ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 : ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಶಾಲೆಗೆ ಹೋಗಿದ್ದು, ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈತ ಸಂತೆಕಟ್ಟೆ ಮಿಲಾಗ್ರಿಸ್ ಹೈಸ್ಕೂಲ್ನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದ. 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ. ಕನ್ನಡ ಭಾಷೆ ಬಲ್ಲವನಾಗಿದ್ದಾನೆ. […]

ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಲಾಗಿದೆ. ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು

ನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್ Read More »

ಬ್ರೇಕಿಂಗ್ ನ್ಯೂಸ್

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್ ಸಾಗರದಲ್ಲಿರುವ ದ್ವೀಪರಾಷ್ಟ್ರ ವನವಾಟುವಿನಲ್ಲಿ ಭಾರಿ ಕಂಪನ ದಾಖಲಾಗಿವೆ. ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮತ್ತು

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು! Read More »

ಬ್ರೇಕಿಂಗ್ ನ್ಯೂಸ್

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಡಿ. 23 ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಸಂಜೆ ನಡುಗಲ್ಲು ಸಮೀಪ ನಡೆದಿದೆ. ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು ರಸ್ತೆಯ ನಡುಗಲ್ಲು ಬಳಿ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಯ ಮಣ್ಣಿನ ಬರೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಕಾರಿನಲ್ಲಿದ್ದ ರವಿಪ್ರಸಾದ್, ಅವರ ಪತ್ನಿ ಮತ್ತು ಮಗುವನ್ನು ರಕ್ಷಿಸಿದ್ದಾರೆ. ರವಿಪ್ರಸಾದ್ ಅವರಿಗೆ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ 41 ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಇವರು ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ Read More »

ಕರಾವಳಿ

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿ.ಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಸಿ.ಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್ ದಾಖಲು Read More »

ಕರ್ನಾಟಕ

ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಡಿಸೆಂಬರ್ 21 ರಿಂದ ಜನವರಿ 19 ರವರೆಗೆ ನಡೆಯುವ ಒಂದು ತಿಂಗಳ ಕರಾವಳಿ ಉತ್ಸವದ ಅಂಗವಾಗಿ ಕದ್ರಿ ಪಾರ್ಕ್‌ನಲ್ಲಿ ಆಯೋಜಿಸಿರುವ ಮೊಟ್ಟ ಮೊದಲ ‘ರೋಬೋಟಿಕ್ ಬಟರ್‌ಫ್ಲೈ ಶೋ’ ಅನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭಾನುವಾರ ಉದ್ಘಾಟಿಸಿದರು. ರೋಬೋಟಿಕ್ ಚಿಟ್ಟೆಗಳು, ಇರುವೆಗಳು, ಜೀನು ನೊಣ್ಣ ಮತ್ತಿತರ ಚಿತ್ರಣವನ್ನು ಪ್ರದರ್ಶನದಲ್ಲಿ ನೋಡಬಹುದಾಗಿದೆ. ಪ್ರತಿದಿನ ಸಂಜೆ 4 ರಿಂದ ರಾತ್ರಿ 9 ರವರೆಗೂ ಈ ಪ್ರದರ್ಶನವನ್ನು

ಮಂಗಳೂರು: ಮೊಟ್ಟಮೊದಲ ‘ರೋಬೋಟಿಕ್ ಬಟರ್‌ಫ್ಲೈ’ ಶೋಗೆ ಚಾಲನೆ Read More »

ಕರಾವಳಿ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 60 ರೂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 65 ರೂ. ಏರಿಕೆ ಆಗಿತ್ತು. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ

ಇಂದಿನ ಚಿನ್ನದ ದರ Read More »

ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ

(ನ್ಯೂಸ್ ಕಡಬ) newskadaba.com ಡಿ. 23 ಕುವೈತ್‌ ಸಿಟಿ: ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಎಂಬ ಗೌರವವನ್ನು ಡಿ22 ರಂದು ಪ್ರದಾನ ಮಾಡಲಾಯಿತು. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಗೊಳಿಸಿದ ಕಾರಣಕ್ಕೆ ಮೋದಿ ಅವರಿಗೆ ಕುವೈತ್‌ ದೊರೆ ಶೇಖ್‌ ಮಿಶಲ್‌ ಅಲ್‌- ಅಹ್ಮದ್‌ ಅಲ್‌-ಜಬೆರ್‌ ಅಲ್‌-ಸಭಾ ಅವರು ಈ ಗೌರವವನ್ನು ನೀಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ಕುನಾ ವರದಿ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ರಾಜ್ಯದಲ್ಲಿ  ಇಂದಿನಿಂದ ಮೂರು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ. 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು,

ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top