ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ […]

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಕುರಿತು ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಾದ್ಯಂತ ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದರು. 2022ನೇ ಸಾಲಿನಲ್ಲಿ ಕಾರ್ಯಾಚರಣೆ ಕೈಗೊಂಡ ಸಬ್ ರಿಜಿಸ್ಟ್ರಾರ್ ಗಳಿಗೆ ಮತ್ತೆ ದಿಢೀರ್ ಭೇಟಿ ನೀಡಿದಾಗಲೂ ಅದೇ ನ್ಯೂನತೆ ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳನ್ನು

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ Read More »

ಕರ್ನಾಟಕ

2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. 1995ರಲ್ಲಿ. ಎಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೊದಲ ಬಜೆಟ್‌ ಮಂಡಿಸಿದ್ದರು. 1995 ಮತ್ತು 1996ರಲ್ಲಿ ದೇವೇಗೌಡರು ಸಿಎಂ ಆಗಿದ್ದಾಗ, 1997, 1998, 1999ರಲ್ಲಿ ಜೆ.ಎಚ್‌. ಪಟೇಲ್‌ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದ್ದರು. 2013ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು 2013, 2014, 2015,

2025-26ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com ಮಾ. 06: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪೂರೈಸುವ ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ನಂತರ ಹೆಚ್ಚಳದ ಪ್ರಮಾಣವನ್ನು ನಿರ್ಧರಿಸಲಾಗುವುದು. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಈ ನಿರ್ಧಾರವನ್ನು ದೃಢಪಡಿಸಿದರು. ಕಾಂಗ್ರೆಸ್ ಎಂಎಲ್‌ಸಿ ಮತ್ತು ಮಾಜಿ ಸಚಿವೆ ಬಿ. ಉಮಾಶ್ರೀ ಮತ್ತು ಬಿಜೆಪಿ ಎಂಎಲ್‌ಸಿ ಎಂ.ಜಿ. ಮುಳೆ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸರ್ಕಾರ ರೈತರ ಬೇಡಿಕೆಗಳನ್ನು ಪರಿಗಣಿಸುತ್ತಿದ್ದು, ಶೀಘ್ರದಲ್ಲೇ

ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ Read More »

ಕರ್ನಾಟಕ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಾ. 06 ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ ಸಂಭವಿಸಿದ ಆಹಾರ ವಿಷದ (ಫುಡ್ ಪಾಯಿಸನ್) ಘಟನೆಯಲ್ಲಿ ೪೫ ವಿಚಾರಣಾಧೀನ ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂಜೆ ೪:೩೦ರ ಸುಮಾರಿಗೆ ಕೆಲವು ಕೈದಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾದ ೪೫ ಕೈದಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕೈದಿಗಳು ಮಧ್ಯಾಹ್ನದ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯ ಬಂಧನ

(ನ್ಯೂಸ್ ಕಡಬ) newskadaba.com ಮಾ. 06 : ಕಲಬುರಗಿ ಜಿಲ್ಲೆಯ ಕಾಲೇಜೊಂದರಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರನ್ನು ಬಂಧಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.೫ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಕಾಲೇಜೊಂದರಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವ ಘಟನೆ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯ ಬಂಧನ Read More »

ಕರ್ನಾಟಕ

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 06 ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾಷಾ ವಿವಾದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಾ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ತ್ರಿಭಾಷಾ ನೀತಿ ಜಾರಿಗೆ ತರುವುದು ಇಂದಿನ ಅಗತ್ಯ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅನೇಕ ರೈಲುಗಳಿಗೆ ಸೆಂಗೋಲ್ ಎಕ್ಸ್‌ಪ್ರೆಸ್‌ನಂತಹ ತಮಿಳು ಐಕಾನ್‌ಗಳ ಹೆಸರನ್ನು ಇಡಲಾಗಿದೆ ಎಂದು ಹೇಳಿದರು. “ಅವರು (ಈಗ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ) 2006 ಮತ್ತು 2014 ರಿಂದ

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್ಐಆರ್

(ನ್ಯೂಸ್ ಕಡಬ) newskadaba.com ಮಾ. 06 ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಯರ್ ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ವಿಸ್ಮಯ ಹೇಳಿದ್ದರು.ಬಳಿಕ ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಹೊರಬಿದ್ದಿಲ್ಲ.

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್ಐಆರ್ Read More »

ಕರ್ನಾಟಕ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 06 ಕಾರವಾರ : ಅಪ್ರಾಪ್ತ 10ನೇ ತರಗತಿ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಗಿರೀಶ್ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಮೂಲದ ಸಂತ್ರಸ್ತ ಯುವತಿ ಮುಂಡಗೋಡ ತಾಲೂಕಿನ ಗ್ರಾಮವೊಂದರ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯುವತಿಯನ್ನ ಪರಿಚಯಿಸಿಕೊಂಡಿರುವ ಆರೋಪಿ, ಪುಸಲಾಯಿತಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಪ್ರಾಪ್ತಿಗೆ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್ Read More »

ಕರಾವಳಿ

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ವಿಜ್ಞಾನ ಮತ್ತು ಸಮಾಜ ವಿಜ್ಞಾನದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗೆ ಒಂದು ದಿನ ಮೊದಲು, ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದವು, ಶಿಕ್ಷಣ ಇಲಾಖೆಯಿಂದಲೇ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ಮಾರ್ಚ್ 3 ಮತ್ತು 4 ರಂದು ನಿಗದಿಯಾಗಿದ್ದವು. ಆದರೆ ಮಾರ್ಚ್ 2 ಮತ್ತು 3 ರಂದೇ ಸಂಪೂರ್ಣ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿವೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಟಿಎನ್‌ಐಇಗೆ ಮಾಹಿತಿ ನೀಡಿದ್ದು, ಪ್ರಶ್ನೆ

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ Read More »

ಕರ್ನಾಟಕ
Scroll to Top