ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು: ಚಿನ್ನದ ದರದಲ್ಲಿ  ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದ್ದು, ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ಇದೆ. ಇಂದಿನ 22 ಕ್ಯಾರಟ್‌ ಚಿನ್ನದರ 22 ಕ್ಯಾರಟ್‌ನ 8 ಗ್ರಾಂ […]

ಇಂದಿನ ಚಿನ್ನದ ದರ Read More »

ಕರ್ನಾಟಕ

ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ

(ನ್ಯೂಸ್ ಕಡಬ) newskadaba.com ಡಿ. 16 ದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಸೋಮವಾರ ತಿಳಿಸಿದೆ. ಅವರಿಗೆ 73 ವರ್ಷ. ಜಾಕಿರ್ ಹುಸೇನ್ ಅವರು ಇಡಿಯೋಪಥಿಕ್ ಪಲ್ಮನರಿ ಫೈಬ್ರೋಸಿಸ್‌ನಿಂದ ಉಂಟಾಗುವ ತೊಂದರೆಗಳಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ. ಕಳೆದ ಎರಡು ವಾರಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಾಕಿರ್ ಹುಸೇನ್​ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು

ಪ್ರಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ Read More »

ಬ್ರೇಕಿಂಗ್ ನ್ಯೂಸ್

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಡಿ. 16 ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯ ಬೇಕಾಬಿಟ್ಟಿ ಕಾಮಗಾರಿಯಿಂದಾಗಿ ರಸ್ತೆಯ ಮೇಲೆ ಹಾಕಿದ್ದ ಜಲ್ಲಿಕಲ್ಲಿನ ರಾಶಿಗೆ ಕಾರು ಡಿಕ್ಕಿ ಹೊಡೆದು, ಪಲ್ಟಿಯಾದ ಪರಿಣಾಮ ಪ್ರಯಾಣಿಕರೊಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಕಾರ್ಕಳದ ಸಾಣೂರು ಎಂಬಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೂಡಬಿದ್ರೆ ಮೂಲದ ತೇಜಸ್ ಹಾಗೂ ಪ್ರಸಾದ್ ಅಪಘಾತದ ಗಾಯಾಳುಗಳು. ಇಬ್ಬರು ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಬ್ರಹ್ಮಾವರದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಮುಗಿಸಿಕೊಂಡು ವಾಪಸ್ ಬರುವಾಗ ಕಾರ್ಕಳ ಸಮೀಪ ಸಾಣೂರು

ಕಾರ್ಕಳದಲ್ಲಿ ರಸ್ತೆ ಮೇಲಿನ ಜಲ್ಲಿಕಲ್ಲಿನ ರಾಶಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್

(ನ್ಯೂಸ್ ಕಡಬ) newskadaba.com ಡಿ. 16 ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ “ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು” ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಇವರು ಶಾಸಕ ಸ್ಥಾನಕ್ಕೆ ನಾಲಾಯಕ್,  ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ ಎಂದು ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ

‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್ Read More »

ಕರಾವಳಿ

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

(ನ್ಯೂಸ್ ಕಡಬ) newskadaba.com ಡಿ. 16: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ವಿಜಯ್ ದಿವಸ್ ಸ್ಮರಣಾರ್ಥ ರಾಷ್ಟ್ರದ ನೇತೃತ್ವ ವಹಿಸಿ, 1971 ರ ಯುದ್ಧದ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಅಧ್ಯಕ್ಷ ಮುರ್ಮು, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿನ ತನ್ನ ಪೋಸ್ಟ್‌ನಲ್ಲಿ, ಬ್ರೇವ್‌ಹಾರ್ಟ್‌ಗಳಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ: “ವಿಜಯ್ ದಿವಸ್‌ನಲ್ಲಿ, 1971 ರ ಯುದ್ಧದ ಸಮಯದಲ್ಲಿ ಅದಮ್ಯ ಧೈರ್ಯವನ್ನು ಪ್ರದರ್ಶಿಸಿ, ಭಾರತಕ್ಕೆ ವಿಜಯವನ್ನು ತಂದುಕೊಟ್ಟ ನಮ್ಮ

ವಿಜಯ್ ದಿವಸ್ : ಸೈನಿಕರ ನಿಸ್ವಾರ್ಥ ಸಮರ್ಪಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ Read More »

