, ಒಂದು ಹನಿ ನೀರಿಲ್ಲದೆ ಐದು

ಬಾಟಲಿ ಬೆಟ್ಟಿಂಗ್‌ಗೆ ವ್ಯಕ್ತಿ ಬಲಿ – ಹಣಕ್ಕಾಗಿ ಹೆಣವಾದ ಯುವಕ Read More »

ಕರ್ನಾಟಕ

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)com ಮೇ.01 ನೆಲಮಂಗಲ: ನಟ ಅಜಿತ್ ಕುಮಾರ್ ಕಾಲಿಗೆ ಗಾಯವಾಗಿ ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ರಂಪಾಟದ ಕಾರಣದಿಂದಾಗಿ ನಟನಿಗೆ ಕಾಲಿಗೆ ಸಣ್ಣ ಗಾಯವಾಗಿದೆ ಎಂದು ಹೇಳಲಾಗಿದೆ. ತಮಿಳು ನಟ ಅಜಿತ್ ಕುಮಾರ್ ಅವರನ್ನು ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಪುರಸ್ಕರಿಸಲಾಗಿದೆ. ಆದಾಗ್ಯೂ, ಒಂದು ದುರದೃಷ್ಟಕರ ಘಟನೆ ಅವರನ್ನು ಆಸ್ಪತ್ರೆಗೆ ದಾಖಲಿಸಿದೆ. ವರದಿಯ

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್
Scroll to Top