ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ.30: ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್‌ಲೈನ್ ಹಾಕಲಾಗಿತ್ತು. ಇದು ಕೆಲವು ಸಮಯಗಳಿಂದ ತುಂಡಾಗಿದ್ದು, ಸಂಬಂಧಪಟ್ಟವರಿಗೆ ಈ ಬಗ್ಗೆ ವಿಷಯ ತಿಳಿಸುವ ಪ್ರಯತ್ನ ನಡೆಸಲಾಗಿತ್ತು.ಆದರೂ ಈ ಬಗ್ಗೆ ನಗರಾಡಳಿತ ಎಚ್ಚೆತ್ತುಕೊಂಡಿರಲಿಲ್ಲ. ಸೋಮವಾರ ಸಂಜೆ ಪುತ್ತೂರಿಗೆ […]

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ Read More »

ಕರಾವಳಿ
Death, deadbody, Waterfall

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30: ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಹೆಜಮಾಡಿಯ ಅಮಾಸಕರಿಯ ಬಳಿ ನಡೆದಿದೆ. ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ. ಇಂದು(ಸೋಮವಾರ) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ.30: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು, ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್ ಇಲಾಖೆಗೆ ಆದೇಶ ದೊರೆತಿದೆ. ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ಅವರನ್ನು ನೇಮಿಸಲಾಗಿದೆ. ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲು ಗ್ರೀನ್ ಸಿಗ್ನಲ್

ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ ಸಲ್ಲಿಕೆಗೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ Read More »

ಕರ್ನಾಟಕ

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ!

(ನ್ಯೂಸ್ ಕಡಬ) newskadaba.com ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ನಾಲ್ವರು ಯೋಧರು ಹುತಾತ್ಮರಾಗಿದ್ದರು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವಿನ್ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೇನಾಧಿಕಾರಿಗಳ ತುರ್ತು ಕರೆ ಹಿನ್ನೆಲೆ ಯೋಧನ ತಾಯಿ ಜಯ ಅವರು ಶ್ರೀನಗರಕ್ಕೆ ತೆರಳಿದ್ದರು. ಇದೀಗ ಅವರು ಹುತಾತ್ಮರಾಗಿರುವ

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ! Read More »

ರಾಷ್ಟ್ರೀಯ ನ್ಯೂಸ್

‘ಎಎಪಿ ಗೆದ್ದರೆ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ’- ಕೇಜ್ರಿವಾಲ್

(ನ್ಯೂಸ್ ಕಡಬ) newskadaba.com ಡಿ.30: ಆಮ್ ಆದ್ಮಿ ಪಕ್ಷ ಗೆದ್ದರೆ ದೆಹಲಿಯ ದೇವಸ್ಥಾನಗಳಲ್ಲಿನ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ ನೀಡುವುದಾಗಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಹಿಂದೂ ದೇವಸ್ಥಾನ ಮತ್ತು ಗುರುದ್ವಾರಗಳಲ್ಲಿ ಪೂಜೆ ಮಾಡುವವರಿಗೆ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆ ಹೆಸರಿನಲ್ಲಿ ಸಹಾಯಧನ ನೀಡುವುದಾಗಿ ಭರವಸೆ

‘ಎಎಪಿ ಗೆದ್ದರೆ ಅರ್ಚಕರಿಗೆ ಪ್ರತಿ ತಿಂಗಳಿಗೆ 18,000 ರೂ. ಸಹಾಯಧನ’- ಕೇಜ್ರಿವಾಲ್ Read More »

ಬ್ರೇಕಿಂಗ್ ನ್ಯೂಸ್

ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿ ತನಿಖೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ- ಜಿ. ಪರಮೇಶ್ವರ

(ನ್ಯೂಸ್ ಕಡಬ) newskadaba.com ಡಿ.30: ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ

ಗುತ್ತಿಗೆದಾರ ಆತ್ಮಹತ್ಯೆ: ಸಿಐಡಿ ತನಿಖೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ- ಜಿ. ಪರಮೇಶ್ವರ Read More »

