ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 04. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರ ಹೆಸರನ್ನು ಅನುಮೋದಿಸಲಾಗಿತ್ತು. ಇದೀಗ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ. ಈ ಮೂಲಕ ಅವರು ಸಂಪೂರ್ಣ ಸ್ಥಾನಮಾನ ಮತ್ತು ಪ್ರಭಾವದೊಂದಿಗೆ ಮಹಾರಾಷ್ಟ್ರ ರಾಜಕೀಯಕ್ಕೆ ಮರಳಿದ್ದಾರೆ.   

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆ Read More »

ಕರ್ನಾಟಕ

ಬಾಲಿವುಡ್ ಸಿನೆಮಾದಲ್ಲಿ ಛತ್ರಪತಿ ಶಿವಾಜಿ ಲುಕ್ ನಲ್ಲಿ ರಿಷಬ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರದಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಹೀಗಾಗಿ ಹಲವು ಭಾಷೆಗಳಿಂದ ಸಿನಿಮಾ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಇದೀಗ ಛತ್ರಪತಿ ಶಿವಾಜಿ ಕತೆಯುಳ್ಳ ಬಾಲಿವುಡ್ ಸಿನಿಮಾದಲ್ಲಿ ನಟಿಸಲು ರಿಷಬ್ ಶೆಟ್ಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಛತ್ರಪತಿ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿಯ ಸೂಪರ್ ಹಿಟ್ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾಗೆ ಆ್ಯಕ್ಷನ್ ಕಟ್

ಬಾಲಿವುಡ್ ಸಿನೆಮಾದಲ್ಲಿ ಛತ್ರಪತಿ ಶಿವಾಜಿ ಲುಕ್ ನಲ್ಲಿ ರಿಷಬ್ ಶೆಟ್ಟಿ Read More »

ಸಿನಿಮಾ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ

(ನ್ಯೂಸ್ ಕಡಬ) newskadaba.com ಡಿ. 04 ಕಾಸರಗೋಡು: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸುರಿದ ಭಾರೀ ಕಾಸರಗೋಡು ಅಡ್ಕತಬೈಲ್ ನಲ್ಲಿ ಮನೆಯೊಂದರ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಅಡ್ಕತಬೈಲ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಹೆಂಚಿನ ಮನೆಯ ಛಾವಣಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಏಕಾಏಕಿ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ಕಿಶೋರ್ ಕುಮಾರ್ ಮತ್ತು ಅವರ ಪತ್ನಿ ಶಶಿಕಲಾ ಹೊರಗಡೆ ಓಡಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಛಾವಣಿ ಕುಸಿತದಿಂದ ಮನೆ ಹಾನಿಯಾಗಿದ್ದು, ಭಾರೀ ನಷ್ಟ

ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ Read More »

ಕರಾವಳಿ

ದ. ಕ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಿಸಿ ಮುಲ್ಲೈ ಮುಹಿಲನ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಡಿಸಿ) ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಕೆಲವೆಡೆ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದ್ದು, ಅಧಿಕಾರಿಗಳು ಕ್ಷಿಪ್ರವಾಗಿ ಕ್ರಮಕೈಗೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಪರಿಹಾರ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿರುವುದರಿಂದ ಪ್ರವಾಸಿಗರು ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ಇಳಿಯದಂತೆ ಸೂಚಿಸಲಾಗಿದೆ.  

ದ. ಕ ಜಿಲ್ಲೆಯಲ್ಲಿ ಮಳೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಡಿಸಿ ಮುಲ್ಲೈ ಮುಹಿಲನ್ ಸೂಚನೆ Read More »

ಕರಾವಳಿ

ರಸ್ತೆ ಅಪಘಾತ: ಸವಾರನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 04. ಟಿಪ್ಪರ್ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕಾಲು ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆರ್.ಟಿ.ಒ. ಸರ್ಕಲ್ ನಲ್ಲಿ ಈ ಅಪಘಾತ ಸಂಭವಿಸಿದೆ. ಕೇರಳದ ಮಲ್ಲಪುರಂ ನಿವಾಸಿ ಜಾಸ್ಮೀನ್ (35) ಕಾಲು ಕಳೆದುಕೊಂಡಿರುವ ಯುವಕ. ಟಿಪ್ಪರ್ ಬೈಕ್ ಗೆ ಗುದ್ದಿ 20 ಮೀಟರ್ ದೂರು ಎಳೆದೊಯ್ದಿದೆ. ಇದರಿಂದ ಬೈಕ್ ಸವಾರ ಜಾಸ್ಮೀನ್ ಗೆ

