ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರ ಶೇಖರ ಸ್ವಾಮೀಜಿ ಹೇಳಿಕೆಗೆ ಬುಧವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಸ್ವಾಮೀಜಿಗಳು ಇಂಥ ವಿವಾದಾತ್ಮಕ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರುವುದು […]

ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28.   ಚಲಿಸುತ್ತಿದ್ದ ಜೀಪ್‌ಗೆ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಸಂಚಾರ ವ್ಯವಸ್ಥೆಗೆ ತೊಡಕುಂಟುಮಾಡಿತ್ತು.  

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ Read More »

ಕರಾವಳಿ

ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಾಣ – ಇಲಾಖೆಗೆ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.   ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಿಸಲಾಗಿದೆ ಎಂದು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಅಜ್ಮೀರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾದಲ್ಲಿ ಶಿವ ದೇವಾಲಯವಿದೆ ಎಂದು ಅರ್ಜಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಅಜ್ಮೀರ್‌ನ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ಮತ್ತೆ ಸ್ಥಳದಲ್ಲಿ

ಶಿವ ದೇವಾಲಯದ ಮೇಲೆ ಅಜ್ಮೀರ್‌ ದರ್ಗಾ ನಿರ್ಮಾಣ – ಇಲಾಖೆಗೆ ಕೋರ್ಟ್‌ ನೋಟಿಸ್‌ Read More »

ರಾಷ್ಟ್ರೀಯ ನ್ಯೂಸ್

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ‌ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್ Read More »

ಕರ್ನಾಟಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 28.  ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಸಂಸತ್ತಿನಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ  ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ

ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 27. ಕ್ರೈಸ್ತ ಧರ್ಮಕ್ಷೇತ್ರ ಅಮೃತೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರದ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರವರು  “ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ” ಎಂದು ಮಾತನಾಡಿದರು. ಅಂಬೇಡ್ಕರ್ ರವರು ಸಂವಿಧಾನದಲ್ಲಿ ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ ಎಂದು ಹೇಳಿದ್ದಾರೆ. ಬೇರೆ ಧರ್ಮವನ್ನು ಸಹಿಸುವ ಸಹಿಷ್ಣುತೆ ಇರಬೇಕು. ಸ್ವಧರ್ಮ ಪಾಲನೆ ಮಾಡಿ ಅನ್ಯ ಧರ್ಮಕ್ಕೆ ಗೌರವ ನೀಡಬೇಕು. ಎಲ್ಲರನ್ನೂ

‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಆರೋಪಿಗಳ ಬಂಧನ – ಮೂರು ಪಿಸ್ತೂಲ್‌ಗಳು, ಕಾಟ್ರಿಡ್ಜ್‌ಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ನ. 27.  ಪಂಜಾಬ್‌ನ ಜಲಂಧರ್‌ನಲ್ಲಿ ಇಂದು ಬೆಳಿಗ್ಗೆ ಪೊಲೀಸರ ಚೇಸ್ ಮತ್ತು ಶೂಟೌಟ್‌ನಲ್ಲಿ ಕುಖ್ಯಾತ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ಮೂರು ಪಿಸ್ತೂಲ್‌ಗಳು ಮತ್ತು ಹಲವಾರು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆನ್ನಟ್ಟಿದ ವೇಳೆ ಶಂಕಿತರು ಪೊಲೀಸರತ್ತ ಗುಂಡು ಹಾರಿಸಿದ್ದು, ಪೊಲೀಸರು ಪ್ರತೀಕಾರವಾಗಿ ಗುಂಡು ಹಾರಿಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಸುಲಿಗೆ, ಕೊಲೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಡ್ರಗ್ಸ್ ಕಾನೂನು ಸೇರಿದಂತೆ ಹಲವು ಪ್ರಕರಣಗಳು

ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಆರೋಪಿಗಳ ಬಂಧನ – ಮೂರು ಪಿಸ್ತೂಲ್‌ಗಳು, ಕಾಟ್ರಿಡ್ಜ್‌ಗಳು ವಶಕ್ಕೆ Read More »

ಕರ್ನಾಟಕ

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ನ. 27.  ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕರ ಬಂಧನವಾಗಿರುವುದು ತೀರಾ ಕಳವಳಕಾರಿ ಸಂಗತಿಯಾಗಿದ್ದು, ಇದು ಅತ್ಯಂತ ಖಂಡನೀಯ ವಿಚಾರವಾಗಿದೆ ಎಂದು ಉಡುಪಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದ ಇಸ್ಕಾನ್ ಗುರು ಚಿಣ್ಮೊಯ್ ದಾಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಬಂಧಿಸಿದ ವಿಚಾರವನ್ನು ಅವರು ತೀವ್ರವಾಗಿ ಖಂಡಿಸಿ, ಮಾತನಾಡುತ್ತಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿ ಸಮರ್ಥನೀಯವಲ್ಲ. ಬಾಂಗ್ಲಾದೇಶ ಎಲ್ಲಾ ಧರ್ಮಯರಿಗೂ ಅವಕಾಶ

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ದಕ್ಷಿಣ ಕನ್ನಡ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು ವಿತರಿಸಲಾಗಿದೆ. ಚಂಪಾಷಷ್ಠಿ ಜಾತ್ರೆ ಆರಂಭಕ್ಕೂ ಮೊದಲು ಮೂಲ ಗರ್ಭಗುಡಿಯ ಹುತ್ತದಿಂದ ಮೃತಿಕೆ ಪ್ರಸಾದವನ್ನು ತೆಗೆಯಲಾಗುತ್ತದೆ. ಮೂಲ ಮೃತ್ತಿಕೆ ಪ್ರಸಾದಕ್ಕೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ಸರತಿಸಾಲಿನಲ್ಲಿ ನಿಂತು ಈ ಪ್ರಸಾದವನ್ನು ಸ್ವೀಕರಿಸಿದ್ದಾರೆ. ಕುಕ್ಕೆಯ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ನಡೆಯುತ್ತಿವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಪಥ ಬದಲಿಸಲಾಗಿತ್ತು. ಈ ಹಿನ್ನೆಲೆ ನ. 26ರ ಮಧ್ಯಾಹ್ನದ ವೇಳೆಗೆ ಸುಮಾರು 1 ಗಂಟೆಯ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದೆ. ಈ ಹಿನ್ನೆಲೆ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ. ಪರಿಣಾಮ ಇಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್ Read More »

ಕರಾವಳಿ
Scroll to Top