ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*

(ನ್ಯೂಸ್ ಕಡಬ) newskadaba.com ಡಿ. 19. 2024-25 ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI)  ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (IHM) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ  ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಭೇತಿ ವಿವರ : […]

ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ* Read More »

ಕರಾವಳಿ

ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮತ್ತೊಮ್ಮೆ ಅವಕಾಶ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಭಾರತದ ಕೇಂದ್ರ ಸರ್ಕಾರ ಆರಂಭಿಸಿರುವ ಉಜ್ವಲ ಯೋಜನೆಗೆ  ಮತ್ತೊಮ್ಮೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಇದನ್ನು ‘ಉಜ್ವಲ ಯೋಜನೆ 2ʼ ಎಂದು ಕರೆಯಲಾಗಿದೆ. ಅರ್ಹ ಕುಟುಂಬಗಳಿಗೆ ಉಚಿತ ದೇಶೀಯ ಅನಿಲ ಸಿಲಿಂಡರ್‌ಗಳು ಮತ್ತು ಒಲೆಗಳನ್ನು ಈ ಯೋಜನೆಯಲ್ಲಿ ನೀಡಲಾಗುತ್ತಿದೆ. ಆರ್ಥಿಕವಾಗಿ ದುರ್ಬಲ ಜನರಿಗಾಗಿ ಕೇಂದ್ರ ಸರ್ಕಾರ ವಿವಿಧ ರೀತಿಯ ಯೋಜನೆಗಳನ್ನು ಆರಂಭಿಸಿದ್ದು, ಉಜ್ವಲ ಯೋಜನೆ ಅವುಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ ನರೇಂದ್ರ ಮೋದಿ ಸರ್ಕಾರ ದೇಶದ ಮಹಿಳೆಯರಿಗೆ ಉಚಿತ

ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಪಡೆಯಲು ಮತ್ತೊಮ್ಮೆ ಅವಕಾಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಡಿ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 23 ಮತ್ತು 24ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 23ರಂದು ಸೋಮವಾರ ಬೆಳಿಗ್ಗೆ 10:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45 – ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ,  11- ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಜಮೀನಿನ ಮಾಲೀಕತ್ವವನ್ನು

ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ Read More »

ಕರಾವಳಿ

ರಬ್ಬರ್ ಬೆಳೆಗಾರರ ಸಮಾವೇಶ

(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ. ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಬೆಳೆಗಾರರ ಸಮಾವೇಶ Read More »

ಕರಾವಳಿ

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ

(ನ್ಯೂಸ್ ಕಡಬ) newskadaba.com ಡಿ. 19 ಬೆಂಗಳೂರು: ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳುವಂತೆ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದು, ಪತ್ರಕ್ಕೆ ನಗರದ ಎಲ್ಲಾ ಬಿಜೆಪಿ ಶಾಸಕರು ಸಹಿಹಾಕಿ, ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ Read More »

ಕರ್ನಾಟಕ

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 19. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಮಂಗಳೂರು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು  ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು

ಜಿಲ್ಲಾ ಪಂಚಾಯತ್ ನಲ್ಲಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 18ಜಮ್ಮು & ಕಾಶ್ಮೀರ್:  ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಯೋಧರೊಬ್ಬರು ಗುಡ್ಡ ಕುಸಿತದಿಂದ  ಡಿ. 14ರಂದು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಗುಡ್ಡ ಕುಸಿದು ಸಾವನ್ನಪ್ಪಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಡಿಸೆಂಬರ್ 17ರಂದು ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು.

ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಮೃತ್ಯು Read More »

ಕರ್ನಾಟಕ

ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು: ಸಂಬಳ ಹೆಚ್ಚಿಸಬೇಕು ಮತ್ತು 38 ತಿಂಗಳ ಬಾಕಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಡಿಸೆಂಬರ್‌ 31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಈ ಅನಿರ್ದಿಷ್ಟಾವಧಿ ಮುಷ್ಕರದಿಂದ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅನಿರ್ದಿಷ್ಟಾವಧಿ ಮುಷ್ಕರದ ಕುರಿತು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್‌ ಫೆಡರೇಷನ್ ಪರವಾಗಿ ಹೆಚ್.

ಡಿ.31ರಿಂದ ಕೆಎಸ್ಆರ್ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com ಡಿ. 18 ಬೆಂಗಳೂರು:  ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಮೈ ಕೊರೆಯುವ ಚಳಿ ಹೆಚ್ಚಾಗಿದೆ. ಇನ್ನೂ ಎರಡು ದಿನ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ (cold wave) ಸಾಧ್ಯತೆ ಇದ್ದು, ದಟ್ಟ ಮಂಜು ಆವರಿಸಲಿದೆ. ತಾಪಮಾನ ವಾಡಿಕೆಗಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಇರುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.18ರಂದು ಬುಧವಾರ ರಾಜ್ಯದಲ್ಲಿ ಒಣ ಹವಾಮಾನ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ

ಇಂದಿನ ಹವಮಾನ ವರದಿ Read More »

ಕರ್ನಾಟಕ
Scroll to Top