ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಚಿನ್ನದ ದರದಲ್ಲಿಇಂದು ಮತ್ತೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 65 ಮತ್ತು 71 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,070ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,713 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ ಚಿನ್ನದ ದರ […]

ಇಂದಿನ ಚಿನ್ನದ ದರ Read More »

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ

(ನ್ಯೂಸ್ ಕಡಬ) newskadaba.com ಡಿ. 19. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಮತ್ತು ಪೊಲೀಸರ ತಂಡವು,  51 ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಿದೆ. ನಗರದ ಫಳ್ನೀರ್, ಅತ್ತಾವರ, ಹಂಪನಕಟ್ಟೆ, ಆರ್.ಟಿ.ಓ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದ ತಂಡವು ಹೋಟೆಲ್, ಕೆಫೆ, ಟೀ ಸ್ಟಾಲ್, ಅಂಗಡಿ ವಠಾರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಸಿಗರೇಟ್ ಸೇದುತ್ತಿದ್ದವರಿಗೆ ತಲಾ ರೂ. 200 ವರೆಗೆ ದಂಡ ವಿಧಿಸಿದೆ. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನ ಕಾಯಿದೆ(ಕೋಪ್ಟಾ)

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ Read More »

ಕರಾವಳಿ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್ ನಡೆದಿದ್ದು ಐವರು ಉಗ್ರರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡದರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ Read More »

ಕರಾವಳಿ

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ  ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ದಿ ಮತ್ತು ಅನುಷ್ಠಾನ ಯೋಜನೆ” ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ  ಹಾಗೂ ಯುವ ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 4 ಯುವ ಪರಿವರ್ತಕರು ಹಾಗೂ ಒಬ್ಬರು ಯುವ ಸಮಾಲೋಚಕರ ಅಗತ್ಯವಿದೆ. ಶೈಕ್ಷಣಿಕ ಅರ್ಹತೆ :

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಡಿ. 19. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 23ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳಾಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಮೀರಿರಬಾರದು.

ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ನೀಲ್ಕಮಲ್’ ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ ಸುಮಾರು 110 ಪ್ರವಾಸಿಗರು ಮತ್ತು ಐದು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ಪ್ರಧಾನಿ

ಮುಂಬೈ ಸ್ಪೀಡ್ಬೋಟ್ ದುರಂತ – 13 ಮಂದಿ ಸಾವು, ಪ್ರಧಾನಿಯಿಂದ ಪರಿಹಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 19. ಮಕ್ಕಳ ಸಂರಕ್ಷಣೆಗಾಗಿ ಜಾರಿಯಾದ ಕಾಯಿದೆಗಳು ಕೇವಲ ಅಧಿಕಾರಿಗಳ ತರಬೇತಿ, ಕಾರ್ಯಾಗಾರ, ಸಭೆಗಳಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ತರುವಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಸ್ವ-ಇಚ್ಚೆಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಡಾ. ತಿಪ್ಪೇಸ್ವಾಮಿ ಕೆ.ಟಿ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಡಿ. 19. ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆ ತೊಡುಗೆಗಳು  ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಿಂದ ಕರಾವಳಿಯ ನೈಜ ಸಂಸ್ಕೃತಿಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ Read More »

ಕರಾವಳಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಡಿ. 19. ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರವು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಮತ್ತು ಆಲಂಕಾರು ಗ್ರಾಮ ಪಂಚಾಯತ್‌ ನ ಸಹಕಾರದಲ್ಲಿ ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಂಗಳವಾರದಂದು ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಎಲುಬು ಮತ್ತು ಮೂಳೆ ಚಿಕಿತ್ಸಾ ವಿಭಾಗ ಹಾಗೂ ಸಾಮಾನ್ಯ ರೋಗ ವಿಭಾಗದ ತಜ್ವ ವೈದ್ಯರುಗಳು ತಪಾಸಣೆ ಮಾಡಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಡಿ. 19 ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು  ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ Read More »

ಕರಾವಳಿ
Scroll to Top