ಹನಿ ಟ್ರ್ಯಾಗಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಾ. 21 : ಹನಿ ಟ್ರ‍್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ‍್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ […]

ಹನಿ ಟ್ರ್ಯಾಗಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

(ನ್ಯೂಸ್ ಕಡಬ) newskadaba.com ಮಾ. 21  ಪುತ್ತೂರು: ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ‘ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ತಿಳಿಸಿದರು. ಉಪ್ಪಿನಂಗಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೪ ಗಂಟೆಯ ಮಿತಿಯೊಳಗೆ ಈ ಬಾರಿ ಕಂಬಳೋತ್ಸವವನ್ನು ಮುಗಿಸುವ ಚಿಂತನೆ ಸಮಿತಿಗಿದೆ. ಈ ಬಾರಿ ೧೫೦ ಜತೆ ಕೋಣಗಳು

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’ Read More »

ಕರಾವಳಿ

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ. ಖರ್ಚು: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 21: ಬೆಂಗಳೂರು: ರಾಜ್ಯದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಮಾಹಿತಿ ನೀಡಿದೆ. ನಕ್ಸಲಿಸಂ ನಿಗ್ರಹಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳು ಮತ್ತು ಮಾಡಿದ ವೆಚ್ಚಗಳ ಕುರಿತು ಗುರುವಾರ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ಉತ್ತರಿಸದರು. ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ. ಖರ್ಚು: ರಾಜ್ಯ ಸರ್ಕಾರ Read More »

ಕರ್ನಾಟಕ

ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ಮಾ. 21: ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಈ ಪರೀಕ್ಷೆಯು ಏ. 4ರ ವರೆಗೆ ನಡೆಯಲಿದೆ. ರಾಜ್ಯದ  2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 8,42,817 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಓದುತ್ತಿದ್ದಾರೆ. ಇವರನ್ನು ಹೊರತುಪಡಿಸಿ 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ ಒಟ್ಟು 8,96,447 ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 3,35,468 ಬಾಲಕರು ಮತ್ತು 3,78,389 ಬಾಲಕಿಯರು ಇದ್ದಾರೆ. ಜೊತೆಗೆ ಐವರು ತೃತೀಯ ಲಿಂಗಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗ್ಗೆ 10 ರಿಂದ ಪ್ರಾರಂಭವಾಗುವ ಪರೀಕ್ಷೆ ಮಧ್ಯಾಹ್ನ

ರಾಜ್ಯದಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ Read More »

ಕರ್ನಾಟಕ

ಪುತ್ತೂರು: ಪ್ರಭು ಚರುಂಬುರಿ ಮಾಲಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮಾ. 20 ಪುತ್ತೂರು: ಪುತ್ತೂರಿನ ಪ್ರಭು ಚರುಂಬುರಿ ಮಾಲಕ ಕೆಮ್ಮಾಯಿ ದಾರಂದಕುಕ್ಕು ನಿವಾಸಿ ಸುಧಾಕರ ಪ್ರಭು(42) ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಯಲ್ಲಿ ಮುಂದಿನ ವಾರ ನೇಮೋತ್ಸವ ನಡೆಯಲಿದ್ದು ಅದರ ಪೂರ್ವ ತಯಾರಿಯಲ್ಲಿ ತೊಡಗಿದ್ದರು. ಆದರೆ ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಇವರ ಈ ನಿರ್ಧಾರದಿಂದ ಕುಟುಂಬದವರು ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ

ಪುತ್ತೂರು: ಪ್ರಭು ಚರುಂಬುರಿ ಮಾಲಕ ನೇಣಿಗೆ ಶರಣು Read More »

ಕರಾವಳಿ

ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಜನಪ್ರಿಯ ಯುಪಿಐ ಪಾವತಿ ಆ್ಯಪ್‌ಗಳಾದ ಗೂಗಲ್ ಪೇ, ಫೋನ್‌ಪೇ ಮತ್ತು ಪೇಟಿಎಂ ಬಳಕೆದಾರರು ಇದೇ ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ (UPI) ಪಾವತಿ ಮಾಡುವಾಗ ಸಮಸ್ಯೆ ಎದುರಾಗಬಹುದು ಎಂದು ತಿಳಿದು ಬಂದಿದೆ. ಈ ಬಗ್ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಬ್ಯಾಂಕ್‌ಗಳು ಮತ್ತು ಯುಪಿಐ ಅಪ್ಲಿಕೇಶನ್‌ಗಳಿಗೆ “ನಿಷ್ಕ್ರಿಯ ಮೊಬೈಲ್ ಸಂಖ್ಯೆ”ಗಳನ್ನು ತಮ್ಮ ವ್ಯವಸ್ಥೆಯಿಂದ ತೆಗೆದುಹಾಕಲು ಸೂಚನೆ ನೀಡಿದೆ. ದೀರ್ಘಕಾಲದಿಂದ ಸಕ್ರಿಯವಾಗಿಲ್ಲದ ಮೊಬೈಲ್ ಸಂಖ್ಯೆಗಳನ್ನು ಯುಪಿಐಗೆ ಲಿಂಕ್ ಮಾಡಿದ ಬ್ಯಾಂಕ್

ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ Read More »

ಬ್ರೇಕಿಂಗ್ ನ್ಯೂಸ್

ಸ್ಥಳೀಯ ಸಂಸ್ಥೆ ಚುನಾವಣೆಗೆ ಹೈಕಮಾಂಡ್ ಸೂಚನೆ ನೀಡಿದೆ: ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು. ನವದೆಹಲಿ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ

ಸ್ಥಳೀಯ ಸಂಸ್ಥೆ ಚುನಾವಣೆಗೆ ಹೈಕಮಾಂಡ್ ಸೂಚನೆ ನೀಡಿದೆ: ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್!

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆಂಬ ಹಿನ್ನೆಲೆ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಲಕ್ಷ್ಮಿ ಮಂಚು ಮತ್ತು ಪ್ರಕಾಶ್ ರಾಜ್ ಸೇರಿದಂತೆ ಸುಮಾರು 25 ಸೆಲೆಬ್ರಿಟಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಹೈದರಾಬಾದ್ ಪೊಲೀಸರು ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸೆಲೆಬ್ರಿಟಿಗಳು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ್ದಾರೆಂಬ ಆರೋಪ ಸಂಬಂಧ ಹೈದರಾಬಾದ್‌ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಸ್ತವವಾಗಿ, 32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ತೆಲುಗು

ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್! Read More »

ಸಿನಿಮಾ

ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ ವಾಟ್ಸಪ್‌ನಲ್ಲಿ ಹಣ ಪೀಕುತ್ತಿದ್ದ ಖದೀಮರು!

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಹಾಗೂ ಮಾಡೆಲ್ ಆಗಿರುವ ಶರಣ್ಯ ಶೆಟ್ಟಿ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ನಟಿಯ ಗಮನಕ್ಕೆ ಬಂದಿದ್ದು ತಕ್ಷಣವೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕ್ಲಾರಿಟಿ ಕೊಟ್ಟಿದ್ದಾರೆ. ಹಣದ ವಂಚನೆ ಮಾಡುತ್ತಿರುವವರು ದೂರು ನೀಡಲು ಮುಂದಾಗಿದ್ದಾರೆ. ಹೌದು! ನಟಿ ಶರಣ್ಯಾ ಶೆಟ್ಟಿ ಹೆಸರನ್ನು ಬಳಸಿಕೊಂಡು ಕೆಲವು ಕಿಡಿಗೇಡಿಗಳು ವಾಟ್ಸಪ್‌ನಲ್ಲಿ ವಂಚನೆ ಮಾಡುತ್ತಿದ್ದಾರೆ. ಶರಣ್ಯ ಶೆಟ್ಟಿಯಾದ ನಾನು ನಿಮ್ಮೊಟ್ಟಿಗೆ ಕೊಲಾಬೋರೇಷನ್‌ ( ಪ್ರಮೋಷನ್) ಮಾಡಿ ಕೊಡುತ್ತೀನಿ ಇಂತಿಷ್ಟು ಅಂತ ಹಣ ಕೊಡಬೇಕು ಎಂದು

ನಟಿ ಶರಣ್ಯ ಶೆಟ್ಟಿ ಹೆಸರು ಬಳಸಿ ವಾಟ್ಸಪ್‌ನಲ್ಲಿ ಹಣ ಪೀಕುತ್ತಿದ್ದ ಖದೀಮರು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಸೇರಿದಂತೆ ನಾನಾ ಬಗೆಯ ಬೆಲೆ ಏರಿಕೆಗಳ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ

ವಿದ್ಯುತ್ ಗ್ರಾಹಕರಿಗೆ ಶಾಕ್‌, ಕೆಇಆರ್‌ಸಿಯಿಂದ ದರ ಏರಿಕೆ Read More »

ಕರ್ನಾಟಕ
Scroll to Top