ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 17 ಬಂಟ್ವಾಳ: ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಎಂದು ಗುರುತಿಸಲಾಗಿದೆ.ರಾತ್ರಿ ಸುಮಾರು 11 ಗಂಟೆಯ ವೇಳೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಪಂಚಗಂಗಾ ಎಕ್ಸ್ ಪ್ರೆಸ್ ನಿಂದ ಕೆಳಗೆ ಬಿದ್ದು ಈತ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ಅವರು ರೈಲಿನ ಮೆಟ್ಟಿಲಿನ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು. ಇದೇ […]

ಬಿಳಿನೆಲೆಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು Read More »

ಕರಾವಳಿ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ

(ನ್ಯೂಸ್ ಕಡಬ) newskadaba.com ಡಿ. 17ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಗಳವಾರ ಮಂಡನೆಯಾಗಿದೆ. ಈ ಪ್ರಸ್ತಾವನೆಯು ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ʼಒಂದು ರಾಷ್ಟ್ರ, ಒಂದು ಚುನಾವಣೆʼ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿವೆ. ಈ ಬಗ್ಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆ ಮಂಡನೆ; ವಿಪಕ್ಷಗಳಿಂದ ಭಾರೀ ವಿರೋಧ Read More »

ರಾಷ್ಟ್ರೀಯ ನ್ಯೂಸ್

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ Read More »

ಕರ್ನಾಟಕ

ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 17 ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಇದೀಗ ವೈರಲ್‌ ಆಗಿದೆ. ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಜಿಗಿದು

ಶಬರಿಮಲೆ ಅಯ್ಯಪ್ಪನ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ Read More »

ಕರ್ನಾಟಕ

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,139 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,788 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 57,112

ಇಂದಿನ ಚಿನ್ನದ ದರ Read More »

ಕರ್ನಾಟಕ

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 17 ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ Read More »

ಕರ್ನಾಟಕ

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಆರೋಗ್ಯ ಇಲಾಖೆಯಲ್ಲಿ ಮಂಜೂರಾದ 69,915 ಹುದ್ದೆಗಳ ಪೈಕಿ 32,870 ಹುದ್ದೆಗಳು ಖಾಲಿ ಉಳಿದಿದ್ದು, ಹುದ್ದೆ ಭರ್ತಿಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಜಿ. ಮೂಳೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸುಮಾರು 4,000 ಗ್ರೂಪ್ ಡಿ ಸಿಬ್ಬಂದಿಯನ್ನು ಹೊರಗುತ್ತಿಗೆ ಮೂಲಕ ನೇಮಿಸಿಕೊಳ್ಳಲಾಗಿದೆ, ಆದರೆ ಸುಮಾರು

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು:  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಉಸಿರಾಟದ ತೊಂದರೆ, ಕೆಟ್ಟ ಸಮಸ್ಯೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನಲ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಇನ್ಮುಂದೆ ವಸತಿ ಶಾಲಾ- ಕಾಲೇಜುಗಳಿಗೂ ಉಚಿತ ವಿದ್ಯುತ್!

(ನ್ಯೂಸ್ ಕಡಬ) newskadaba.com ಡಿ. 17 ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಪೂರೈಸಲು ಅಂದಾಜು ವೆಚ್ಚ ನಿಗದಿಪಡಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸಂಘದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ 503 ವಸತಿ ಶಾಲೆ ಗಳು, ಪರಿಶಿಷ್ಟ ಪಂಗಡದ 144, ಹಿಂದುಳಿದ ವರ್ಗದ 174 ಸೇರಿ ಒಟ್ಟಾರೆ 821 ವಸತಿ ಶಾಲಾ, ಕಾಲೇಜುಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ವಾರ್ಷಿಕ ಅಂದಾಜು 36 ಕೋಟಿ

ಇನ್ಮುಂದೆ ವಸತಿ ಶಾಲಾ- ಕಾಲೇಜುಗಳಿಗೂ ಉಚಿತ ವಿದ್ಯುತ್! Read More »

ಕರ್ನಾಟಕ

ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ

(ನ್ಯೂಸ್ ಕಡಬ) newskadaba.com ಡಿ. 16: ಸ್ಥಗಿತಗೊಂಡ ಕೊಳವೆಬಾವಿಯನ್ನು  ಮುಚ್ಚದಿದ್ದರೆ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024 ವಿಧೇಯಕವನ್ನು ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಹೊಸ

ನಿರುಪಯುಕ್ತ ಕೊಳವೆಬಾವಿ ಮುಚ್ಚದಿದ್ದರೆ 10 ಸಾವಿರ ದಂಡದೊಂದಿಗೆ 1 ವರ್ಷ ಜೈಲು ಶಿಕ್ಷೆ; ಬೆಳಗಾವಿ ಅಧಿವೇಶನದಲ್ಲಿ ವಿಧೇಯಯಕ ಅಂಗಿಕಾರ Read More »

ಕರ್ನಾಟಕ
Scroll to Top