ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ

(ನ್ಯೂಸ್ ಕಡಬ) newskadaba.com, ಎ.04 : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು. ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ […]

ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ Read More »

ಕರ್ನಾಟಕ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಎ.04 ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು ವರ್ಷಗಳ ಗಮನಾರ್ಹ ವಿಳಂಬವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. 2006ರಲ್ಲಿ 15 ವರ್ಷದ ಅಪ್ರಾಪ್ತಿಯಾಗಿದ್ದಾಗ ಹಾಗೂ 2012ರಲ್ಲಿ ಎರಡನೇ ಬಾರಿ ರಾಘವೇಶ್ವರ ಭಾರತಿ ಸ್ವಾಮೀಜಿ ತನ್ನ ಶಿಷ್ಯಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ನಾಟಕ

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.04. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಉಪ್ಪಿನಂಗಡಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ Read More »

ಕರ್ನಾಟಕ

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ಬಿಜೆಪಿ ನಾಯಕರು ಸರಕಾರದ ವಿರುದ್ಧ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ್ದರು. ಇಂದು ಸಿಎಂ ಮನೆ ಮುತ್ತಿಗೆ ಹಾಕಲು ನಿರ್ಧರಿಸಿ, ಸಿಎಂ ಮನೆ ಕಡೆ ತೆರಳಲು ಮುಂದಾದರು.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ – NHAI ಎಚ್ಚರಿಕೆ

(ನ್ಯೂಸ್ ಕಡಬ) newskadaba.com , ಏ.03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಬದಿಗಳಲ್ಲಿ ಮಾತ್ರವಲ್ಲದೆ ಫ್ಲೈಓವರ್‌ಗಳಲ್ಲಿಯೂ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸುವುದರ ವಿರುದ್ಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕಠಿಣ ಎಚ್ಚರಿಕೆ ನೀಡಿದೆ. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ NHAI ಯ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ಹೆದ್ದಾರಿಗಳು, ಫ್ಲೈಓವರ್‌ಗಳು ಮತ್ತು ಜಂಕ್ಷನ್‌ಗಳಲ್ಲಿ ಹಾಕಲಾದ ಫ್ಲೆಕ್ಸ್ ಬೋರ್ಡ್‌ಗಳ ಕುರಿತು ದೂರುಗಳು ದಾಖಲಾಗಿವೆ ಎಂದು ದೃಢಪಡಿಸಿದರು. ಹೆದ್ದಾರಿ ಸಂಬಂಧಿತ

ಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ – NHAI ಎಚ್ಚರಿಕೆ Read More »

ಕರಾವಳಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com , ಏ.03: ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ. ಕಾರಿನಲ್ಲಿದ್ದ ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು ಎಂದು ತಿಳಿದು ಬಂದಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದಕ್ಷಿಣ ವಲಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ

ತರಬೇತಿ ಕಾರ್ಯಾಚರಣೆಯ ಜಾಗ್ವಾರ್‌ ಯುದ್ಧ ವಿಮಾನ ಪತನ – ಪೈಲಟ್‌ ಸಾವು

(ನ್ಯೂಸ್ ಕಡಬ) newskadaba.com , ಏ.03: ಗುಜರಾತ್‌ನ ಜಮ್‌ನಗರದಲ್ಲಿ ಬುಧವಾರ ನಡೆದ ರಾತ್ರಿ ಕಾರ್ಯಾಚರಣೆಯಲ್ಲಿ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದೆ.ಎರಡು ಆಸನಗಳ ಯುದ್ಧ ವಿಮಾನ ಅಪಘಾತಕ್ಕೀಡಾಗಿ, ಭಾರತೀಯ ವಾಯುಪಡೆಯ ಪೈಲಟ್ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಪತನಗೊಂಡ ವಿಮಾನದಿಂದ ಒಬ್ಬ ಪೈಲಟ್‌ ರಕ್ಷಿಸಲಾಯಿತು. ಮತ್ತೊಬ್ಬರು ನಾಪತ್ತೆಯಾಗಿದ್ದರು. ರಕ್ಷಿಸಿದ ಪೈಲಟ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಪ್ರೇಮ್‌ಸುಖ್ ಡೆಲು ತಿಳಿಸಿದ್ದಾರೆ. ಜಮ್‌ನಗರದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಸುವರ್ಡಾ ಗ್ರಾಮದಲ್ಲಿ ತೆರೆದ ಮೈದಾನದಲ್ಲಿ ಯುದ್ಧ ವಿಮಾನ

ತರಬೇತಿ ಕಾರ್ಯಾಚರಣೆಯ ಜಾಗ್ವಾರ್‌ ಯುದ್ಧ ವಿಮಾನ ಪತನ – ಪೈಲಟ್‌ ಸಾವು Read More »

ಬ್ರೇಕಿಂಗ್ ನ್ಯೂಸ್

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

(ನ್ಯೂಸ್ ಕಡಬ) newskadaba.com , ಏ.03: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು ಹೇಳಿದ್ದಾರೆ. ಮಸೂದೆಯ ಅಂಗೀಕಾರದ ವಿರುದ್ಧ ಪ್ರತಿಭಟಿಸಲು ಕಪ್ಪು ಬ್ಯಾಡ್ಜ್ ಧರಿಸಿ ವಿಧಾನಸಭೆಗೆ ಬಂದ ಸಿಎಂ, ಭಾರತದಲ್ಲಿ ಬಹುಮತದ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆಜ್ಞೆಯ ಮೇರೆಗೆ ಮುಂಜಾನೆ 2 ಗಂಟೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ Read More »

ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಳ್ತಂಗಡಿಯ ಬೆಳಾಲು ಗ್ರಾಮದ ಕಾಡಿನಲ್ಲಿ 3 ತಿಂಗಳ ಹೆಣ್ಣು ಮಗುವೊಂದು ಪತ್ತೆಯಾದ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದೆ. ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ  ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ‌ ಧರ್ಮಸ್ಥಳದಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಸುಶ್ಮಿತಾ

ಬೆಳ್ತಂಗಡಿ: ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ‌ ಹೆತ್ತವರು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top