Death, deadbody, Waterfall

ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು:ಇಲ್ಲಿನ ಮಾಲ್‌ವೊಂದರ ಎರಡನೇ ಮಹಡಿಯಿಂದ ಹಾರಿ 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ನಗರದ ಉಳ್ಳಾಲ ಉಪನಗರ ನಿವಾಸಿ ಟಿಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ನಲ್ಲಿ ಈ ಘಟನೆ ನಡೆದಿದೆ. ಮೃತರ ಜೇಬಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಂಜುನಾಥ್ ಹಠಾತ್ತನೆ […]

ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ

ಚಿನ್ನದ ದರ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 33 ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,555 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,242 ರೂ. ಇದೆ. 22 ಕ್ಯಾರಟ್‌ ಚಿನ್ನದ

ಚಿನ್ನದ ದರ ಮತ್ತೆ ಏರಿಕೆ Read More »

ಕರ್ನಾಟಕ

ಚಾರ್ಮಾಡಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ

(ನ್ಯೂಸ್ ಕಡಬ) newskadaba.com ಜ.24: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್’ನ ಬಿದಿರು ತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಡ್ಗಿಚ್ಚು ಕುರಿತು ವಿವರವಾದ ವರದಿ ಸಲ್ಲಿಸುವಂತ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಗುರುವಾರ ಸೂಚನೆ ನೀಡಿದೆ. ಕಾಡ್ಗಿಚ್ಚಿನಿಂದ ಆಗಿರುವ ಹಾನಿ, ತಡೆಗಟ್ಟಲು ಕೈಗೊಂಡಿರುವ ಕ್ರಮಗಳು ಹಾಗೂ ಬೆಂಕಿ ನಂದಿಸಲು ತೆಗೆದುಕೊಂಡ ಸಮಯದ ಬಗ್ಗೆ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆಯವರು ಸೂಚನೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು, ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ

ಚಾರ್ಮಾಡಿ ಕಾಡ್ಗಿಚ್ಚು: ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೊಮೆಟೊ ದರ ದಿಢೀರ್ ಕುಸಿತ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಟೊಮೆಟೊ ದರ ಧಿಡೀರ್ ಕುಸಿತ ಕಂಡಿದೆ.ಟೊಮೆಟೊ ದರ ಮಾರುಕಟ್ಟೆಯಲ್ಲಿ ಕೆಜಿಗೆ  10 ರೂಪಾಯಿಗಿಂತ ಕಡಿಮೆಗೆ ಮಾರಾಟವಾಗುತ್ತಿದೆ. ಕಲಬುರುಗಿಯ ಮಾರುಕಟ್ಟೆಯಲ್ಲಿ ಒಂದು ಟೊಮೆಟೊ ಬಾಕ್ಸ್ 120 ರಿಂದ 150 ರೂ. ಗೆ ಮಾರಾಟವಾಗುತ್ತಿದೆ. ಟೊಮೆಟೊ ಬೆಲೆ ಕುಸಿತ ಕಂಡಿದ್ದರಿಂದ ರೈತರು ಹತ್ತಿರದ ಮುಂಬೈ, ಹೈದರಾಬಾದ್, ಪುಣೆ ಮಾರುಕಟ್ಟೆಗಳಿಗೆ ಟೊಮೆಟೊ ಮಾರಾಟ ಮಾಡುವುದು ಅನಿವಾರ್ಯವಾಗಿದೆ. ಮಾರುಕಟ್ಟೆಯಲ್ಲಿ ಕ್ವಿಂಟಲ್ ಗೆ ಕನಿಷ್ಠ 250 ರೂ. ಇದ್ದರೆ ಗರಿಷ್ಠ 750 ರೂ. ಗೆ

ಟೊಮೆಟೊ ದರ ದಿಢೀರ್ ಕುಸಿತ Read More »

ಕರ್ನಾಟಕ

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ಜ.23 ನವದೆಹಲಿ: ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಪೀಯೂಷ್ ಗೋಯೆಲ್, ‘ಈ ಯೋಜನೆ ಕಳೆದ 10 ವರ್ಷಗಳಲ್ಲಿ ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. 2021-22ರ ಅವಧಿಯಲ್ಲಿ ಸುಮಾರು 12 ಲಕ್ಷ ಆರೋಗ್ಯ ಕಾರ್ಯಕರ್ತರು ಮಿಷನ್‌ನೊಂದಿಗೆ ಜೋಡಿಸಿದ್ದು, ಇಡೀ ದೇಶ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯಿತು’ ಎಂದರು. ಕೋವಿಡ್ ಸಮಯದಲ್ಲಿ

