ಬೆಳ್ತಂಗಡಿ: ನೇತ್ರಾವದಿ ನದಿಯಲ್ಲಿ ಮುಳುಗಿ ಆರ್ಎಸ್ಎಸ್ ಕಾರ್ಯಕರ್ತ ಸಾವು

(ನ್ಯೂಸ್ ಕಡಬ) newskadaba.com ಡಿ. 04 ಬೆಳ್ತಂಗಡಿ: ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು.

ಬೆಳ್ತಂಗಡಿ: ನೇತ್ರಾವದಿ ನದಿಯಲ್ಲಿ ಮುಳುಗಿ ಆರ್ಎಸ್ಎಸ್ ಕಾರ್ಯಕರ್ತ ಸಾವು Read More »

ಕರಾವಳಿ

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದೆ.​ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ

ಭ್ರಷ್ಟಾಚಾರ ಪ್ರಕರಣ: ಬಿಎಸ್‌ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ Read More »

ಕರ್ನಾಟಕ

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 04. ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಈ ವಾರವೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಒಳನಾಡಿನ ಜಿಲ್ಲೆಗಳಿಗೂ ಸಾಧಾರಣ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ

ಫೆಂಗಲ್ ಚಂಡಮಾರುತ- ರಾಜ್ಯದಲ್ಲಿ ಈ ವಾರವೂ ಮುಂದುವರಿಯಲಿದೆ ಮಳೆ Read More »

ಕರ್ನಾಟಕ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆಂಗಲ್ ಚಂಡಮಾರುತ ತಮಿಳುನಾಡು, ರಾಜ್ಯದ ದಕ್ಷಿಣ ಒಳನಾಡಿನ ಮೂಲಕ ಇದೀಗ ಅರಬ್ಬಿ ಸಮುದ್ರ ಸೇರಿಕೊಂಡಿದೆ. ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆಯಾಗಿದೆ.  ಒಟ್ಟಾರೆ ರಾಜ್ಯದಲ್ಲಿ ಡಿ.9ರ ವರೆಗೆ

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ Read More »

ಕರ್ನಾಟಕ

ಗೋಲ್ಡನ್ ಟೆಂಪಲ್ ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಡಿ. 04 ಅಮೃತಸರ: ಇಂದು ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ ಮೇಲೆ ಹಲ್ಲೆ ನಡೆದಿದೆ. ದಾಳಿಕೋರನನ್ನು ಬಂಧಿಸಲಾಗಿದ್ದು, ಆಘಾತಕಾರಿ ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾಜಿ ಎಸ್‌ಎಡಿ ಸಂಸದ ನರೇಶ್ ಗುಜ್ರಾಲ್, ಈ ದಾಳಿಯು ಪಂಜಾಬ್‌ನಲ್ಲಿ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಮತ್ತು ಕಾನೂನು

ಗೋಲ್ಡನ್ ಟೆಂಪಲ್ ನಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಮೇಲೆ ಗುಂಡಿನ ದಾಳಿ Read More »

ರಾಷ್ಟ್ರೀಯ ನ್ಯೂಸ್

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04. ನೇತ್ರಾವದಿ ನದಿಯಲ್ಲಿ ಈಜಾಡಲು ತೆರಳಿ ನೀರುಪಾಲಾಗಿದ್ದ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಅವರ ಮೃತದೇಹ ಪತ್ತೆಯಾಗಿದೆ. ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದರು. ಸೋಮವಾರ ನೇತ್ರಾವತಿ ಈಜಾಡಲು ಸಂಜೆ ನದಿಯಲ್ಲಿ ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್ ನೀರಿನ ಸೆಳೆತಕ್ಕೆಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ಎಂಬಲ್ಲಿಯ ಓಡಿ ಎಂಬವರ

ನೇತ್ರಾವದಿ ನದಿಯಲ್ಲಿ ಮುಳುಗಿ ಆರ್‌ಎಸ್‌ಎಸ್‌ ಕಾರ್ಯಕರ್ತ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ – ಮಾಲಿನ್ಯ ನಿಯಂತ್ರಣ ಮಂಡಳಿ

(ನ್ಯೂಸ್ ಕಡಬ) newskadaba.com ಡಿ. 04 ಹರಿದ್ವಾರ: ಗಂಗಾ ನದಿ ನೀರು ‘ಬಿ’ ಕೆಟಗರಿಯಲ್ಲಿದ್ದು, ಕುಡಿಯಲು ಅಸುರಕ್ಷಿತ ಆದರೆ ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ತಿಳಿಸಿದೆ. ಉತ್ತರಾಖಂಡದ ಮಾಲಿನ್ಯ ನಿಯಂತ್ರಣ ಮಂಡಳಿಯು ಉತ್ತರ ಪ್ರದೇಶದ ಗಡಿಯುದ್ದಕ್ಕೂ ಹರಿದ್ವಾರದ ಸುಮಾರು ಎಂಟು ಸ್ಥಳಗಳಲ್ಲಿ ಪ್ರತಿ ತಿಂಗಳು ಗಂಗಾನದಿಯ ನೀರನ್ನು ಪರೀಕ್ಷಿಸುತ್ತದೆ. ಇತ್ತೀಚಿನ ಪರೀಕ್ಷೆಯಲ್ಲಿ ನವೆಂಬರ್ ತಿಂಗಳ ಗಂಗಾ ನದಿಯ ನೀರು ‘ಬಿ’ ಕೆಟಗರಿ ಎಂದು ಕಂಡುಬಂದಿದೆ. ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ

ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ – ಮಾಲಿನ್ಯ ನಿಯಂತ್ರಣ ಮಂಡಳಿ Read More »

ರಾಷ್ಟ್ರೀಯ ನ್ಯೂಸ್

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಆಟೋ ಚಾಲಕನನ್ನು ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌( 28) ಎಂದು ಗುರುತಿಸಲಾಗಿದೆ. ನವಂಬರ್‌ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 03 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.  ದಾಚಿಗಂ ಅರಣ್ಯ ಪ್ರದೇಶಕ್ಕೂ ಮುನ್ನ ಶ್ರೀನಗರದ ಹರ್ವಾನ್ ಅರಣ್ಯಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ನಂತರ ಉಗ್ರರ ಅಡಗುತಾಣ

ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ

(ನ್ಯೂಸ್ ಕಡಬ) newskadaba.com ಡಿ. 03 ದ.ಕ/ಉಡುಪಿ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಮಂಗಳೂರಿನ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಕೊಟ್ಟಾರ ಚೌಕಿ, ಪಿವಿಎಸ್, ಪಂಪ್‌ವೆಲ್, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಐಎಂಡಿ ಮಂಗಳವಾರ ಬೆಳಗಿನ ಜಾವದವರೆಗೆ ಆರೆಂಜ್ ಅಲರ್ಟ್ ನೀಡಿದ್ದು, ಹಳದಿ ಅಲರ್ಟ್ ನೀಡಲಾಗಿದೆ. ಮೋಡ ಕವಿದ ವಾತಾವರಣದ ಕಾರಣ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ Read More »

ಕರಾವಳಿ
Scroll to Top