ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟು

(ನ್ಯೂಸ್ ಕಡಬ) newskadaba.com , ಏ.03: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಭಾರತ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳ ಮೇಲೆ ಶೇ 26 ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದು ದೇಶದ ಅರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇದರಿಂದ ಭಾರತವು ಜವಳಿ, ರಾಸಾಯನಿಕಗಳು, ಔಷಧಗಳು ಮತ್ತು ಕೃಷಿ ಉತ್ಪನ್ನಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಸರಕುಗಳನ್ನು ಅಮೆರಿಕಕ್ಕೆ ರಫ್ತು ಮಾಡುತ್ತದೆ. ಕೆಲವು ವಲಯಗಳಿಗೆ ಟ್ರಂಪ್ ಅವರ ಸುಂಕಗಳಿಂದ ನೇರವಾಗಿ ಪರಿಣಾಮ ಬೀರಿದರೆ, ಇತರ ಕೆಲವು […]

ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ, ಭಾರತದ ಆರ್ಥಿಕತೆಗೆ ಪೆಟ್ಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com , ಏ.03 ಬೆಂಗಳೂರು: ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ದೆಹಲಿಯಲ್ಲಿ 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು, ಸಂಸದರು

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ

(ನ್ಯೂಸ್ ಕಡಬ) newskadaba.com , ಏ.02 : ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ (ED) ಪ್ರಶ್ನಿಸಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಇಡಿ ಮಂಗಳವಾರ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಕೇಂದ್ರ ತನಿಖಾ ಸಂಸ್ಥೆಯು ತನ್ನ ಅರ್ಜಿಯಲ್ಲಿ PMLA-2002ರ ಉದ್ದೇಶ ಮತ್ತು ಕಾರಣಗಳನ್ನು

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com , ಏ.02 : ಆರೋಗ್ಯ ಹದಗೆಟ್ಟ ಕಾರಣ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಬಿಹಾರದ ಪರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಗೆ ತೆರಳುವ ಸಲುವಾಗಿ ಸಂಜೆ ಪಾಟ್ನಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಬ್ಲಡ್ ಶುಗರ್ ಲೆವೆಲ್ ಏರಿಕೆಯಾಗಿ ಆರೋಗ್ಯ ಹದಗೆಟ್ಟಿದೆ. ಏರ್ ಅಂಬುಲೆನ್ಸ್‌ ಮೂಲಕ ಲಾಲೂ ಪ್ರಸಾದ್ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುವ ಸಾಧ್ಯತೆಯಿದೆ. ಚಿಂತಿಸುವ ಅಗತ್ಯವಿಲ್ಲ ಎಂದು ಆರ್‌ಜೆಡಿ

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ

(ನ್ಯೂಸ್ ಕಡಬ) newskadaba.com , ಏ.02 : 14 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಬುಧವಾರ ಮಧ್ಯರಾತ್ರಿ 1:43 ಗಂಟೆಗೆ ಲೋಕಸಭೆ ಅಂಗೀಕರಿಸಿದೆ. ವಿವಾದಿತ ಮಸೂದೆ ಕುರಿತು ಸಂಸತ್‌ನಲ್ಲಿ 12 ಗಂಟೆಗಳ ಕಾಲ ಚರ್ಚೆ ನಡೆಯಿತು. ನಂತರ 2 ತಾಸುಗಳ ಕಾಲ ಮತದಾನ ನಡೆಯಿತು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಸೂದೆಗೆ ಸದನ ಅಸ್ತು ಎಂದಿದೆ. ಮಸೂದೆ ಪರ 288 ಹಾಗೂ ಮಸೂದೆ ವಿರುದ್ಧ 232 ಮತ ಬಿದ್ದವು. ಮಸೂದೆಯನ್ನು ಮತಕ್ಕೆ ಹಾಕುವ

