ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾಷ್ಟೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಉತ್ತರಪ್ರದೇಶ ನೋಂದಾಯಿತ  ಐ-20 ಕಾರೊಂದರಲ್ಲಿ ಐವರು ಯುವಕರು ಮಂಗಳೂರಿನಿಂದ ಕೇರಳ ಕಡೆಗೆ   ತೆರಳುತ್ತಿದ್ದರು. ತಲಪಾಡಿ  ಟೋಲ್ ಗೇಟಿನಲ್ಲಿ ಟೋಲ್ ಪಾವತಿಸದೆ ಕಾರು ಮುಂದೆ ಚಲಿಸಿದ್ದು, ಈ ವೇಳೆ ಟೋಲ್ ನಿರ್ವಹಣೆ ನಡೆಸುವ ಇಜಿಎಸ್ ಸಂಸ್ಥೆ ಉದ್ಯೋಗಿ […]

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರಿಂದ ಹಲ್ಲೆ Read More »

ಕರಾವಳಿ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 02.ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿಸೆಂಬರ್ 2ರ ಸಂಜೆ ಸಂಭವಿಸಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ ಕಾಣೆಯಾದ ವ್ಯಕ್ತಿ. ಇವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು, ನಂತರ ಮುಳುಗಿ ಕಾಣೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿತ್ತು. ಪ್ರಸಾದ್

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ನಾಪತ್ತೆ Read More »

ಕರಾವಳಿ

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಶಬರಿಮಲೆಗೆ ಐರಾವತ, ವೋಲ್ವೋ ಬಸ್ ಸೇವೆ ಶುರು

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು : ಈಗಾಗಲೇ ಶಬರಿಮಲೆಯಲ್ಲಿ ಅಯ್ಯಪ್ಪನ  ದರ್ಶನ ಪ್ರಾರಂಭವಾಗಿದ್ದು, ಭಕ್ತರು ಸಾಗರೋಪಾದಿಯಲ್ಲಿ ಜಮಾಯಿಸುತ್ತಿದ್ದಾರೆ. ಡಿಸೆಂಬರ್‌ನಿಂದ ಜನವರಿವರೆಗೆ ಕರ್ನಾಟಕದಿಂದ ಶಬರಿಮಲೆಗೆ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಬೆಳೆಸುತ್ತಾರೆ. ಈ ಬಾರಿ ಭಕ್ತರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗುಡ್‌ ನ್ಯೂಸ್‌ ನೀಡಿದ್ದು, ಇನ್ನು ಮುಂದೆ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಸುಗಮವಾಗಲಿದೆ. ಭಕ್ತರಿಗೆ ಅನುಕೂಲಕರವಾಗುವಂತೆ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ಸೇವೆಯನ್ನು ಆರಂಭಿಸಿದೆ. ರಾಜಧಾನಿ ಬೆಂಗಳೂರಿನಿಂದ ಕೇರಳದ ವರೆಗೆ ಇನ್ನು ಐರಾವತ ವೋಲ್ವೋ ಬಸ್‌ಗಳು ಸಂಚರಿಸಲಿವೆ.

ಬೆಂಗಳೂರಿನಿಂದ ಶಬರಿಮಲೆಗೆ ಐರಾವತ, ವೋಲ್ವೋ ಬಸ್ ಸೇವೆ ಶುರು Read More »

ಕರ್ನಾಟಕ

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ

(ನ್ಯೂಸ್ ಕಡಬ) newskadaba.com ಡಿ. 02 ಕಡಬ. : ಕಡಬದ ಬಿಳಿನೆಲೆ ಗ್ರಾಮದ ಮುಂಗ್ಲಿ ಮಜಲು ನಿವಾಸಿ ಸಂದೀಪ್ (29) ಎಂಬವರು ಕಳೆದ ನ.27ರಿಂದ ನಾಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಕಡಬ ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಜೊತೆಗೆ ದೂರು ನೀಡಲು ಬಂದ ಸಂದೀಪ್ ಅವರ ತಾಯಿಯನ್ನೇ ಬೆದರಿಸಿ ಕಳುಹಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಮರ್ದಾಳದಲ್ಲಿ ವಿನಯ ಎಂಬವರ ಜೊತೆ ಶಾಮಿಯಾನ ಕೆಲಸ ಮಾಡಿಕೊಂಡಿದ್ದ ಸಂದೀಪ್, ನವೆಂಬರ್ ೨೭ರಿಂದ ನಾಪತ್ತೆಯಾಗಿದ್ದರು.