ರಾಷ್ಟ್ರೀಯ ಆರೋಗ್ಯ ಮಿಷನ್ 5 ವರ್ಷ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ : ಟೆಂಪೋಗೆ ಸರ್ಕಾರಿ ಬಸ್‌ ಢಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.23  ಕಾರ್ಕಳ: ಕಾರ್ಕಳದ ಸನೂರಿನಲ್ಲಿ ಗುರುವಾರ ಬೆಳಿಗ್ಗೆ ನಿಂತಿದ್ದ ಟೆಂಪೋಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಚಿಕ್ಕೋಡಿ ಡಿಪೋದಿಂದ ಹೊರಟಿದ್ದ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಸನೂರಿನ ರಾಮ ಮಂದಿರದ ಬಳಿ ಈ ಘಟನೆ ನಡೆದಿದೆ. ಪರಿಣಾಮ ಬಸ್‌ನ ಮುಂಭಾಗದ ಭಾಗವು ತೀವ್ರವಾಗಿ ಹಾನಿಗೊಳಗಾಗಿದ್ದು, ಹಲವಾರು ಪ್ರಯಾಣಿಕರು ಮತ್ತು ಚಾಲಕರಿಗೆ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು

ಕಾರ್ಕಳ : ಟೆಂಪೋಗೆ ಸರ್ಕಾರಿ ಬಸ್‌ ಢಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ

ಕರ್ನಾಟಕದಲ್ಲೇ ಮೊದಲ ಬಾರಿ ಅರಣ್ಯದಲ್ಲಿ ಪಕ್ಷಿ ಗಣತಿ!

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು:  ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಬರುವ ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ರಾಜ್ಯದ ಅರಣ್ಯ ಪ್ರದೇಶದಲ್ಲಿನ ಹುಲಿ-ಆನೆಯಂತಹ ವನ್ಯ ಜೀವಿಗಳನ್ನು ಕಾಲಕಾಲಕ್ಕೆ ಗಣತಿ ಮಾಡಲಾಗುತ್ತದೆ. ಆದರೆ, ಇದೀಗ ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿ

ಕರ್ನಾಟಕದಲ್ಲೇ ಮೊದಲ ಬಾರಿ ಅರಣ್ಯದಲ್ಲಿ ಪಕ್ಷಿ ಗಣತಿ! Read More »

ಕರ್ನಾಟಕ

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು: ರಾಜ್ಯದಲ್ಲಿ ಈ ವರ್ಷದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ನಿನ್ನೆ ಬುಧವಾರ ತಡರಾತ್ರಿ ಬೆಂಗಳೂರಿನಲ್ಲಿ ವರದಿಯಾಗಿದೆ. ದುಬೈಗೆ ಪ್ರಯಾಣಿಸಿದ ಹಿನ್ನೆಲೆಯುಳ್ಳ 40 ವರ್ಷದ ವ್ಯಕ್ತಿ ಸೋಂಕಿತರಾಗಿದ್ದು, ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ದೃಢವಾಗಬೇಕಿದೆ. ಶಂಕಿತ ಪ್ರಕರಣದ ಬಗ್ಗೆ ದೃಢೀಕರಿಸಿಕೊಳ್ಳಲು ಹೆಚ್ಚಿನ ವೈದ್ಯಕೀರ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ವರದಿಯಾಗಿತ್ತು. ಕಳೆದ ತಿಂಗಳು,

ಕರ್ನಾಟಕದ ಮೊದಲ ಶಂಕಿತ ಮಂಕಿಪಾಕ್ಸ್ ಪ್ರಕರಣ ಬೆಂಗಳೂರಿನಲ್ಲಿ ವರದಿ: ಆರೋಗ್ಯ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ಪತ್ನಿಯ ಶವವನ್ನು ಕತ್ತರಿಸಿ ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡಿದ ಪತಿ

(ನ್ಯೂಸ್ ಕಡಬ) newskadaba.com ಜ.23  ಹೈದರಬಾದ್: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಪ್ರೆಶರ್ ಕುಕ್ಕರ್ನಲ್ಲಿ ಕುದಿಸಿ ಅಪರಾಧವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. 45 ವರ್ಷದ ಗುರು ಮೂರ್ತಿ ಎಂಬ ವ್ಯಕ್ತಿ, ತನ್ನ ಪತ್ನಿ ನಾಪತ್ತೆಯಾದ ನಂತರ ಪೊಲೀಸ್ ತನಿಖೆಯ ಸಮಯದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾನೆ. ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ. 35 ವರ್ಷದ ವೆಂಕಟ ಮಾಧವಿ ನಾಪತ್ತೆಯಾಗಿದ್ದಾರೆ ಎಂದು ಕುಟುಂಬವು ಜನವರಿ 16ರಂದು ವರದಿ ಮಾಡಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಅವರಿಗೆ ಗಂಡನ

ಪತ್ನಿಯ ಶವವನ್ನು ಕತ್ತರಿಸಿ ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡಿದ ಪತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ ಪ್ರಕರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ಜ.23  ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುವುದಾಗಿ ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು

ಮುಡಾ ಹಗರಣ ಪ್ರಕರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ Read More »

ಕರ್ನಾಟಕ
Scroll to Top