ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ

(ನ್ಯೂಸ್ ಕಡಬ) newskadaba.com ಡಿ. 16: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ರವರ ಅರ್ಜಿ ವಿಚಾರಣೆಯನ್ನು ಜನವರಿ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ಈ ವೇಳೆ ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು. ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ […]

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಜ.22ಕ್ಕೆ ವಿಚಾರಣೆ ಮುಂದೂಡಿಕೆ- ಸುಪ್ರೀಂ ಆದೇಶ Read More »

ಕರ್ನಾಟಕ

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಡಿ. 16 ಮಂಗಳೂರು: ಮಂಗಳೂರಿನ ಸಿಟಿ ಸೆಂಟರ್  ಮಾಲ್ ಬಳಿ  ಚಲಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗಾಹುತಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯರು ಅಗ್ನಿಶಾಮಕಕ್ಕೆ ಕರೆ ಮಾಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮುಂದಿನ ಮೂರು ದಿನಗಳಲ್ಲಿ ಚರ್ಚಿಸಲು ನಿರ್ಧರಿಸಿದ್ದೇವೆ. ವಿರೋಧ ಪಕ್ಷಗಳು ಯಾವ ವಿಷಯಗಳನ್ನು ಎತ್ತಬಹುದೆಂದು ನಾವು ಊಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಸಮಸ್ಯೆಗೆ ಸಂಬಂಧಿಸಿದಂತೆ, “ನಾವು ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಮತ್ತು ಚರ್ಚೆ ಪೂರ್ಣಗೊಂಡಿಲ್ಲ. ಅವರು ಈ ವಿಷಯವನ್ನು ಪ್ರಸ್ತಾಪಿಸುತ್ತಾರೋ ಅಥವಾ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಗಮನ

ಮುಂದಿನ 3 ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ; ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..!

(ನ್ಯೂಸ್ ಕಡಬ) newskadaba.com ಡಿ. 16 ಶಿವಮೊಗ್ಗ: ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ  ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು

ಎರಡೂವರೆ ತಿಂಗಳುಗಳ ಕಾಲ ಜೋಗ್ ಫಾಲ್ಸ್ ಪ್ರವೇಶ ಬಂದ್..! Read More »

ಕರ್ನಾಟಕ

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ

(ನ್ಯೂಸ್ ಕಡಬ) newskadaba.com ಡಿ. 16 ಬೆಳಗಾವಿ:  ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ, ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ನೀವೇ ಆದೇಶ ಮಾಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ

ನನ್ನ ಮೇಲಿನ ಮುಡಾ ಹಗರಣ, ವಕ್ಫ್ ಅವ್ಯವಹಾರ, 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ವಹಿಸಿ-ಬಿ.ವೈ.ವಿ Read More »

ಕರ್ನಾಟಕ

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ  ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ Read More »

ಕರ್ನಾಟಕ

ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ನಟ ದರ್ಶನ್ ಜಾಮೀನು ಸಿಗುತ್ತಿದ್ದಂತೆ ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂಬುವುದಾಗಿ ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ

ಜಾಮೀನು ಸಿಗುತ್ತಿದ್ದಂತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂರನೇ ಟೆಸ್ಟ್; ಸೋಲಿನ ಭೀತಿಯಲ್ಲಿ ಭಾರತ

(ನ್ಯೂಸ್ ಕಡಬ) newskadaba.com ಡಿ. 16 ಬ್ರಿಸ್ಬೇನ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  3ನೇ ಟೆಸ್ಟ್‌ ಪಂದ್ಯದ ಮೂರನೇ ದಿನದಾಟವೂ ಹಲವು ಬಾರಿ ಮಳೆಯಿಂದ ಅಡಚಣೆಯಾಗಿ ಅರ್ಧಕ್ಕೆ ದಿನದಾಟವನ್ನು ರದ್ದುಗೊಳಿಸಲಾಯಿತು. ಸದ್ಯ ಭಾರತ 51 ರನ್‌ಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ 394 ಬಾರಿಸಬೇಕಿದೆ. ರೋಹಿತ್‌(0) ಮತ್ತು ರಾಹುಲ್‌(33) ಕ್ರೀಸ್‌ನಲ್ಲಿದ್ದಾರೆ. 7 ವಿಕೆಟ್‌ಗೆ 405 ರನ್‌ ಗಳಿಸಿದ್ದಲ್ಲಿಂದ ಸೋಮವಾರ ಆಟ ಮುಂದುವರಿಸಿದ ಆಸ್ಟ್ರೇಲಿಯಾ 445 ರನ್‌ಗೆ ಆಲೌಟ್‌ ಆಯಿತು. 45 ರನ್‌ ಬಾರಿಸಿದ್ದ ಅಲೆಕ್ಸ್‌ ಕ್ಯಾರಿ

ಮೂರನೇ ಟೆಸ್ಟ್; ಸೋಲಿನ ಭೀತಿಯಲ್ಲಿ ಭಾರತ Read More »

ಕ್ರೀಡಾ ನ್ಯೂಸ್
Death, deadbody, Waterfall

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಡಿ. 16 ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ ಪತ್ನಿ ಉಷಾ ಮೃತಪಟ್ಟವರು. ಉಷಾ ಅವರ ತಂಗಿಯ ಪತಿ ನಿಧನರಾಗಿದ್ದು, ಇಂದು ಅವರ ಪಿಂಡ ಪ್ರದಾನ ವಿಧಿಗಾಗಿ ಕುಟುಂಬಸ್ಥರು ಸೋಮೇಶ್ವರಕ್ಕೆ ಬಂದಿದ್ದರು. ಇವರ ಜೊತೆಗೆ ಉಷಾ ಕೂಡಾ ಬಂದಿದ್ದರು. ಪಿಂಡ ಪ್ರದಾನದ ಬಳಿಕ ಸಮುದ್ರದಲ್ಲಿ ಸ್ನಾನ ಪ್ರಕ್ರಿಯೆ

ಉಳ್ಳಾಲ: ಪಿಂಡ ಪ್ರದಾನಕ್ಕೆಂದು ಬಂದಿದ್ದ ಮಹಿಳೆ ಸಮುದ್ರಪಾಲು Read More »

ಕರಾವಳಿ

ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕೋರ್ಟ್ ಡಿ.26ರವರೆಗೆ ನ್ಯಾಯಾಂಗ

ಸೊಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್ಗೆ 10ದಿನ ನ್ಯಾಯಾಂಗ ಬಂಧನ Read More »

ಕರ್ನಾಟಕ
Scroll to Top