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 02. ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಬಸ್ತಿಯಂ ಪಾಯಿಸ್ ಬಹುಮಾನ ವಿತರಿಸಿ ಮಾತನಾಡಿದರು. ಪ್ರತಿಭೆಯನ್ನು ಪುರಸ್ಕರಿಸುವ ಮೂಲಕ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹೊರಹೊಮ್ಮಿಸಿ ಪೋಷಿಸುವ ಜವಾಬ್ದಾರಿ ವಿದ್ಯಾಸಂಸ್ಥೆಗಳ ಮೇಲಿದೆ; ಈ ಮೂಲಕ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ Read More »

ಕರಾವಳಿ

ಕಾಸರಗೋಡು: ಭಾರೀ ಮಳೆ ಮುನ್ಸೂಚನೆ- ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 02. ಭಾರೀ  ಮಳೆ ಮುನ್ಸೂಚನೆ ಹಾಗೂ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆಯಲ್ಲಿ ನಾಳೆ (3) ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ. ಪ್ರೊಪೇಶನಲ್ ಕಾಲೇಜು, ಟ್ಯೂಶನ್ ಕೇಂದ್ರ, ಅಂಗನವಾಡಿ, ಮದ್ರಸಗಳಿಗೆ ರಜೆ ಅನ್ವಯ ವಾಗಲಿದೆ. ಆದರೆ ಮೋಡಲ್ ರೆಶಿಡೆನ್ಶಿಯಲ್ ಶಾಲೆಗಳಿಗೆ ರಜೆ ಅನ್ವಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದೆ. ಮುಂದಿನ

ಕಾಸರಗೋಡು: ಭಾರೀ ಮಳೆ ಮುನ್ಸೂಚನೆ- ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ Read More »

ಕರಾವಳಿ

ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಡಿ. 02. ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ‌ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ಮಧ್ಯೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ

ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ Read More »

ಕರಾವಳಿ

OTS ಗಡುವು ಅಂತ್ಯ: BBMPಯಿಂದ ದಾಖಲೆಯ 4,284 ಕೋಟಿ ರೂ.ತೆರಿಗೆ ಸಂಗ್ರಹ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಶನಿವಾರ (ನ.30)ಕ್ಕೆ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ 4,284 ಕೋಟಿ ರೂ. ಆಸ್ತಿ ತೆರಿಗೆ ವಸೂಲಿಯಾಗಿದೆ. ಈ ಮೂಲಕ ಪಾಲಿಕೆಯೂ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. 2022-23ರಲ್ಲಿ 2,300 ಕೋಟಿ ರೂಪಾಯಿ ಮತ್ತು 2023-24ರಲ್ಲಿ 2293.81 ಕೋಟಿ ರೂಪಾಯಿಗಳನ್ನು ಪಾಲಿಕೆ ಸಂಗ್ರಹಿಸಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ

OTS ಗಡುವು ಅಂತ್ಯ: BBMPಯಿಂದ ದಾಖಲೆಯ 4,284 ಕೋಟಿ ರೂ.ತೆರಿಗೆ ಸಂಗ್ರಹ Read More »

ಕರ್ನಾಟಕ

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಏಪ್ರಿಲ್ 2- ವಿಜ್ಞಾನ ಪ್ರಸಕ್ತ ಸಾಲಿನ (2024-25) ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ

ದ್ವಿತೀಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ
Scroll to Top