ಕರ್ನಾಟಕ

ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಡಿ.30: ಉಳ್ಳಾಲ : ಮಾದಕ ದ್ರವ್ಯ ದುಶ್ಚಟದಿಂದ ದೇಶ ಮುಕ್ತವಾಗಬೇಕು. ಇದನ್ನು ನಿರ್ಮೂಲನೆ ಮಾಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕಾದ ಜವಾಬ್ದಾರಿ ನಮ್ಮದು. ಸಮಾಜವನ್ನು ಜೋಡಿಸುವ ಕೆಲಸ ನಮ್ಮಿಂದ ಆಗಬೇಕೇ ಹೊರತು ವಿಭಜಿಸುವ ಕೆಲಸ ಆಗಬಾರದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಅವರು ನಾಟೆಕಲ್ ನಾಗರಿಕ ರಕ್ಷಣಾ ವೇದಿಕೆ ಇದರ ವಾರ್ಷಿಕೋತ್ಸವದ ಪ್ರಯುಕ್ತ ಮಾದಕದ್ರವ್ಯ ಮತ್ತು ಅಪರಾಧ ಚಟುವಟಿಕೆಗಳ ಕುರಿತು ನಾಟೆಕಲ್ ಜಂಕ್ಷನ್ ನಲ್ಲಿ ನಡೆದ ಜನ ಜಾಗೃತಿ ಸಭಾ

ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್ Read More »

ಕರ್ನಾಟಕ

ಪಂಜಾಬ್ ಬಂದ್ – ಅನೇಕ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಿದ ರೈತರು, ಅಲ್ಲಲ್ಲಿ ಟ್ರಾಫಿಕ್ ಜಾಮ್‌

(ನ್ಯೂಸ್ ಕಡಬ) newskadaba.com ಡಿ.30: ಪಂಜಾಬ್ ಬಂದ್ ಕರೆ ಅಂಗವಾಗಿ ಸೋಮವಾರ ರಾಜ್ಯಾದ್ಯಂತ ಹಲವೆಡೆ ರೈತರು ರಸ್ತೆ ತಡೆ ನಡೆಸಿದ ಕಾರಣ ಟ್ರಾಫಿಕ್ ಜಾಮ್‌ ಉಂಟಾಯಿತು. ಧರೇರಿ ಜತ್ತನ್ ಟೋಲ್ ಪ್ಲಾಜಾದಲ್ಲಿ ರೈತರು ಧರಣಿ ನಡೆಸಿದ್ದರಿಂದ ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ಬಿಂದುವಿನ ಬಳಿ ಜಮಾಯಿಸಲು ಪ್ರಾರಂಭಿಸಿದರೆ, ಬಟಿಂಡಾದ ರಾಂಪುರ ಫುಲ್‌ನಲ್ಲಿ ಅವರು ರಸ್ತೆಗಳನ್ನು ತಡೆದರು. ಸಂಪೂರ್ಣ ಬಂದ್ ಇದ್ದರೂ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗುವುದು

ಪಂಜಾಬ್ ಬಂದ್ – ಅನೇಕ ಸ್ಥಳಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಿದ ರೈತರು, ಅಲ್ಲಲ್ಲಿ ಟ್ರಾಫಿಕ್ ಜಾಮ್‌ Read More »

ರಾಷ್ಟ್ರೀಯ ನ್ಯೂಸ್

ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ – ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್

(ನ್ಯೂಸ್ ಕಡಬ) newskadaba.com ಡಿ.30: ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆಕ್ರೋಶದ ನಡುವೆಯೇ ನಟ ಕಮ್ ರಾಜಕಾರಣಿ ವಿಜಯ್ ಇಂದು ಮಧ್ಯಾಹ್ನ 1 ಗಂಟೆಗೆ ಚೆನ್ನೈನಲ್ಲಿ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 23 ರಂದು ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ತಮಿಳುನಾಡಿನಾದ್ಯಂತ ಪ್ರತಿಭಟನೆಯನ್ನು ಹುಟ್ಟುಹಾಕಿದೆ. ಘಟನೆಗೆ ಸಂಬಂಧಿಸಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)

ವಿಶ್ವವಿದ್ಯಾನಿಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ – ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಲಿರುವ ನಟ ವಿಜಯ್ Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com ಡಿ.30: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,150 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,800 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ

ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ Read More »

ಕರ್ನಾಟಕ
Scroll to Top