ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com , ಫೆ.07. ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್ Read More »

ಕರ್ನಾಟಕ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 4-5ರ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ!

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಎಂದು

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ !

(ನ್ಯೂಸ್ ಕಡಬ) newskadaba.com , ಫೆ.07. ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನೆಲಸಮಗೊಂಡ ಮನೆಯ ಸ್ಥಳದಲ್ಲಿ ಗುರುವಾರ ಮಧ್ಯಾಹ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ 40 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಮನೆ ಬಿಜೆಪಿ ನಾಯಕ ಮತ್ತು ಮಾಜಿ ಎಂಎಲ್ಸಿ ರಾಜೇಶ್ ಬನ್ನೂರು ಅವರಿಗೆ ಸೇರಿದ್ದು, ಭೂ ವಿವಾದದ ಭಾಗವಾಗಿ ಅವರ ನಿವಾಸವನ್ನು ಕೆಡವಲಾಗಿತ್ತು. ಕುಸಿದು ಬಿದ್ದ ಮನೆಯೊಳಗೆ ಚಿನ್ನ ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳು ಇದ್ದವು ಎಂದು ರಾಜೇಶ್ ಬನ್ನೂರು ಈ ಹಿಂದೆ ಪೊಲೀಸರಿಗೆ ದೂರು

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ ! Read More »

ಕರಾವಳಿ

POCSO ಕೇಸ್: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು, ಯಡಿಯೂರಪ್ಪ ನಿರಾಳ

(ನ್ಯೂಸ್ ಕಡಬ) newskadaba.com , ಫೆ.07. ಧಾರವಾಡ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗ ಧಾರವಾಡ ಹೈಕೋರ್ಟ್ ಪೀಠ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ

POCSO ಕೇಸ್: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು, ಯಡಿಯೂರಪ್ಪ ನಿರಾಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಯಥಾಸ್ಥಿತಿ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರೀ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು(ಫೆ. 7) ಯಥಾಸ್ಥಿತಿ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 25 ರೂ. ಮತ್ತು 27ರೂ. ಏರಿಕೆ ಕಂಡಿತ್ತು. ಸದ್ಯ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,930 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,651 ರೂ.

ಚಿನ್ನದ ದರದಲ್ಲಿ ಯಥಾಸ್ಥಿತಿ Read More »

ಕರ್ನಾಟಕ

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com , ಫೆ.07. ಮೈಸೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 1 ಲಕ್ಷ ಜನರು ಗ್ರಾಮಗಳ ತೊರೆದಿದ್ದು, 30 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ಹೇಳಿದರು. ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್ Read More »

ಕರ್ನಾಟಕ

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com , ಫೆ.07. ಮುಂಬೈ: ಕೇಂದ್ರ ಬಜೆಟ್‌ನಲ್ಲಿ12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಬೆನ್ನಲ್ಲೇ ದೇಶದ ಜನತೆಗೆ ಶುಭ ಶುಕ್ರವಾರವೇ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ನಿರೀಕ್ಷೆಯಂತೆ ರೆಪೋದರವನ್ನು(Repo Rate) ಶೇ. 0.25 ಪ್ರತಿಶತದಷ್ಟುಇಳಿಕೆ ಮಾಡುವ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಮಹತ್ವದ ಆದೇಶ ಹೊರಡಿಸಿದೆ.   ಆಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ದುಬಾರಿ ಬಡ್ಡಿ ದರದಿಂದ ಬಸವಳಿದಿರುವ ಸಾಲಗಾರರಿಗೆ RBI ಶುಕ್ರವಾರ ತುಸು ನಿರಾಳ ಒದಗಿಸಿದೆ. ಸಾಲಗಳು ಹಾಗೂ ಠೇವಣಿಗಳ ಮೇಲಿನ

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ!

(ನ್ಯೂಸ್ ಕಡಬ) newskadaba.com , ಫೆ.07. ಮಡಿಕೇರಿ: ಮಡಿಕೇರಿ ನಗರಸಭೆಯು ಮಡಿಕೇರಿ ನಗರದಲ್ಲಿ ಎರಡು ಲೀಟರ್ ವರೆಗಿನ ಪ್ಲಾಸ್ಟಿಕ್ ವಾಟರ್ ಬಾಟಲ್ ಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.  ಈಗಾಗಲೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಸಂಗ್ರಹವಿದ್ದು ಅವುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಹೊಸ ಬಾಟಲಿಗಳ ಖರೀದಿ ಮಾಡದಂತೆ ಸೂಚಿಸಲಾಗಿದೆ.  ಪ್ಲಾಸ್ಟಿಕ್ ಬಾಟಲ್ ಬಳಕೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ. ಮಡಿಕೇರಿ ನಗರಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್

ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ! Read More »

ಬ್ರೇಕಿಂಗ್ ನ್ಯೂಸ್

ಯಾದಗಿರಿ: ಭೀಕರ ವಾಹನ ಅಪಘಾತ, ಒಂದೇ ಕುಟುಂಬದ ಐವರು ಸಾವು

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ತಿಂಥಣಿ ಬಳಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ,ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.ಮೃತಪಟ್ಟವರನ್ನು ಒಂದೇ ಕುಟುಂಬದ  ಹನುಮಂತ(1),  ಆಂಜನೇಯ(35), ಗಂಗಮ್ಮ (28),ಪವಿತ್ರ(5),ರಾಯಪ್ಪ(3) ಎಂದು ಗುರುತಿಸಲಾಗಿದೆ.

ಯಾದಗಿರಿ: ಭೀಕರ ವಾಹನ ಅಪಘಾತ, ಒಂದೇ ಕುಟುಂಬದ ಐವರು ಸಾವು Read More »

ಕರ್ನಾಟಕ
Scroll to Top