ರಸ್ತೆ ಅಪಘಾತ: ಸವಾರನಿಗೆ ಗಂಭೀರ ಗಾಯ Read More »

ಕರ್ನಾಟಕ

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ದೇಶದಲ್ಲಿಯೇ ಮೊದಲ ಆರೋಗ್ಯ ನಗರವನ್ನಾಗಿ ಬೆಂಗಳೂರನ್ನು ಪರಿವರ್ತಿಸುವ ಆರೋಗ್ಯ ಸಿಟಿ ದೃಷ್ಠಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು. ನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆರೋಗ್ಯ ವಲ್ಡ್, ರೋಟರಿ ಮತತು ಬಿ-ಪ್ಯಾಕ್ ಸಹಯೋಗದಲ್ಲಿ ನಡೆದ ಆರೋಗ್ಯ ಸಿಟಿ ಸಮ್ಮಿಟ್-2024 ಉದ್ಘಾಟಿಸಿ ಸಚಿವರು ಮಾತನಾಡಿದರು. ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಆದರೆ, ಇಂದು ಒಬೆಸಿಟಿ, ಡಯಾಬಿಟಿಸ್, ಬಿಪಿ, ಒತ್ತಡ ಹೀಗೆ

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್ Read More »

ಕರ್ನಾಟಕ

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04. ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿಗಿದೆ.  

ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ: ಕೊಲೆ ಶಂಕೆ Read More »

ಕ್ರೈಮ್ ನ್ಯೂಸ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ”

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ದೇಶದ ವಿವಿಧ ಭಾಷೆಗಳ ಬಗ್ಗೆ ಅರಿವು ಹಾಗೂ ಮೆಚ್ಚುಗೆ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ʼಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, ಮಹಾಕವಿ ಸುಬ್ರಮಣ್ಯ ಭಾರತೀ ಅವರ ಜನ್ಮದಿನಾಚರಣೆಯ ಅಂಗವಾಗಿ ಡಿಸೆಂಬರ್‌ 4ರಿಂದ 11ರವರೆಗೆ ಆಚರಿಸಲಾಗುತ್ತದೆ. ಶಾಲಾ ಹಂತದಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ‘ಭಾಷೆಗಳ ಮೂಲಕ ಏಕತೆ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ “ಭಾರತೀಯ ಭಾಷಾ ಉತ್ಸವ” Read More »

ಕರ್ನಾಟಕ

ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್- ಫೈನಲ್‌ ರೇಸ್‌ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್

(ನ್ಯೂಸ್ ಕಡಬ) newskadaba.com ಡಿ. 04. ನ್ಯೂಜಿಲ್ಯಾಂಡ್‌ ಕ್ರಿಕೆಟ್ ತಂಡದ ವಿಶ್ಟ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಹಾದಿ ಈಗ ಕಡು ಕಠಿಣವಾಗಿದೆ. ಇದಕ್ಕೆ ಕಾರಣ ದಂಡ ಶಿಕ್ಷೆಗೆ ಒಳಗಾಗಿ ಡಬ್ಲ್ಯುಟಿಸಿಯಲ್ಲಿ 3 ಅಂಕ ಕಳೆದುಕೊಂಡಿರುವುದು. ಕಿವೀಸ್‌ನ ಈ ಮೂರು ಅಂಕದ ಕಡಿತದಿಂದ ಭಾರತ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡದ ಫೈನಲ್‌ ರೇಸ್‌ನ ಹಾದಿ ಮತ್ತಷ್ಟು ಸುಗಮಗೊಂಡಿದೆ. ಅತ್ತ ನ್ಯೂಜಿಲ್ಯಾಂಡ್‌ ಫೈನಲ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಕ್ರೈಸ್ಟ್‌ಚರ್ಚ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನಿಗದಿಯ

ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್- ಫೈನಲ್‌ ರೇಸ್‌ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್ Read More »

ಕ್ರೀಡಾ ನ್ಯೂಸ್
Scroll to Top