ದೆಹಲಿ: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯು 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com , ಏ.02 : ಮನೆಯೊಂದರ ಕಿಟಿಕಿಯನ್ನು ಮುರಿದು ಮನೆಯೊಳಗೆ ಲಾಕರ್‌ನಲ್ಲಿದ್ದ ಸುಮಾರು 1 ಕೆ.ಜಿ. ಚಿನ್ನಾಭರಣ ಕಳವು ಮಾಡಲಾದ ಘಟನೆ ಬಜ್ಪೆಯ ಪೆರ್ಮುದೆ ಪೇಟೆಯಲ್ಲಿ ನಡೆದಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೋ  ವರ ಮನೆಯಿಂದ ಈ ಕಳ್ಳತನ ನಡೆದಿದೆ. ಅಜಾನ್ವಿನ್‌ ಪಿಂಟೋ ಹಾಗೂ ಅವರ ಪುತ್ರ ಪ್ರವೀಣ್‌ ಪಿಂಟೋ ಕುವೈಟ್‌ನಲ್ಲಿದ್ದಾರೆ. ಮನೆಯಲ್ಲಿ ಯಾರೂ ಇರಲಿಲ್ಲ. ಇವರ ಮನೆಯ ಸುತ್ತ 16 ಸಿಸಿ ಕ್ಯಾಮೆರಾ ಇದ್ದರೂ, ಕೆಮರಾ ಇಲ್ಲದ ಕಡೆಯಿಂದ ಬಂದು ಕೆಮರಾದ ದಿಕ್ಕನ್ನು ಬದಲಿಸಿ

ಮಂಗಳೂರು : ಮನೆಯ ಕಿಟಿಕಿ ಮುರಿದು 1 ಕೆ.ಜಿ. ಚಿನ್ನಾಭರಣ ಕದ್ದೊಯ್ದ ಕಳ್ಳರು Read More »

ಕರಾವಳಿ

ಬಂಗಾರದ ದರ 10 ಗ್ರಾಮ್‌ಗೆ 91,000 ರೂ

(ನ್ಯೂಸ್ ಕಡಬ) newskadaba.com , ಏ.02  ಹೊಸದಿಲ್ಲಿ: ಬಂಗಾರದ ದರ ಏ. 1ರಂದು ಹೊಸ ದಾಖಲೆಯ ಎತ್ತರಕ್ಕೇರಿದೆ. ಪ್ರತಿ 10 ಗ್ರಾಮ್‌ ಚಿನ್ನದ ದರ ಬರೋಬ್ಬರಿ 91,000 ರೂ.ಗೆ ಜಿಗಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ ಗ್ರಾಮ್‌ ಬಂಗಾರದ ದರ 9,284 ರುಪಾಯಿಗೆ ಏರಿಕೆಯಾಗಿದೆ. ಹಾಗಾದರೆ ನಿರಂತರವಾಗಿ ಬಂಗಾರದ ದರ ಏರುತ್ತಿರುವುದು ಏಕೆ? ಇದಕ್ಕೆ ಮೊದಲ ಕಾರಣ ಜಾಗತಿಕ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಘೋಷಿಸಿರುವ ಟಾರಿಫ್‌ ವಾರ್ ಜತೆಗೆ ಹಣದುಬ್ಬರ ಕೂಡ

ಬಂಗಾರದ ದರ 10 ಗ್ರಾಮ್‌ಗೆ 91,000 ರೂ Read More »

ಕರಾವಳಿ

“ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ”ಯಿಂದ ಬೆಲೆ ಏರಿಕೆ ಸುಲಿಗೆ : ಜೆಡಿಎಸ್

(ನ್ಯೂಸ್ ಕಡಬ) newskadaba.com , ಏ.02 : ಡೀಸೆಲ್ ದರ ಪ್ರತಿ ಲೀಟರಿಗೆ 2 ಹೆಚ್ಚಿಸಿರುವುದನ್ನು ತೀವ್ರವಾಗಿ ವಿರೋಧಿಸಿರುವ ಜೆಡಿಎಸ್, ರಾಜ್ಯದ ಅಭಿವೃದ್ಧಿ ಕಾರ್ಯಗಳಲ್ಲಿ ಹಿಂದೆ ಬಿದ್ದಿರುವ ಕಳಪೆ ಕಾಂಗ್ರೆಸ್ ಸರ್ಕಾರವು ದರ ಏರಿಸುವಲ್ಲಿ ಎಲ್ಲರಿಗಿಂತಲೂ ಮುಂದಿದೆ ಎಂದು ಟೀಕಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಳೆದ 10 ತಿಂಗಳಲ್ಲಿ ಡೀಸೆಲ್ ಪ್ರತಿ ಲೀಟರಿಗೆ 5 ರೂ. ಏರಿಕೆ ಮಾಡಿದೆ ಎಂದು ಆರೋಪಿಸಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರವು ಬೆಲೆ ಏರಿಕೆ

“ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ”ಯಿಂದ ಬೆಲೆ ಏರಿಕೆ ಸುಲಿಗೆ : ಜೆಡಿಎಸ್ Read More »

ಕರ್ನಾಟಕ
Scroll to Top