ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪರಿಚಿತ ಯುವಕ

(ನ್ಯೂಸ್ ಕಡಬ) newskadaba.com ಕಡಬ, ಮಾ.21. ಅಪರಿಚಿತ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಓಂತ್ರಡ್ಕ ಶಾಲೆಯ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಮೈಸೂರು ಮೂಲದವನೆಂದು ಗುರುತಿಸಲಾಗಿದ್ದು, ಆತ ಓಂತ್ರಡ್ಕ ಶಾಲೆಯ ಸಮೀಪ ಕಾರನ್ನು ನಿಲ್ಲಿಸಿ ವಿಷ ಸೇವಿಸಿದ್ದು, ಆ ಬಳಿಕ ತನ್ನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದ ಎನ್ನಲಾಗಿದೆ. ವಾಂತಿ ಮಾಡುವುದನ್ನು ಕಂಡ ಸ್ಥಳೀಯರು 112 ಪೊಲೀಸರಿಗೆ ಮಾಹಿತಿ‌ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಡಬ […]

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪರಿಚಿತ ಯುವಕ Read More »

ಕರ್ನಾಟಕ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಮಾ.2 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ. ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ Read More »

ಕರಾವಳಿ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ!

(ನ್ಯೂಸ್ ಕಡಬ) newskadaba.com ಮಾ. 21 : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶನಿವಾರ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಪಂದ್ಯ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದ್ದು, ಕೋಲ್ಕತ್ತಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಉದ್ಘಾಟನಾ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ! Read More »

ಕರಾವಳಿ

ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು

(ನ್ಯೂಸ್ ಕಡಬ) newskadaba.com ಮಾ. 21 : ಹನಿಟ್ರ‍್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ‍್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದ ಶಾಸಕರು Read More »

ಕರ್ನಾಟಕ

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಾ. 21 ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಡಿಎನ್‌ಬಿ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ಗಳು ನಡೆಯುತ್ತಿದೆ. ಡಿಎನ್‌ಬಿ ಕೋರ್ಸ್‌ನ ಇಮ್ಯುನೊ ಹೆಮಟಾಲಜಿ ಮತ್ತು ಟ್ರಾನ್ಸ್‌ಫ್ಯೂಶನ್ ಮೆಡಿಸಿನ್ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗೆ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ನ ಯುರಾಲಜಿ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ತಜ್ಞರು ವೈದ್ಯರುಗಳು/ಅಭ್ಯರ್ಥಿಗಳು ಸಂಬಂಧಿಸಿದ ಅಗತ್ಯವಾದ ಮೂಲ ದಾಖಲಾತಿಗಳೊಂದಿಗೆ ಮಾ.25ರಂದು ಪೂ.11ಕ್ಕೆ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 21 ಬೆಳ್ತಂಗಡಿ: ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಕರ್ನಾಟಕ ಬಂದ್’ಗೆ ರಾಜ್ಯ ಸರ್ಕಾರದ ಬೆಂಬಲವಿಲ್ಲ: DCM ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಮಾ. 21 : ಬೆಂಗಳೂರು: ಮಾ. 22ರಂದು ಕನ್ನಡ ಪರ ಒಕ್ಕೂಟಗಳು ಕರೆ ಕೊಟ್ಟಿರುವ “ಕರ್ನಾಟಕ ಬಂದ್‌’ ಅನ್ನು ಯಾವುದೇ ಕಾರಣಕ್ಕೂ ಸರ್ಕಾರ ಬೆಂಬಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾ.22 ರಂದು ನಡೆಯಲಿರುವ ಕರ್ನಾಟಕ ಬಂದ್ ನಿಂದ ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗುತ್ತದೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಜನರು ಕಾನೂನು ಕೈಗೆತ್ತುಕೊಳ್ಳಬಾರದು. ಸರ್ಕಾರ ಅಥವಾ

ಕರ್ನಾಟಕ ಬಂದ್’ಗೆ ರಾಜ್ಯ ಸರ್ಕಾರದ ಬೆಂಬಲವಿಲ್ಲ: DCM ಡಿಕೆ ಶಿವಕುಮಾರ್ Read More »

ಕರ್ನಾಟಕ

ಹನಿ ಟ್ರ್ಯಾಗಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಾ. 21 : ಹನಿ ಟ್ರ‍್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ‍್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು ವಜಾ ಮಾಡಬೇಕು ಹಾಗೂ ಸದನದಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಹಾಗೂ ನ್ಯಾಯಾಂಗ ತನಿಖೆಗೆ

ಹನಿ ಟ್ರ್ಯಾಗಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

(ನ್ಯೂಸ್ ಕಡಬ) newskadaba.com ಮಾ. 21  ಪುತ್ತೂರು: ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ‘ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ತಿಳಿಸಿದರು. ಉಪ್ಪಿನಂಗಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೪ ಗಂಟೆಯ ಮಿತಿಯೊಳಗೆ ಈ ಬಾರಿ ಕಂಬಳೋತ್ಸವವನ್ನು ಮುಗಿಸುವ ಚಿಂತನೆ ಸಮಿತಿಗಿದೆ. ಈ ಬಾರಿ ೧೫೦ ಜತೆ ಕೋಣಗಳು

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’ Read More »

ಕರಾವಳಿ

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ. ಖರ್ಚು: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 21: ಬೆಂಗಳೂರು: ರಾಜ್ಯದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಮಾಹಿತಿ ನೀಡಿದೆ. ನಕ್ಸಲಿಸಂ ನಿಗ್ರಹಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳು ಮತ್ತು ಮಾಡಿದ ವೆಚ್ಚಗಳ ಕುರಿತು ಗುರುವಾರ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ಉತ್ತರಿಸದರು. ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ. ಖರ್ಚು: ರಾಜ್ಯ ಸರ್ಕಾರ Read More »

ಕರ್ನಾಟಕ
Scroll to Top