ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ […]

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್ ದಾಖಲು Read More »

ಕರ್ನಾಟಕ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27.  ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಮಂಗಳವಾರ ಬಿಜಿಎಸ್ ಸಭಾಂಗಣದಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ತಾಲೂಕಿನ ಯುವ ಉದ್ಯಮಿ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ಸಾಧಕರು ಪ್ರಶಸ್ತಿ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ Read More »

ಕರಾವಳಿ

ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ

(ನ್ಯೂಸ್ ಕಡಬ) newskadaba.com ಲಕ್ನೋ, ನ. 27.  ಡ್ರೈವಿಂಗ್‌ ವೇಳೆ ಚಾಲಕ ನಿದ್ದೆಗೆ ಜಾರಿದ ಪರಿಣಾಮವಾಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಐವರು ವೈದ್ಯರು ದುರ್ಮರಣಕ್ಕೀಡಾಗಿದ್ದಾರೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದವರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಲಕ್ನೋದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಲಾರಿಗೆ

ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ Read More »

ಬ್ರೇಕಿಂಗ್ ನ್ಯೂಸ್

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮಂಗನ ಕಾಯಿಲೆ ಅಥವಾ ಕ್ಯಾಸನೂರು ಕಾಡಿನ ಕಾಯಿಲೆ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಲಸಿಕೆ ತಯಾರಿಕೆ ಪ್ರಗತಿಯಲ್ಲಿದ್ದು, ಈ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಕೂಡ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗಳವಾರ ಆರೋಗ್ಯ ಸಚಿವ ದಿನೇಶ್

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್ Read More »

ಕರಾವಳಿ

ಚಿನ್ನದ ದರದಲ್ಲಿ ಕೊಂಚ: ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಏಕಾಏಕಿ ಇಳಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿನ ಏರಿಕೆ ಕಂಡಿದೆ (Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 25 ರೂ. ಮತ್ತು 27 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,105 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,751

ಚಿನ್ನದ ದರದಲ್ಲಿ ಕೊಂಚ: ಇಂದಿನ ಚಿನ್ನದ ದರ Read More »

ಕರ್ನಾಟಕ

ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣ ದಾಖಲಾಗಿಲ್ಲ: ಅದಾನಿ ಗ್ರೂಪ್‌ನಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 27.  ಭಾರತದ 2ನೇ ಅತಿ ದೊಡ್ಡ ಶ್ರೀಮಂತ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್‌ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಾಹಕ ವಿನೀತ್ ಜೈನ್ ಅವರ ವಿರುದ್ಧ ಅಮೆರಿಕದಲ್ಲಿ ಯಾವುದೇ ಲಂಚದ ಪ್ರಕರಣ ದಾಖಲಾಗಿಲ್ಲ ಎಂದು ಅದಾನಿ ಗ್ರೂಪ್ ಹೇಳಿದೆ. ಅದಾನಿ ಗ್ರೂಪ್‌ನ ಅಧೀನದಲ್ಲಿರುವ ಅದಾನಿ ಗ್ರೀನ್ ಕೂಡ ಅಮೆರಿಕದಲ್ಲಿ ಗೌತಮ್‌ ಅದಾನಿ ವಿರುದ್ದ ಕೇಳಿ ಬಂದ ಲಂಚದ ಆರೋಪವನ್ನು ನಿರಾಕರಿಸಿದೆ. ʼʼಗೌತಮ್ ಅದಾನಿ, ಸಾಗರ್ ಅದಾನಿ

ಗೌತಮ್ ಅದಾನಿ ವಿರುದ್ಧ ಲಂಚ ಪ್ರಕರಣ ದಾಖಲಾಗಿಲ್ಲ: ಅದಾನಿ ಗ್ರೂಪ್‌ನಿಂದ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು

ಪಾರ್ಕ್ ಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಬೆಂಗಳೂರಿನಲ್ಲೂ ನಿನ್ನೆ ಮಂಗಳವಾರದಿಂದ ಮೋಡ ಕವಿದ ವಾತಾವರಣವಿದೆ.ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಚಳಿಯ ಜೊತೆ ಮಳೆಯ ಮುನ್ಸೂಚನೆಯಿದೆ. ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್​​ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್​ ಅಲರ್ಟ್​ ನೀಡಿದೆ. ಜೊತೆಗೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ Read More »

ಕರ್ನಾಟಕ

ಆದಿವಾಸಿಗಳಿಗೆ ಮೂಲಸೌಕರ್ಯ, ಆಸ್ತಿ ಪತ್ರ ಒದಗಿಸಬೇಕು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು. ಸಚಿವ ಈಶ್ವರ ಬಿ ಖಂಡ್ರೆ ಮತ್ತು ಇತರ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ಆದಿವಾಸಿಗಳಿಗೆ ಸೂಕ್ತ ವಸತಿ, ಕುಡಿಯುವ ನೀರು, ನೈರ್ಮಲ್ಯ, ರಸ್ತೆ ಸಂಪರ್ಕ ಮತ್ತು ವಿದ್ಯುತ್ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಅರಣ್ಯದ ಅಂಚಿನಲ್ಲಿರುವ

ಆದಿವಾಸಿಗಳಿಗೆ ಮೂಲಸೌಕರ್ಯ, ಆಸ್ತಿ ಪತ್ರ ಒದಗಿಸಬೇಕು: ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ

ನವಜಾತ ಶಿಶುವನ್ನು ಅಪಹರಿಸಿದ 36 ಗಂಟೆಯಲ್ಲಿ ಮತ್ತೆ ತಾಯಿ ಮಡಿಲು ಸೇರಿದೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 27. ಕಲಬುರ್ಗಿಯ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರಿದೆ. ಜೊತೆಗೆ ಮಗುವನ್ನು ಕಳ್ಳತನ ಮಾಡಿ 50,000ಕ್ಕೆ ಮಾರಾಟ ಮಾಡಿದ್ದ ಮೂವರು ಕಳ್ಳಿಯರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಎಂಎಸ್‌ಕೆಮಿಲ್ ಬಡಾವಣೆಯಲ್ಲಿ ಉಮೇರಾ, ನಸರೀನ್ ಹಾಗೂ ಫಾತಿಮಾ ಬಂಧಿತರು. ಬಂಧಿತರು ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಮಗುವನ್ನು

ನವಜಾತ ಶಿಶುವನ್ನು ಅಪಹರಿಸಿದ 36 ಗಂಟೆಯಲ್ಲಿ ಮತ್ತೆ ತಾಯಿ ಮಡಿಲು ಸೇರಿದೆ Read More »

ಕರ್ನಾಟಕ
Scroll to Top