ರಾಷ್ಟ್ರೀಯ ನ್ಯೂಸ್

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ

(ನ್ಯೂಸ್ ಕಡಬ) newskadaba.com ಡಿ. 14: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂ ಕ್ 2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ 1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್ಬಿಐನ ಈಹೊಸ ನಿರ್ದೇ ಶನದ ಮೂಲಕ, ರಾಷ್ಟ್ರ ವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ 2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್‌ಗಳಿಗೆ

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮೊತ್ತವನ್ನು 2ಲಕ್ಷಕ್ಕೆ ಹೆಚ್ಚಿಸಿದ ಆರ್ಬಿಐ Read More »

ರಾಷ್ಟ್ರೀಯ ನ್ಯೂಸ್

‘ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ’- ನಟ ಅಲ್ಲು ಅರ್ಜುನ್

(ನ್ಯೂಸ್ ಕಡಬ) newskadaba.com ಡಿ. 14: ‘ಪುಷ್ಪ 2’ ಪ್ರೀಮಿಯರ್‌ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿ ನಟ ಅಲ್ಲು ಅರ್ಜುನ್‌ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದಿದ್ದಾರೆ. ಬಳಿಕ  ಪ್ರತಿಕ್ರಿಯಿಸಿದ ಅಲ್ಲು ಅರ್ಜುನ್‌, ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಚಿಂತಿಸುವುದು ಏನೂ ಇಲ್ಲ. ನಾನು ಮತ್ತೊಮ್ಮೆ ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಇದು ದುರದೃಷ್ಟಕರ ಘಟನೆಯಾಗಿದೆ ಎಂದರು ಹೇಳಿದರು. ಈ ರೀತಿ ಘಟನೆ ನಡೆದಿದ್ದಕ್ಕಾಗಿ

‘ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದು, ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇನೆ’- ನಟ ಅಲ್ಲು ಅರ್ಜುನ್ Read More »

ಸಿನಿಮಾ

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು: ಬೆಂಗಳೂರಿನ ಮಳೆ-ಸಂಬಂಧಿತ ಸವಾಲುಗಳಿಗೆ ಶಾಶ್ವತ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಮಗ್ರ ವಿಪತ್ತು ಪರಿಹಾರ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಇದು ಮೂಲಸೌಕರ್ಯಗಳನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಉತ್ತಮಗೊಳಿಸಲು 5,000 ಕೋಟಿ ರೂಪಾಯಿಗಳ ಹೂಡಿಕೆ ಒಳಗೊಂಡಿದೆ. ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಇದೇ ರೀತಿಯ ಸಮಸ್ಯೆಗಳನ್ನು ಪರಿಹರಿಸಲು 425 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಶುಕ್ರವಾರ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮುಂಗಾರು ಮತ್ತು ಖಾರಿಫ್

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗಟ್ಟಲು 5,000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣಬೈರೇಗೌಡ Read More »

ಕರ್ನಾಟಕ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್

(ನ್ಯೂಸ್ ಕಡಬ) newskadaba.com ಡಿ. 14 ಸುಳ್ಯ: ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಆಧುನಿಕ ಸುಳ್ಯದ ಭವ್ಯ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ, ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆಯು ಡಿ.25 ಮತ್ತು 26 ರಂದು ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎನ್.ಎ. ಜ್ಞಾನೇಶ್ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ವಠಾರದಲ್ಲಿ ನಡೆಯುವ

‘ಡಿ.25, 26 ಕ್ಕೆ ಕೆ.ವಿ.ಜಿ. ಸುಳ್ಯ ಹಬ್ಬ ಆಚರಣೆ’ – ಡಾ.ಎನ್.ಎ. ಜ್ಞಾನೇಶ್ Read More »

ಕರಾವಳಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಡಿ. 14: ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ  ವೇತನದಲ್ಲಿ ಅರ್ಧಕ್ಕಿಂತಲೂ ಅಧಿಕಪಟ್ಟು ಕಡಿತ ಮಾಡುತ್ತಿರುವ  ಗುತ್ತಿಗೆ ಸಂಸ್ಥೆಯ  ಕ್ರಮವನ್ನು ವಿರೋಧಿಸಿ  ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ ಶುಕ್ರವಾರ ರಾತ್ರಿಯಿಂದ ಕೆಲಸ ಸ್ಥಗಿತಗೊಳಿಸಿದ್ದಾರೆ. ಇದರಿಂದ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ. ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಗಳಲ್ಲಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ Read More »

ಕರಾವಳಿ
Scroll to Top